ಹೆಚ್‌ಡಿಕೆಗೆ ಅನಾರೋಗ್ಯ, ಚುನಾವಣಾ ಪ್ರಚಾರ ಕಾರ್ಯಕ್ರಮಗಳು ದಿಢೀರ್ ರದ್ದು!
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯಕ್ಕೀಡಾಗಿದ್ದಾರೆ. ನಿವಾಸದಲ್ಲೇ ವಿಶ್ರಾಂತಿ ಪಡೆಯುತ್ತಿರುವ ಅವರು ಯಾರ ಭೇಟಿಗೂ ಅವಕಾಶ ನೀಡುತ್ತಿಲ್ಲ.
ಬೆಂಗಳೂರು (ಏ.22): ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯಕ್ಕೀಡಾಗಿದ್ದಾರೆ. ನಿರಂತರ ಪ್ರಚಾರದಿಂದ ಬಳಲಿರುವ ಹೆಚ್‌ಡಿಕೆ ಜ್ವರದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅನಾರೋಗ್ಯದ ಹಿನ್ನೆಲೆ ಜೆ.ಪಿ.ನಗರದ ನಿವಾಸದಲ್ಲೇ ಕುಮಾರಸ್ವಾಮಿ ಚಿಕಿತ್ಸೆ ಪಡೆದಿದ್ದಾರೆ. ಹೀಗಾಗಿ ಇಂದು ಕುಮಾರಸ್ವಾಮಿಯವರ ಎಲ್ಲಾ ಚುನಾವಣಾ ಪ್ರಚಾರ ಕಾರ್ಯಕ್ರಮಗಳು ದಿಢೀರ್ ರದ್ದಾಗಿದೆ. ಮಾತವಲ್ಲ ಯಾರನ್ನೂ ಕೂಡ ಭೇಟಿ ಮಾಡಲು ಕುಮಾರಸ್ವಾಮಿ ನಿರಾಕರಿಸಿದ್ದು, ಮನೆಯಲ್ಲೇ ಇದ್ದು ರೆಸ್ಟ್ ಮಾಡುತ್ತಿದ್ದಾರೆ.
ಪುತ್ರನ ಪರ ತಂದೆಯಿಂದ ಎಲೆಕ್ಷನ್ ಕ್ಯಾಂಪೇನ್ ರದ್ದು:
ಇನ್ನು ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು ಹೆಚ್ ಡಿಕ ಕುಮಾರಸ್ವಾಮಿ ಪ್ರಚಾರ ಮಾಡಬೇಕಿತ್ತು. ರಾಮನಗರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಬೇಕಿತ್ತು. ಪುತ್ರನ ಗೆಲುವಿಗಾಗಿ ತಾಲೂಕಿನ ಹಾಗಲಹಳ್ಳಿ, ಗುಡ್ಡದಹಳ್ಳಿ, ಸುಗ್ಗನಹಳ್ಳಿ, ಬಿಳಗುಂಬ, ಮಾಯಗಾನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕ್ಯಾಂಪೇನ್ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಅನಾರೋಗ್ಯದ ಕಾರಣ ಕುಮಾರಸ್ವಾಮಿ ಭಾಗವಹಿಸುತ್ತಿಲ್ಲ.
ನಾನು ಭೂತನೂ ಅಲ್ಲ ಪಿಶಾಚಿಯೂ ಅಲ್ಲ, ವರುಣಾದಲ್ಲಿ ಸಿದ್ದರಾಮಯ್ಯ ನಿರಂತರ
ಚುನಾವಣೆ ಹಿನ್ನೆಲೆ ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ಪರಿಶೀಲನೆ ಕೂಡ ಮುಗಿದಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.
ವರುಣಾ ಚಕ್ರವ್ಯೂಹದಲ್ಲಿ ಸಿಲುಕಿದ್ರಾ ಸಿದ್ದರಾಮಯ್ಯ.. ಅಬ್ಬರಿಸಿ ಬೊಬ್ಬಿರಿದ ಸಿದ್ದು