Asianet Suvarna News Asianet Suvarna News

'ಇನ್ನೊಬ್ಬರ ಕಣ್ಣೀರಿನ ಬಗ್ಗೆ ಇದೆಂಥಾ ವಿಕಾರ? ಇದೇನಾ ಸಂಘ ಕಲಿಸಿದ ಸಂಸ್ಕಾರ?'

ಇನ್ನೊಬ್ಬರ ಕಣ್ಣೀರಿನ ಬಗ್ಗೆ ಇದೆಂಥಾ ವಿಕಾರ? ಇದೇನಾ ಸಂಘ ಕಲಿಸಿದ ಸಂಸ್ಕಾರ? ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

HD Kumaraswamy Hits Back at BJP Over Mocks On Tears rbj
Author
Bengaluru, First Published Aug 2, 2022, 4:20 PM IST

ಬೆಂಗಳೂರು,(ಆಗಸ್ಟ್.02): ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಎಚ್‌ಡಿ ರೇವಣ್ಣ ಅವರ ಕಣ್ಣೀರಿಗೆ ಬಿಜೆಪಿ ವ್ಯಂಗ್ಯವಾಡಿದೆ. ಇದೀಗ ಇದಕ್ಕೆ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ನಾಗಮಂಗಲದಲ್ಲಿ ನಡೆದ ಜೆಡಿಎಸ್‌ ಸಮಾವೇಶ ವೀಕ್ಷಿಸುತ್ತಿರುವ ವಿಡಿಯೋ ಕಂಡು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭಾವುಕರಾಗಿ ಕಣ್ಣೀರಿಟ್ಟರು. ಇದಕ್ಕೆ ಬಿಜೆಪಿ ಲೇವಡಿ, ವ್ಯಂಗ್ಯವಾಡಿತ್ತು. ಇದಕ್ಕೆ ಎಚ್‌ಡಿಕೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಇಂದು(ಮಂಗಳವಾರ) ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ವಿಲಕ್ಷಣ, ವಿಕೃತ, ಭೀಭತ್ಸ ಹಾಗೂ ಅಪರೇಷನ್‌ ಕಮಲವನ್ನೇ ನೆಚ್ಚಿಕೊಂಡ ವಿನಾಶಕಾರಿ ಪಕ್ಷವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ದೇವೇಗೌಡರ ಆರೋಗ್ಯ ನೆನೆದು ಸಮಾವೇಶದಲ್ಲಿ ಎಚ್‌ಡಿಕೆ ಕಣ್ಣೀರು! 

ನಾಗಮಂಗಲದ ಜೆಡಿಎಸ್ ಸಮಾವೇಶವನ್ನು ನಮ್ಮ ತಂದೆಯವರು ಬೆಂಗಳೂರಿನ ನಿವಾಸದಿಂದಲೇ ನೇರ ವೀಕ್ಷಣೆ ಮಾಡಿದ ಕ್ಷಣದಲ್ಲಿ ನಾನು, ನನ್ನ ಸಹೋದರ, ಅಲ್ಲಿದ್ದವರೆಲ್ಲರೂ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದನ್ನು ಬಿಜೆಪಿ ವಿಕೃತವಾಗಿ ತಿರುಚಿದೆ. ಇನ್ನೊಬ್ಬರ ಕಣ್ಣೀರಿನ ಬಗ್ಗೆ ಇದೆಂಥಾ ವಿಕಾರ? ಇದೇನಾ ಸಂಘ ಕಲಿಸಿದ ಸಂಸ್ಕಾರ? ಛೇ! ಎಂದು ವಾಗ್ದಾಳಿ ನಡೆಸಿದ್ದಾರೆ.

ಕಗ್ಗೊಲೆಗಳೇ ಅದರ ಕಸುಬು, ಬಡ ಯುವಕರ ರಕ್ತವೇ ಅದರ ಪಾಲಿನ 'ಅಧಿಕಾರಾಮೃತʼ. ಅದೆಷ್ಟು ಹೆತ್ತ ಕರುಳುಗಳು ಕಣ್ಣೀರಿಡುತ್ತಿವೆ. ಅದಕ್ಕೆ ಉತ್ತರ ಕೊಡುವ ನೈತಿಕತೆ ಇದೆಯಾ? ಆಮೇಲೆ ನನ್ನ ಕಣ್ಣೀರ ಬಗ್ಗೆ ಮಾತನಾಡಿ. ನಾನು ಇನ್ನೊಬ್ಬರ ಕಣ್ಣೀರಿನ ಬಗ್ಗೆ, ಭಾವೋದ್ವೇಗದ ಕುರಿತು ಲಘುವಾಗಿ ಮಾತನಾಡಲಾರೆ. ಆದರೂ ವಿಕೃತಿ ಬಿಜೆಪಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ. ಅಧಿಕಾರ ಹೋಗುತ್ತದೆ ಎಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‍ನಲ್ಲಿ ವಿದಾಯ ಭಾಷಣ ಮಾಡುತ್ತಾ ವೇದಿಕೆಯ ಮೇಲೆಯೇ ಕಣ್ಣೀರಧಾರೆ ಹರಿಸಿದವರು ಯಾವ ಪಕ್ಷದವರು?' ಎಂದು ಪ್ರಶ್ನಿಸಿದ್ದಾರೆ.

