Asianet Suvarna News Asianet Suvarna News

ಕರ್ನಾಟಕದ ಮುಂದಿನ ಸಿಎಂ ಎಚ್‌.ಡಿ.ಕುಮಾರಸ್ವಾಮಿ: ಆರ್‌.ಉಗ್ರೇಶ್‌

ರೈತ ಮತ್ತು ಜನಪರ ಆಡಳಿತ ನೀಡಿ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ 2023ರ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ. ಜೆಡಿಎಸ್‌ ಕಾರ್ಯಕರ್ತರು ಕ್ರಿಯಾಶೀಲರಾಗಿ ಸಂಘಟಿತರಾಗಿ ಕೆಲಸ ಮಾಡಬೇಕಿದೆ.

HD Kumaraswamy is the next CM of Karnataka Says R Ugresh At Tumakuru gvd
Author
First Published Apr 14, 2023, 11:01 PM IST | Last Updated Apr 14, 2023, 11:01 PM IST

ಶಿರಾ (ಏ.14): ರೈತ ಮತ್ತು ಜನಪರ ಆಡಳಿತ ನೀಡಿ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ 2023ರ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ. ಜೆಡಿಎಸ್‌ ಕಾರ್ಯಕರ್ತರು ಕ್ರಿಯಾಶೀಲರಾಗಿ ಸಂಘಟಿತರಾಗಿ ಕೆಲಸ ಮಾಡಬೇಕಿದೆ. ಕಾರ್ಯಕರ್ತರೇ ಜೆಡಿಎಸ್‌ ಪಕ್ಷದ ಶಕ್ತಿ ಎಂದು ಜೆಡಿಎಸ್‌ ಅಭ್ಯರ್ಥಿ ಆರ್‌.ಉಗ್ರೇಶ್‌ ಹೇಳಿದರು.

ತಾಲೂಕಿನ ಮದಲೂರು ಗ್ರಾಮದಲ್ಲಿ ನಡೆದ ಹೊನ್ನಗೊಂಡನಹಳ್ಳಿ, ಕೊಟ್ಟ, ಮದಲೂರು, ಮೇಲ್ಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್‌ ಕಾರ್ಯಕರ್ತರ ಬೃಹತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಜೆಡಿಎಸ್‌ ಸರಕಾರ ಸ್ಥಾಪನೆಯಾದ 24 ಗಂಟೆಗಳಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಆಗಲಿದೆ. ಶಿರಾ ಕ್ಷೇತ್ರದಲ್ಲಿ ಒಬ್ಬ ಸಾಮಾನ್ಯ ರೈತನಿಗೆ ಜೆಡಿಎಸ್‌ ಪಕ್ಷ ಟಿಕೆಟ್‌ ನೀಡಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ಬಲಾಢ್ಯ ಅಭ್ಯರ್ಥಿಗಳ ಮುಂದೆ ಪ್ರತಿಯೊಬ್ಬರೂ ಸ್ವಾಭಿಮಾನದಿಂದ ಸಾಮಾನ್ಯ ಕುಟುಂಬದ ವ್ಯಕ್ತಿ ಆರ್‌. ಉಗ್ರೇಶ್‌ಗೆ ಮತ ನೀಡಿ ಗೆಲ್ಲಿಸುವ ಮೂಲಕ ಜನಬಲವೇ ಅಂತಿಮ ಎಂದು ಸಾಬೀತುಪಡಿಸಬೇಕು ಎಂದರು.

ಬಡವರ ವಿರೋಧಿ ಬಿಜೆಪಿ ಸರ್ಕಾರ ಕಿತ್ತೊಗೆಯಿರಿ: ಶಾಸಕ ಯತೀಂದ್ರ

ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಹಾಗೂ ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್‌.ಆರ್‌. ಗೌಡ ಮಾತನಾಡಿ, ಶಿರಾ ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷಕ್ಕೆ ಹೆಚ್ಚು ಜನಬೆಂಬಲ ವ್ಯಕ್ತವಾಗುತ್ತಿದ್ದು, ಜೆಡಿಎಸ್‌ ಪಕ್ಷದ ಸಾಮಾನ್ಯ ಅಭ್ಯರ್ಥಿಯ ಪರ ಅಲೆ ಎದ್ದಿದೆ. ಪಂಚರತ್ನ ಯೋಜನೆಯಡಿ ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿರುವ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ರವರ ಕನಸು ನನಸು ಮಾಡುವ ನಿಟ್ಟಿನಲ್ಲಿ ಭ್ರಷ್ಟ ಬಿಜೆಪಿ ಸರಕಾರವನ್ನು ಕಿತ್ತೊಗೆದು ಜನಸಾಮಾನ್ಯರ ಕಷ್ಟಅರಿತು ಆಡಳಿತ ನೀಡುವ ಪ್ರಾದೇಶಿಕ ಪಕ್ಷ ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿಯಬೇಕು ಮನವಿ ಮಾಡಿದರು.

ಈ ಬಾರಿ ಬಿಜೆಪಿ 140 ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು: ಸಚಿವ ಎಸ್‌.ಟಿ.ಸೋಮಶೇಖರ್‌

ಸಮಾವೇಶದಲ್ಲಿ ಜೆಡಿಎಸ್‌ ಮುಖಂಡ ಕಲ್ಕೆರೆ ರವಿಕುಮಾರ್‌, ಪಿಎಲ್‌ಡಿ ಬ್ಯಾಂಕ್‌, ಮಾಜಿ ಅಧ್ಯಕ್ಷ ಟಿ.ಡಿ.ಮಲ್ಲೇಶ್‌, ಹೊನ್ನೇನಹಳ್ಳಿ ನಾಗರಾಜು, ಮಾಜಿ ನಗರಸಭೆ ಸದಸ್ಯ ರಾಘವೇಂದ್ರ, ಹುಂಜಿನಾಳ ರಾಜಣ್ಣ, ಪರಮೇಶ್‌ ಗೌಡ, ಮಾಜಿ ಜಿ.ಪಂ. ಉಪಾಧ್ಯಕ್ಷ ಮುದಿಮಡು ರಂಗಸ್ವಾಮಯ್ಯ, ಟಿ.ಡಿ. ನರಸಿಂಹಮೂರ್ತಿ, ಲಿಂಗದಹಳ್ಳಿ ಚೇತನ್‌ ಕುಮಾರ್‌, ಉದಯಕುಮಾರ್‌, ಗಿರೀಶ್‌, ಅಶೋಕ್‌, ಚಿಕ್ಕಿರಪ್ಪ ,ಹುಳಿಗೆರೆ ಚಂದ್ರಣ್ಣ, ದೊಡ್ಡಿರಪ್ಪ, ರೇಣುಕಮ್ಮ, ಈರಣ್ಣ, ಧರಣೇಶ್‌ ಸೇರಿದಂತೆ ಹಲವರು ಹಾಜರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Latest Videos
Follow Us:
Download App:
  • android
  • ios