Asianet Suvarna News Asianet Suvarna News

ಮಂಡ್ಯದಲ್ಲಿ ನಿಖಿಲ್ ಸೋಲಿನ ರಹಸ್ಯದ ಮೂಲಕ ಸಿದ್ದುಗೆ ಎಚ್‌ಡಿಕೆ ಗುದ್ದು

* ನಿಲ್ಲದ ಮಾಜಿ ಮುಖ್ಯಮಂತ್ರಗಳ ಆರೋಪ-ಪ್ರತ್ಯಾರೋಪ
* ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಕುಮಾರಸ್ವಾಮಿ
* ಮಂಡ್ಯದಲ್ಲಿ ಜೆಡಿಎಸ್ ವೀಕ್ ಆಗಿದೆ ಎಂದಿದ್ದ ಸಿದ್ದರಾಮಯ್ಯ
 

HD Kumaraswamy hits out at Siddaramaiah over JDS Weak In mandya rbj
Author
Bengaluru, First Published Oct 10, 2021, 5:43 PM IST

ಬೆಂಗಳೂರು, (ಅ.10): ಮಾಜಿ ಮುಖ್ಯಮಂತ್ರಿಗಳಾದ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಸಿದ್ದರಾಮಯ್ಯ (Siddaramaiah) ನಡುವಿನ ವಾಕ್ಸಮರ ಮುಂದುವರೆದಿದೆ.

ಮಂಡ್ಯದಲ್ಲಿ ಜೆಡಿಎಸ್ (JDS) ಸ್ಟ್ರಾಂಗ್ ಇದ್ದಿದ್ದರೆ ಎಂಪಿ ಚುನಾವಣೆ (MP Election) ಸೋಲುತ್ತಿದ್ದರಾ? ಮಂಡ್ಯದಲ್ಲಿ ಜೆಡಿಎಸ್ ಬಹಳ ವೀಕ್ ಆಗಿದೆ ಎಂದು ಸಿದ್ದರಾಮಯ್ಯನವರ ಹೇಳಿಕೆಗೆ ಈಗ ಕುಮಾರಸ್ವಾಮಿ ಟ್ವಿಟ್ಟರ್‌ ಮೂಲಕ ಪ್ರತಿಕ್ರಿಯಿಸಿ ತಿರುಗೇಟು ಕೊಟ್ಟಿದ್ದಾರೆ.

ಮಂಡ್ಯದಲ್ಲಿ ಜೆಡಿಎಸ್ ವೀಕ್ ಆಗಿದೆ: ಇದೇ ಬಿಗ್ ಎಕ್ಸಾಂಪಲ್

ಸರಣಿ ಟ್ವೀಟ್ Twitter) ಮಾಡಿರುವ ಕುಮಾರಸ್ವಮಿ, ಮಂಡ್ಯ  ಲೋಕಸಭೆ (Mandya Loksabha) ಚುನಾವಣೆಯಲ್ಲಿ ನಮ್ಮ ಸೋಲಿನ ಕಾರಣ ಮಂಡ್ಯ ಜನತೆಗೆ ಗೊತ್ತಿದೆ. ನಿಖಿಲ್ 6 ಲಕ್ಷ ಮತ ಗಳಿಸಿದ್ದರು. ರೈತ ಸಂಘ, ಕಾಂಗ್ರೆಸ್, ಬಿಜೆಪಿ, ಕೆಲ ಮಾಧ್ಯಮಗಳು ಸೇರಿ ʼಮ್ಯಾನೇಜ್ʼ ಮಾಡಿದ ಚುನಾವಣೆ ಅದು. ಕೌರವರು ಮಹಾಭಾರತದಲ್ಲಿ ರಚಿಸಿದ್ದ ಚಕ್ರವ್ಯೂಹದಲ್ಲಿ ಅಭಿಮನ್ಯು ಹೇಗೆ ಸಿಲುಕಿದ್ದನೋ ಹಾಗೇ ಇವರೆಲ್ಲರ ಷಡ್ಯಂತ್ರದ ಚಕ್ರವ್ಯೂಹದಲ್ಲಿ ನಿಖಿಲ್ (Nikhil) ಸಿಲುಕಿದ್ದರು ಎಂದಿದ್ದಾರೆ.