ಪ್ರವಾಹಕ್ಕೆ ತುತ್ತಾಗಿ ಸತ್ತವರ ಬಗ್ಗೆ ಹನಿ ಕಂಬನಿ ಇಲ್ಲ, ಪಾತಕ ರಾಜಕೀಯಕ್ಕೆ ನಡುರಸ್ತೆಗಳಲ್ಲಿ ಕೊಲೆಯಾದ ಯುವಕರ ಬಗ್ಗೆ ಎಳ್ಳಷ್ಟು ಕರುಣೆ ಇಲ್ಲ. ಬಣ್ಣದ ಮಾತು, ಕೃತಕ ಸಾಂತ್ವನ!! ಆದರೂ, ಸಿನಿಮಾದಲ್ಲಿ ನಾಯಿ ಸತ್ತ ದೃಶ್ಯ ನೋಡಿ ಮಾಧ್ಯಮಗಳ ಮುಂದೆ ಗಳಗಳನೇ ಕಣ್ಣೀರಕೋಡಿ ಹರಿಸಿದ ಮಹಾಶಯರು ಯಾವ ಪಕ್ಷದ ಮುಖ್ಯಮಂತ್ರಿಗಳು? ಸ್ವಲ್ಪ ಹೇಳಿ? 

ಪ್ರವಾಹಕ್ಕೆ ತುತ್ತಾಗಿ ಸತ್ತವರ ಬಗ್ಗೆ ಹನಿ ಕಂಬನಿ ಇಲ್ಲ, ಪಾತಕ ರಾಜಕೀಯಕ್ಕೆ ನಡುರಸ್ತೆಗಳಲ್ಲಿ ಕೊಲೆಯಾದ ಯುವಕರ ಬಗ್ಗೆ ಎಳ್ಳಷ್ಟು ಕರುಣೆ ಇಲ್ಲ. ಬಣ್ಣದ ಮಾತು, ಕೃತಕ ಸಾಂತ್ವನ!! ಆದರೂ, ಸಿನಿಮಾದಲ್ಲಿ ನಾಯಿ ಸತ್ತ ದೃಶ್ಯ ನೋಡಿ ಮಾಧ್ಯಮಗಳ ಮುಂದೆ ಗಳಗಳನೇ ಕಣ್ಣೀರಕೋಡಿ ಹರಿಸಿದ ಮಹಾಶಯರು ಯಾವ ಪಕ್ಷದ ಮುಖ್ಯಮಂತ್ರಿಗಳು? ಸ್ವಲ್ಪ ಹೇಳಿ? ಹೌದು. ಅಳುವೇ ನಮ್ಮ ಸಹಜ ಧರ್ಮ. ಆದರೆ ನಿಮ್ಮಂತೆ ಇನ್ನೊಬ್ಬರನ್ನು ಅಳಿಸುವ ರಾವಣ ಸಂಸ್ಕೃತಿಯಲ್ಲ. ಬದುಕಿಗೆ ಬೆಂಕಿ ಇಡಲ್ಲ. ಮತ್ತೊಬ್ಬರ ಮಕ್ಕಳ ಸಾವಿನಿಂದ ಉನ್ಮಾದಗೊಂಡು ರಣಕೇಕೆ ಹಾಕುತ್ತಿಲ್ಲ. ಹಿಂಸೆ, ಕಗ್ಗೊಲೆಯೇ ನಿಮ್ಮ ಧರ್ಮ, ಹೌದಲ್ಲವೇ? ಕೊಲೆಗಳನ್ನೇ ಸೋಪಾನ ಮಾಡಿಕೊಂಡು 'ಕಾಶಿ ಕಾರಿಡಾರುʼ ಮಾಡಿ ಮೆರೆದರೆ ಆ ಶಿವ ಮೆಚ್ಚಾನೆಯೇ?' ಎಂದು ಎಚ್‍ಡಿಕೆ ಕುಟುಕಿದ್ದಾರೆ.

