Asianet Suvarna News Asianet Suvarna News

'ಇಂಗ್ಲಿಷ್‌ ಬಾರದೆಂಬ ವಿನಂತಿಯೋ ಅಥವಾ ಹಿಂದಿ ಹೇರಬೇಕೆಂಬ ನಾಚಿಕೆ ಇಲ್ಲದ ಉತ್ಸಾಹವೋ'?

ಹಿಂದಿ ಭಾಷೆ ಮಾತನಾಡಲು ಆಗದವರು ತರಬೇತಿಯಿಂದ ಹೊರ ನಡೆಯಬಹುದು ಎಂದಿದ್ದ ಆಯುಷ್‌ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಆಕ್ರೋಶ ಹೊರಹಾಕಿದ್ದಾರೆ.

hd kumaraswamy Hits out at AYUSH ministry Secretary Over His Hindi statement
Author
Bengaluru, First Published Aug 23, 2020, 2:35 PM IST

ಬೆಂಗಳೂರು, (ಆ.23) :  ಆಯುಷ್ ಇಲಾಖೆ ಆಯೋಜಿಸಿದ್ದ ವರ್ಚುವಲ್ ತರಬೇತಿಯಲ್ಲಿ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ 'ಹಿಂದಿ ಮಾತನಾಡಲು ಆಗದವರು ತರಬೇತಿಯಿಂದ ಹೊರನಡೆಯಬಹುದು. ನನಗೆ ಚೆನ್ನಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ,' ಎಂದು ಹೇಳಿರುವುದು ತಿಳಿಯಿತು. ಇದೇನು ಇಂಗ್ಲಿಷ್‌ ಬಾರದೆಂಬ ವಿನಂತಿಯೋ ಅಥವಾ ಹಿಂದಿ ಹೇರಬೇಕು ಎಂಬ ನಾಚಿಕೆ ಇಲ್ಲದ ಉತ್ಸಾಹವೋ? ಎಂದು ಟೀಕಿಸಿದ್ದಾರೆ.

ಹಿಂದಿ ಭಾಷೆ ಮಾತನಾಡಲು ಆಗದವರು ತರಬೇತಿಯಿಂದ ಹೊರ ನಡೆಯಬಹುದು ಎನ್ನುವ ಆಯುಷ್‌ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ ಹೇಳಿಕೆಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸರಣಿ ಟ್ವೀಟ್​ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿ ಗೊತ್ತಿಲ್ಲದವರು ಹೊರ ಹೋಗಬಹುದು: ಆಯುಷ್ ಸಚಿವನ ಹೇಳಿಕೆ, ಭುಗಿಲೆದ್ದ ಆಕ್ರೋಶ!

ಸಂವಿಧಾನ ಬದ್ಧ 'ಒಕ್ಕೂಟ ವ್ಯವಸ್ಥೆ' ಎಂಬುದು ಈ ದೇಶದ ಒಗ್ಗಟ್ಟಿನ ಮಂತ್ರ. ಇಲ್ಲಿನ ಪ್ರತಿ ಭಾಷೆಗಳೂ ಒಕ್ಕೂಟ ವ್ಯವಸ್ಥೆಯ ಭಾಗವಾಗಿವೆ. ಹೀಗಿರುವಾಗ, ಹಿಂದಿ ಮಾತನಾಡಲು ಬಾರದ ಕಾರಣಕ್ಕೆ ತರಬೇತಿ ಕಾರ್ಯಕ್ರಮದಿಂದ ಹೊರ ಹೋಗಿ ಎಂಬುದು ಒಕ್ಕೂಟ ವ್ಯಸ್ಥೆಯ ಉಲ್ಲಂಘನೆಯಲ್ಲವೇ? ಸಂವಿಧಾನ ವಿರೋಧಿ ನಡೆಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಹಿಂದಿ ಬಾರದೆಂಬ ಕಾರಣಕ್ಕೆ ಕನ್ನಡಿಗರೂ ಸೇರಿದಂತೆ ಮಿಕ್ಕೆಲ್ಲ ಭಾಷೆಗಳ ಜನ ಈ ದೇಶದಲ್ಲಿ ಇನ್ನೆಷ್ಟು ತ್ಯಾಗ ಮಾಡಬೇಕು? ಹಿಂದಿ ಶ್ರೇಷ್ಠತೆಯ ಗೀಳಿನಲ್ಲಿರುವ ಆಯುಷ್‌ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ ಅವರ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳ ಬೇಕು. ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು ಎಂದು ಆಗ್ರಹಿಸಿದ್ದಾರೆ.

Follow Us:
Download App:
  • android
  • ios