ಮಂಡ್ಯ ಹಾಸನ ಕೋಲಾರ ಜೆಡಿಎಸ್‌ಗೆ ಬಿಟ್ಟು ಕೊಡಲು ಬಿಜೆಪಿ ಹೈಕಮಾಂಡ್ ಗ್ರೀನ್‌ಸಿಗ್ನಲ್, ಸುಮಲತಾ ನಡೆಯೇನು?
ರಾಜ್ಯಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಹೆಚ್‌ಡಿಕೆ ಚರ್ಚೆ ನಡೆಸಿದ್ದು ಪ್ರಮುಖ ಕ್ಷೇತ್ರಗಳಾದ ಹಾಸನ, ಮಂಡ್ಯ ಮತ್ತು ಕೋಲಾರ ವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.
ದೆಹಲಿ (ಫೆ.22): ಲೋಕಸಭಾ ಚುನಾವಣೆಗೆ ಕೆಲವು ತಿಂಗಳುಗಳು ಇರುವಂತೆ ರಾಜಕೀಯ ಚಟವಟಿಕೆ ಗರಿಗೆದರಿದೆ. ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜ್ಯಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಜತೆ ಚರ್ಚೆ ನಡೆಸಿದ್ದು ಪ್ರಮುಖ ಕ್ಷೇತ್ರಗಳಾದ ಹಾಸನ, ಮಂಡ್ಯ ಮತ್ತು ಕೋಲಾರ ವನ್ನು ಜೆಡಿಎಸ್ ಗೆ ಬಿಟ್ಟುಕೊಡುವಂತೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಈ ಪ್ರಸ್ತಾಪಕ್ಕೆ 3 ಪ್ರಮುಖ ಕ್ಷೇತ್ರಗಳನ್ನು ಬಿಟ್ಟು ಕೊಡಲು ಅಮಿತ್ ಶಾ ಒಪ್ಪಿಗೆ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಸದ್ಯ 3 ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ನಿರ್ಧರಿಸಿದ್ದು, ಉಳಿದಂತೆ ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಗಳನ್ನ ಆಯ್ಕೆಯ ಸಂದರ್ಭದಲ್ಲಿ ನಿರ್ಧರಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆಯಂತೆ. ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಎಚ್ಡಿಕೆ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದು, 20 ನಿಮಿಷಗಳ ಕಾಲ ನಡೆದ ಮಾತುಕತೆಯಲ್ಲಿ ಮಂಡ್ಯ ಕ್ಷೇತ್ರ ವಿಚಾರ ಪ್ರಸ್ತಾಪ ಮಾಡಿ ಜೆಡಿಎಸ್‌ಗೆ ಈ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಮನವೊಲಿಸಿ ಸಕ್ಸಸ್ ಆಗಿದ್ದಾರೆ.
'ನೀನೇ ರಾಜಕುಮಾರ..' ಅಪ್ಪು ಚಿತ್ರದಲ್ಲಿ ತೋರಿಸಿದ್ದನ್ನು ನಿಜವಾಗಿಸಿ ಪುನೀತನಾದ ಬೆಳಗಾವಿ ವ್ಯಕ್ತಿ!
ಎಚ್‌ಡಿಕೆ ಜೊತೆಗೆ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಸಾಥ್ ನೀಡಿದರು. ಒಟ್ಟು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದು, ರಾಜ್ಯದ ಸದ್ಯದ ರಾಜಕೀಯ ಸ್ಥಿತಿಗತಿ ಬಗ್ಗೆ ಹೆಚ್ ಡಿಕೆ ಮಾಹಿತಿ ನೀಡಿದರು. ನಾವು ಎನ್ ಡಿ ಎ ಮೈತ್ರಿಕೂಟ ಸೇರಿರೋದು ಕಾಂಗ್ರೆಸ್ ನ ಸೋಲಿಸಬೇಕೆಂದು ಆದ್ರೆ ಮಂಡ್ಯ ಮತ್ತು ಹಾಸನದಲ್ಲಿ ನಿಮ್ಮ ಪಕ್ಷದ ಶಾಸಕರೇ ಭಿನ್ನಾಭಿಪ್ರಾಯ ವ್ಯಕ್ತಪಡಿಸ್ತಿದ್ದಾರೆ ಎಂದು ಕುಮಾರಸ್ವಾಮಿ, ಶಾ ಮುಂದೆ ವರದಿ ಒಪ್ಪಿಸಿದ್ದಾರೆ.