ನಮ್ಮ #ಜನತಾ_ಜಲಧಾರೆ ನಿಮ್ಮನ್ನು ವಿಚಲಿತಗೊಳಿಸಿದೆ ಎನ್ನುವುದಕ್ಕೆ ನಿಮ್ಮ ಈ ವ್ಯರ್ಥ ಪ್ರಲಾಪವೇ ಸಾಕ್ಷಿ. ಇಡೀ ರಾಜ್ಯವೇ ಕಣ್ಣೀರಧಾರೆಯಲ್ಲಿ ಕೈತೊಳೆಯುತ್ತಿದೆ. ಮಾಧ್ಯಮಗಳಲ್ಲಿ ಕರ್ನಾಟಕವೇ ತೇಲುತ್ತಿರುವ ದೃಶ್ಯಗಳು ಕಣ್ಣಿಗೆ ಕಾಣುತ್ತಿಲ್ಲವೇ? ನೆರೆ ಸೃಷ್ಟಿಸಿದ ಭೀಭತ್ಸತೆ ಬಿಜೆಪಿಗೆ ಕಾಣತ್ತಿಲ್ಲವೇಕೆ?

'ನಮ್ಮ #ಜನತಾ_ಜಲಧಾರೆ ನಿಮ್ಮನ್ನು ವಿಚಲಿತಗೊಳಿಸಿದೆ ಎನ್ನುವುದಕ್ಕೆ ನಿಮ್ಮ ಈ ವ್ಯರ್ಥ ಪ್ರಲಾಪವೇ ಸಾಕ್ಷಿ. ಇಡೀ ರಾಜ್ಯವೇ ಕಣ್ಣೀರಧಾರೆಯಲ್ಲಿ ಕೈತೊಳೆಯುತ್ತಿದೆ. ಮಾಧ್ಯಮಗಳಲ್ಲಿ ಕರ್ನಾಟಕವೇ ತೇಲುತ್ತಿರುವ ದೃಶ್ಯಗಳು ಕಣ್ಣಿಗೆ ಕಾಣುತ್ತಿಲ್ಲವೇ? ನೆರೆ ಸೃಷ್ಟಿಸಿದ ಭೀಭತ್ಸತೆ ಬಿಜೆಪಿಗೆ ಕಾಣತ್ತಿಲ್ಲವೇಕೆ? ಸಾಯಿ ಲೇಔಟ್‌ ಪುನಾ ತೇಲುತ್ತಿದೆ. ಅರ್ಕಾವತಿ ಲೇಔಟ್‌ ಪಕ್ಕದ ಆರ್ತನಾದ ಕೇಳುತ್ತಿಲ್ಲವೆ ಬಿಜೆಪಿಗರೇ? ಬೆಂಗಳೂರಿನ ಬಹುತೇಕ ಪ್ರದೇಶಗಳು ಜಲಾವೃತವಾಗಿ ದ್ವೀಪಗಳಾಗಿವೆ. ಅಲ್ಲಿ ಹರಿಯುತ್ತಿರುವುದು ನಿಜಕ್ಕೂ ಜನರ ಕಣ್ಣೀರಧಾರೆ. 'ಕೊಮುಪೊರೆʼಯ ಅಮಲಿನಲ್ಲಿ ಮುಚ್ಚಿಹೋಗಿರುವ ನಿಮ್ಮ ಕಣ್ಣುಗಳಿಗೆ ಜನರ ಕಣ್ಣೀರು ಕಾಣುವುದಿಲ್ಲ ಅಲ್ಲವೇ?' ಅಂತಾ ಪ್ರಶ್ನಿಸಿದ್ದಾರೆ.

ಸರಣಿ ಕಗ್ಗೊಲೆಗಳು,ಆಚಾರ,ವಿಚಾರ,ವ್ಯಾಪಾರ,ಉಡುಗೆ-ತೊಡುಗೆ; ಅಷ್ಟೇ ಏಕೆ? ತಿನ್ನುವ ಅನ್ನದಲ್ಲೂ ನಿಮ್ಮ ವಿಕೃತಿ ಮೆರೆದಿದೆ. ತಂದೆ-ಮಕ್ಕಳ ಬಾಂಧವ್ಯದ ಬಗ್ಗೆ ವಿಕೃತಿ ತೋರುವ ನಿಮಗೆ, ಬಾಂಧವ್ಯಗಳ ಬಗ್ಗೆ ಜನರೇ ಪಾಠ ಕಲಿಸುವ ದಿನ ಹತ್ತಿರದಲ್ಲಿದೆ.
ನಾವು ಮುಳುಗುವುದು, ತೇಲುವುದು ಆಮೇಲೆ. ನಿಮ್ಮನ್ನು ಜನ ಮುಳುಗಿಸಿಬಿಟ್ಟಾರು! ಎಚ್ಚರಿಕೆ ಎಂದು ಟ್ವೀಟ್ ಮಾಡಿದದಾರೆ.

 

Follow Us:
Download App:
  • android
  • ios