Asianet Suvarna News Asianet Suvarna News

ರಸಗೊಬ್ಬರ ದರ ಏರಿಕೆ: ಸಚಿವ ಸದಾನಂದಗೌಡ್ರಿಗೆ ಮಹತ್ವದ ಸಲಹೆ ಕೊಟ್ಟ ಕುಮಾರಸ್ವಾಮಿ!

ರಸಗೊಬ್ಬರದ ದರ ಏರಿಕೆ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.

HD Kumaraswamy Hits out at BJP Govt Over fertilizers price hike rbj
Author
Bengaluru, First Published Apr 11, 2021, 3:05 PM IST

ಬೆಂಗಳೂರು, (ಏ.11): ಕೇಂದ್ರ ಸರ್ಕಾರ ರಸಗೊಬ್ಬರದ ದರ ಏರಿಕೆ ಮಾಡಿದ್ದರಿಂದ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
 
ರಸಗೊಬ್ಬರ ದರ ಏರಿಕೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್‌ಡಿಕೆ,  ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ್ದ ಬಿಜೆಪಿ ಸರಕಾರ, ರೈತರ ಬಗ್ಗೆ ಮೃದು ಮಾತಾಡುತ್ತಲೇ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ. ಇದೀಗ ರಸಗೊಬ್ಬರ ದರವನ್ನು ಶೇಕಡ 60ರಷ್ಟು ಹೆಚ್ಚಳ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸಗೊಬ್ಬರ ಭಾರಿ ದುಬಾರಿ : ರೈತರಿಗೆ ದೊಡ್ಡ ಶಾಕ್‌

ಕೇಂದ್ರದ ರಸಗೊಬ್ಬರ ಸಚಿವ ಡಿವಿ ಸದಾನಂದ ಗೌಡರು ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳ ಜತೆ ಸಭೆ ನಡೆಸುವುದರಿಂದ ಈ ಸಮಸ್ಯೆ ಬಗೆಹರಿಯುವುದಿಲ್ಲ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಬಾರದು. ಸದಾನಂದ ಗೌಡರು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮಾತನಾಡಿ ರಸಗೊಬ್ಬರಕ್ಕಾಗಿ ನೀಡುತ್ತಿದ್ದ 1.5ಲಕ್ಷ ಕೋಟಿಯಷ್ಟು ಸಬ್ಸಿಡಿ ಮುಂದುವರೆಸುವಂತೆ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಬಾಯಿ ಮಾತಿನಿಂದ ರೈತರ ಬಾಳು ಬೆಳಗಲು ಸಾಧ್ಯವಿಲ್ಲ. ರೈತರ ಮತಗಳ ಮೇಲೆ ಕಣ್ಣಿಟ್ಟು ಎಷ್ಟು ದಿನ ಸುಳ್ಳಿನ ಅರಮನೆ ಕಟ್ಟುತ್ತೀರಿ? ಇನ್ನಾದರೂ ರೈತರಿಗೆ ಸಹನೀಯ ಬದುಕು ಕಟ್ಟಿಕೊಳ್ಳಲು ಅವಕಾಶ ಕೊಡಿ. ರಸಗೊಬ್ಬರದ ಮೇಲಿನ ದರ ಹೆಚ್ಚಳ ವಾಪಸ್ ಪಡೆಯಿರಿ ಎಂದು ಆಗ್ರಹಿಸಿದ್ದಾರೆ.

Follow Us:
Download App:
  • android
  • ios