ಇನ್ನು ತುಮಕೂರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡೋಣಾ ಎಂದು ಹೈಕಮಾಂಡ್ ಹೆಚ್‌ಡಿಕೆಗೆ ತಿಳಿಸಿದ್ದು, ರಾಜ್ಯ ನಾಯಕರೊಂದಿಗೆ ಚರ್ಚೆ ಮಾಡಿ ಉಳಿದ ಕ್ಷೇತ್ರಗಳ ಬಗ್ಗೆ ಫೈನಲ್ ಮಾಡೋಣಾ ಎಂದು ಅಮಿತ್ ಶಾ ಹೇಳಿದ್ದಾರಂತೆ.
ಹಾಸನ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಅನಗತ್ಯ ಹೇಳಿಕೆ ಕೊಡ್ತಿದ್ದಾರೆ ಇದರ ಬಗ್ಗೆ ಗಮನ ಹರಿಸಿ ಎಂದು ಕುಮಾರಸ್ವಾಮಿ ಅವರು ಶಾ ಕಿವಿಗೆ ಸುದ್ದಿ ಮುಟ್ಟಿಸಿದ್ದಾರೆ.
ಡಿಕೆಶಿ ಗಡ್ಡದ ಮೇಲೆ ಅಶೋಕ್ ಕಣ್ಣು , ಕೃಷ್ಣ ಬೈರೇಗೌಡ ಉತ್ತರಕ್ಕೆ ನಗೆಗಡಲಲ್ಲಿ ತೇಲಿದ ಸದನ
ಸುಮಲತಾ ನಡೆಯೇನು?:
ಸಂಸದೆ ಸುಮಲತಾ ಅವರಿಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು ಎಂಬ ಸುದ್ದಿ ಬೆನ್ನಲ್ಲೇ ಕುಮಾರಸ್ವಾಮಿ ದಿಢೀರ್ ದೆಹಲಿಗೆ ದೌಡಾಯಿಸಿದರು. ಶತಾಯಗತಾಯ ಮಂಡ್ಯ ಕ್ಷೇತ್ರವನ್ನು ಸುಮಲತಾ ಅವರಿಗೆ ಬಿಟ್ಟು ಕೊಡದೆ ತಮ್ಮಲ್ಲೇ ಉಳಿಸಿಕೊಳ್ಳಬೇಕೆಂದು ಕುಮಾರಸ್ವಾಮಿ ಹಠ. ಹೀಗಾಗಿ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ನಾನು ಮಂಡ್ಯದ ಮಣ್ಣನ್ನು ಯಾವತ್ತಿಗೂ ಬಿಟ್ಟು ಹೋಗುವುದಿಲ್ಲ ಎಂದು ಈಗಾಗಲೇ ಸುಮಲತಾ ಹೇಳಿದ್ದು, ಬಿಜೆಪಿಗೆ ಬೆಂಬಲ ಘೋಷಿಸಿರುವ ಸುಮಲತಾ ಅವರ ಮುಂದಿನ ನಡೆಯೇನು? ಪಕ್ಷೇತರರಾಗಿಯೇ ಮತ್ತೆ ಸ್ಪರ್ಧಿಸಿ ಗೆದ್ದು ಇತಿಹಾಸ ಸೃಷ್ಟಿಸುತ್ತಾರಾ? ಅಥವಾ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳುತ್ತಾರಾ ಕಾದು ನೋಡಬೇಕಿದೆ.