ನಿರುದ್ಯೋಗ ಯುವಕ - ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯಲ್ಲಿ ಸೆಮಿ ಕಂಡಕ್ಟರ್ ಸ್ಯಾಬ್ರಿಕೇಶನ್ ಘಟಕ ಸ್ಥಾಪಿಸಲು ಉ್ದದೇಶಿಸಿದ್ದು, ಅಗತ್ಯ ಜಾಗ ಕಲ್ಪಿಸುವಂತೆ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಮಂಡ್ಯ (ಡಿ.24): ಜಿಲ್ಲೆಯ ನಿರುದ್ಯೋಗ ಯುವಕ - ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯಲ್ಲಿ ಸೆಮಿ ಕಂಡಕ್ಟರ್ ಸ್ಯಾಬ್ರಿಕೇಶನ್ ಘಟಕ ಸ್ಥಾಪಿಸಲು ಉ್ದದೇಶಿಸಿದ್ದು, ಅಗತ್ಯ ಜಾಗ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.
ಕಳೆದ ಅಕ್ಟೋಬರ್ 31 ರಂದೇ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಉತ್ತರ ನೀಡಿಲ್ಲ. ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಡಿಸುವ ಎಚ್‌ಡಿಕೆ ಆಲೋಚನೆಗೆ ರಾಜ್ಯ ಸರ್ಕಾರದ ಧೋರಣೆಯಿಂದ ನಷ್ಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಕ್ಕೆ ಅಮೇರಿಕಾ ಮೂಲದ ಪ್ರತಿಷ್ಠಿತ ತಂತ್ರಜ್ಞಾನ ಉದ್ಯಮವಾದ ಸ್ಯಾನ್ಸನ್ ಗ್ರೂಪ್ ಕಂಪನಿ ಸ್ಥಾಪಿಸಲು ಮಾತುಕತೆ ನಡೆಸಿರುವ ಕೇಂದ್ರ ಸಚಿವ ಎಚ್‌ಡಿಕೆ ಅವರು, ಭಾರತದಲ್ಲಿ ಸಿಲಿಕಾನ್ ಮತ್ತು ಸಿಲಿಕಾನ್ ಕಾರ್ಬೈಟ್ (SIC) ಉತ್ಪಾದನಾ ಸೌಲಭ್ಯಕ್ಕಾಗಿ ಎಂಡ್ ಟು ಎಂಡ್ ಸೆಮಿ ಕಂಡಕ್ಟರ್ ಸ್ಯಾಬ್ರಿಕೇಶನ್ ಘಟಕವನ್ನು ಸ್ಥಾಪಿಸುವ ಉದ್ದೇಶ ಹೊಂದಿದ್ದಾರೆ.
ಈ ಘಟನೆ ಸ್ಥಾಪನೆಯಿಂದ ಸುಮಾರು 30 ರಿಂದ 40 ಸಾವಿರದವರೆಗೆ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ಒದಗಿಸಬಹುದಾಗಿದೆ. ಸಂಸ್ಥೆಗೆ ಸರ್ಕಾರದಿಂದ ಮಂಡ್ಯ ಜಿಲ್ಲೆಯ ಸುತ್ತಮುತ್ತ ಸುಮಾರು 100 ಎಕರೆ ಬಯಲು ಭೂಮಿಗೆ ಪ್ರಾಥಮಿಕ ಅವಶ್ಯಕತೆ ಇದೆ. ಸ್ಥಾನ್ಸನ್ ಗ್ರೂಪ್ ಕಂಪನಿಯ ಬೇಡಿಕೆಯಾಗಿದೆ. ಇದಕ್ಕಾಗಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಅಗತ್ಯ ಜಾಗ ನೀಡುವಂತೆ ಮನವಿ ಮಾಡಿದ್ದಾರೆ.
ಸ್ಯಾನ್ಸನ್ ಗ್ರೂಪ್ ಜೊತೆ ಮಾತುಕತೆ
ಮ್ಯಾಕ್ರೋ ಎಲೆಕ್ಟ್ರಾನಿಕ್ ವಲಯದಲ್ಲಿ ಸಿಲಿಕಾನ್ ಮತ್ತು ಸಿಲಿಕಾನ್ ಕಾರ್ಬೈಟ್ ಉತ್ಪಾದನೆ, ಸೌರಫಲಕ ಬ್ಯಾಟರಿಗಳು, ಡಯೋಡ್‌ಗಳು (MOUSFIT) ಇತ್ಯಾದಿಗಳನ್ನು ಸಿದ್ದಪಡಿಸಿ ಉತ್ಪನ್ನಗಳು ಮಾರುಕಟ್ಟೆಯನ್ನು ರಾಜ್ಯಕ್ಕೆ ತಂದು ಜಿಲ್ಲೆಯಲ್ಲಿ ಸ್ಥಾಪಿಸಲು ಮುಂದಾಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯ ಸರ್ಕಾರ, ಸಿಎಂ, ಕೈಗಾರಿಕಾ ಸಚಿವರು ಹಾಗೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಅಗತ್ಯ ಜಾಗ ನೀಡಿ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಬೇಕಿದೆ.


