ಎಲ್ಲಾ ವಿಷಯದಲ್ಲೂ ಕೇಂದ್ರದ ತಾರತಮ್ಯ ಮುಂದುವರೆದಿದೆ: ಎಚ್‌ಡಿಕೆ ಕೆಂಡಾಮಂಡಲ

* ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ
* ಎಲ್ಲಾ ವಿಷಯದಲ್ಲೂ ಕೇಂದ್ರದ ತಾರತಮ್ಯ ಮುಂದುವರೆದಿದೆ ಎಂದ ಎಚ್‌ಡಿಕೆ
* ಕೇಂದ್ರ ಸರ್ಕಾರವನ್ನು ದೂರಿದ ಕುಮಾರಸ್ವಾಮಿ

HD Kumaraswamy Hits out at Karnataka and Union Govt Over Corona Black Fungus rbj

ಬೆಂಗಳೂರು,( ಮೇ 22): ರಾಜ್ಯದಲ್ಲಿ ಕೊರೋನಾ ನಡುವೆ ಬ್ಲ್ಯಾಕ್‌ ಫಂಗಸ್ ಪ್ರಕರಣಗಳು ಪತ್ತೆಯಾಗುತ್ತಿವೆ. ಇಂಥ ಸಮಯದಲ್ಲಿ ರಾಜ್ಯ ಸರ್ಕಾರ ಶೀಘ್ರವೇ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸದಾ ತಾರತಮ್ಯ ಮಾಡುತ್ತದೆ. ರಾಜ್ಯದಲ್ಲಿ ಒಬ್ಬ ಕೋವಿಡ್‌ ರೋಗಿಗೆ ಲಭ್ಯವಿರುವ ಆಮ್ಲಜನಕ 1.90 ಲೀಟರ್‌. ಗುಜರಾತ್‌ನಲ್ಲಿ ಪ್ರತಿ ರೋಗಿಗೆ 10.95 ಲೀಟರ್‌ ಸಿಗುತ್ತಿದೆ. ಆದರೆ, ಅಲ್ಲಿಗಿಂತ ಹೆಚ್ಚು ಪ್ರಕರಣಗಳಿರುವುದು ನಮ್ಮಲ್ಲಿ. ಇದು ಕೇಂದ್ರದ ಆಕ್ಸಿಜನ್ ಮೋಸ. ಕಪ್ಪು ಶಿಲೀಂಧ್ರ ಔಷಧದಲ್ಲೂ ಇದು ಮುಂದುವರಿಯುತ್ತಿದೆ ಎಂದು ಕೇಂದ್ರ ಸರ್ಕಾರವನ್ನು ದೂರಿದರು.

'ಸಿಎಂ, ಆರೋಗ್ಯ ಸಚಿವ ಸುಧಾಕರ್ ಸುಳ್ಳುಗಳಿಗೆ ಈ ಸುತ್ತೋಲೆ ಸಾಕ್ಷಿ' 

ಈ ಸೋಂಕಿನ ಚಿಕಿತ್ಸೆಗೆ ಬೇಕಿರುವ ಆಂಫೋಟೆರಿಸಿನ್ ಬಿ ಔಷಧಕ್ಕಾಗಿ ರಾಜ್ಯ ಕೇಂದ್ರದತ್ತ ನೊಡುತ್ತಿದೆ. ಮುಂದಿನ ದಿನಗಳಲ್ಲಿ ಔಷಧ ನೀಡುವುದಾಗಿ ಕೇಂದ್ರ ಹೇಳಿದೆ. ಆದರೆ ಇತರ ರಾಜ್ಯಗಳು ಈಗಾಗಲೇ ಖಾಸಗಿ ಸಂಸ್ಥೆಗಳಿಂದ ಖರೀದಿ ಪ್ರಕ್ರಿಯೆ ಆರಂಭಿಸಿವೆ. ಮಾರಕ ರೋಗದ ವಿಚಾರದಲ್ಲಿ ರಾಜ್ಯಕ್ಕೇಕೆ ಇಷ್ಟು ಆಲಸ್ಯ? ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

 'ರಾಕ್ಷಸ ಆಲಸ್ಯ'ದಲ್ಲಿರುವ ಹೊತ್ತಲ್ಲೇ ತೆಲಂಗಾಣ ಸರ್ಕಾರ ಆಂಫೋಟೆರಿಸಿನ್ ಬಿ ಔಷಧ ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಔಷಧ ಪೂರೈಸಲು ಕೋರಿದೆ. ಇದರ ಮಾಹಿತಿ ನನಗಿದೆ. ಇದು ರೋಗದ ವಿರುದ್ಧ ಸರ್ಕಾರವೊಂದು ವರ್ತಿಸುವ ರೀತಿ ಮತ್ತು ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿ. ಆದರೆ, ಕನ್ನಡಿಗರ ಮೇಲೆ ಬಿಜೆಪಿ ಸರ್ಕಾರಕ್ಕೆ ಏಕಿಲ್ಲ ಕಾಳಜಿ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಪ್ರತಿ ವಾರ 400 ಮಂದಿ ಕಪ್ಪು ಶಿಲೀಂಧ್ರ ರೋಗಕ್ಕೆ ಗುರಿಯಾಗುವುದಾಗಿ ತಜ್ಞರು ಹೇಳಿದ್ದಾರೆ. ಈ ಸಂಖ್ಯೆ ಹೆಚ್ಚಲೂಬಹುದು. ಇಲ್ಲಿ ಗಮನಿಸಬೇಕಾದ್ದೇನೆಂದರೆ, ಈ ಕಾಯಿಲೆಗೆ ಮೊದಲ 2 ದಿನಗಳಲ್ಲೇ ಸೂಕ್ತ ಚಿಕಿತ್ಸೆ ನೀಡಬೇಕು. ಇಲ್ಲವಾದರೆ, ಸಾವು ತರುವ ರೋಗವಾಗಿ ಇದು ಪರಿಣಮಿಸುತ್ತದೆ. ಆದರೆ, ರಾಜ್ಯ ಸರ್ಕಾರ ಇದಕ್ಕೆ ಔಷಧ ಹೊಂದಿಸಿದೆಯೇ? ಎಂದು ಪ್ರಶ್ನಿಸಿದ್ದಾರೆ.

Latest Videos
Follow Us:
Download App:
  • android
  • ios