ಬೆಂಗಳೂರು, (ನ.13): ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮುಖಾಮುಖಿ ಭೇಟಿಯಾಗಿದ್ದಾರೆ. 

ಹೌದು ಅಚ್ಚರಿ ಎನಿಸಿದರೂ ಸತ್ಯ. ದಿಢೀರ್ ಬೆಳವಣಿಗೆಯಲ್ಲಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ರಾಜಕೀಯ ಬದ್ಧ ವೈರಿ ಇದ್ದಲ್ಲಿಯೇ ಹೋಗಿ ಭೇಟಿಯಾದ ಕುಮಾರಸ್ವಾಮಿ, ರೇವಣ್ಣ

ಇಂದು (ಶುಕ್ರವಾರ) ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ.

 ರಾಜ್ಯ ರಾಜಕೀಯದಲ್ಲಿ ಈ ಉಭಯನಾಯಕರ ಭೇಟಿ ತೀವ್ರ ಸಂಚಲನ ಮೂಡಿಸಿದೆ. ಯಾಕಂದ್ರೆ ರಾಜಕೀಯವಾಗಿ ಬದ್ಧ ವೈರಿಗಳಾದವರು ದಿಢೀರ್ ಭೇಟಿ ಹಲವು ಚರ್ಚೆಗಳನ್ನು ಹುಟ್ಟುಹಾಕುತ್ತವೆ. ಅದರಂತೆ ಹಾಲಿ ಮಾಜಿ ಸಿಎಂ ಭೇಟಿಯಾಗುದ್ಯಾಕೆ..? ಬೈ ಎಲೆಕ್ಷನ್ ಫಲಿತಾಂಶ ಬೆನ್ನಲ್ಲೇ ಈ ಭೇಟಿ ಮಾಡಿದ್ಯಾಕೆ? ಎನ್ನುವ ಚರ್ಚೆಗಳು ಶುರುವಾಗಿವೆ.