ʼಸಿದ್ದಕಲೆʼಯ ನಿಷ್ಣಾತರಿಗೆ ಹೊಸ ಕನಸು ಬಿದ್ದ ಹಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ವ್ಹೀಕ್ ಆಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಗಲು ಕನಸು ಕಾಣುವವರಿಗೆ ನನ್ನ ಅನುಕಂಪವಿದೆ. ಜೆಡಿಎಸ್ ಮತ್ತು ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ ಮತ್ತೆ ಮತ್ತೆ ಅವರು ಅದೇ ಜಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಮ್ಮಿಶ್ರ ಸರಕಾರದ ಮೈತ್ರಿಯ ಭಾಗವಾಗಿದ್ದುಕೊಂಡೇ ಬೆನ್ನಿಗಿರಿದ ನಿಮ್ಮ ಹೀನ ರಾಜಕೀಯ (Politics) ಯಾರಿಗೆ ಗೊತ್ತಿಲ್ಲ ಹೇಳಿ? ನಿಮ್ಮ ʼಕುತಂತ್ರ ಹೆಜ್ಜೆಗಳುʼ ಎಲ್ಲೆಲ್ಲಿ ಮೂಡಿದವು ಎಂಬುದು ಜನರಿಗೆ ಗೊತ್ತಿಲ್ಲದ ಸಂಗತಿ ಏನಲ್ಲ. ಅಂತಹ ಚಕ್ರವ್ಯೂಹ ರಚಿಸಿರಲಿಲ್ಲ ಎಂದಾದರೆ ʼಬ್ರೂಟಸ್ʼ ಪಾಲಿಟಿಕ್ಸ್ ಮಾಡಿ ನಮ್ಮ ಅಭ್ಯರ್ಥಿಯನ್ನು ಸೋಲಿಸಿದ್ದು ಏಕೆ? ಎಂದು ಎಚ್ ಡಿಕೆ ಪ್ರಶ್ನಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ನಮಗಾದ ಸೋಲು ಕುತಂತ್ರ ರಾಜಕಾರಣಕ್ಕಾದ ಗೆಲುವು. ಅದನ್ನೇ ಇಟ್ಟುಕೊಂಡು ಜೆಡಿಎಸ್ ದುರ್ಬಲವಾಗಿದೆ ಎಂದು ಹೇಳುವುದು ಮೂರ್ಖತನದ ಪರಮಾವಧಿ. ಜೆಡಿಎಸ್ ಬಗ್ಗೆ ಮಾತನಾಡಲ್ಲ ಎನ್ನುವು ನೀವು ಕುಮಾರಸ್ವಾಮಿ, ದೇವೇಗೌಡರ (HD Devegowda) ಬಗ್ಗೆ ಮಾತನಾಡುವುದನ್ನೇ ಬಿಟ್ಟಿದ್ದೇನೆ ಅನ್ನುತ್ತೀರಿ. ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರುತ್ತಾರೆ ಎಂದು ಗೋಳಾಡುತ್ತೀರಿ. ಮತ್ಯಾಕೆ ನಮ್ಮ ಬಗ್ಗೆ ಮಾತು? ಬಿಜೆಪಿಯವರು ನಿಮ್ಮ ಹೇಳಿಕೆಗಳಿಗೆ ಕ್ಯಾರೇ ಅನ್ನುವುದಿಲ್ಲ. ನಮ್ಮ ಬಗ್ಗೆ ಮಾತನಾಡದಿದ್ದರೆ ನಿಮಗೆ ಗತಿಯೇ ಇಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಕುಮಾರಸ್ವಾಮಿಯವರ ಟೀಕೆಗಳನ್ನು ನೆಗ್ಲೆಕ್ಟ್ ಮಾಡ್ತೀನಿ ಅನ್ನುತ್ತಲೇ ಕುಮಾರಸ್ವಾಮಿ ಸುತ್ತಲೇ ಯಾಕೆ ಗಿರಕಿ ಹೊಡೆಯುತ್ತೀರಿ ಸಿದ್ದರಾಮಯ್ಯನವರೇ? ನಿಮ್ಮ ರಾಜಕೀಯ ಉಳಿಗಾಲಕ್ಕಾಗಿ ನನ್ನನ್ನು, ದೇವೇಗೌಡರನ್ನು ಟೀಕೆ ಮಾಡುವುದು ನಿಮಗೆ ಅನಿವಾರ್ಯ. ಅದು ತಪ್ಪಿದರೆ ನಿಮಗೆ ಬೇರೆ ವಿಧಿ ಇಲ್ಲ. ಕಾಂಗ್ರೆಸ್‌ನಲ್ಲಿ ನಿಮಗೆ ಮೂರು ಕಾಸಿನ ಬೆಲೆ ಇಲ್ಲ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

Follow Us:
Download App:
  • android
  • ios