Asianet Suvarna News Asianet Suvarna News

ಕೇಂದ್ರ ಸರ್ಕಾರದ ಪ್ರಚಾರದ ಬಗ್ಗೆ ಕುಮಾರಸ್ವಾಮಿ ಕೆಂಡಾಮಂಡಲ

ಬೆಂಗಳೂರು ಮೆಟ್ರೋ ಅನುದಾನದ ಸಂಬಂಧ ಕೇಂದ್ರ ಸರ್ಕಾರ ನೀಡಿರುವ ಜಾಹಿರಾತಿನ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.​ ಡಿ ಕುಮಾರಸ್ವಾಮಿ ಧ್ವನಿ ಎತ್ತಿದ್ದಾರೆ. 

HD Kumaraswamy Hits out at Modi Govt rbj
Author
Bengaluru, First Published Apr 22, 2021, 3:27 PM IST

ಬೆಂಗಳೂರು, (ಏ.22): ಕೇಂದ್ರ ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು  ಎಂದು ಮಾಜಿ ಮುಖ್ಯಮಂತ್ರಿ ಎಚ್.​ ಡಿ ಕುಮಾರಸ್ವಾಮಿ  ಎಂದು ಕಿಡಿಕಾರಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್​ ಮಾಡಿ ತಮ್ಮ ಆಕ್ರೋಶವನ್ನ ಹೊರಹಾಕಿರುವ ಕುಮಾರಸ್ವಾಮಿ, ಕೊರೋನಾ ವೈರಸ್​್​ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ, ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂಧರ್ಭದಲ್ಲಿ ರಾಜ್ಯಸರ್ಕಾರ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲಾ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತನ್ನ ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ, ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿಗರಿಗೆ ಗುಡ್ ನ್ಯೂಸ್: ಮೆಟ್ರೋ 2A, 2B ಹಂತದ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ

ಕೊರೊನಾ ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ! ಎಂದು ವಾಗ್ದಾಳಿ ನಡೆಸಿದರು.

ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ, ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ.

ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರ ಪ್ರಿಯತೆ ಏಕೆ?, ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ?. ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು ಎಂದು ಹೆಚ್​.ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us:
Download App:
  • android
  • ios