Asianet Suvarna News Asianet Suvarna News

'ಸಾಂತ್ವನ ಕೇಂದ್ರ ಮುಚ್ಚವುದು ಕೊರೋನಾ ಸಂಕಷ್ಟದಲ್ಲಿದ್ದ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತೆ'

ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲು  ಹೊರಟಿರುವ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

HD Kumaraswamy Hits out Karnataka govt for women's Comfort center Closed
Author
Bengaluru, First Published May 15, 2020, 10:13 PM IST

ಬೆಂಗಳೂರು, (ಮೇ.15): ಮಹಿಳೆಯರ ನೋವಿಗೆ ಕಿವಿಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಚ್ಚಲು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶಿಸಿದ್ದಕ್ಕೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲು ಹೊರಟಿರುಉದು ಕೊರೋನಾ ಸಂಕಷ್ಟದಲ್ಲಿ ಸ್ರೀಯರಿಗೆ ಮತ್ತೊಂದು ಬರೆ ಎಳೆದಂಯಾಗಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

81 ಸಾವಿರ ಗಡಿ ದಾಟಿದ ಕೊರೋನಾ, ಮಾಜಿ ಡಾನ್ ಮುತ್ತಪ್ಪ ರೈ ನಿಧನ; ಮೇ.15ರ ಟಾಪ್ 10 ಸುದ್ದಿ!

ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲು  ಹೊರಟಿರುವುದು ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ  ಆಶಯ ಬದಿಗೊತ್ತಿರುವುದು ಖಂಡನೀಯ.

ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುವ ಕೆಲಸದಲ್ಲಿ ಮಗ್ನವಾಗಿದ್ದವು. ಲಾಕ್ ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಕುಮರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದರು.

Follow Us:
Download App:
  • android
  • ios