Asianet Suvarna News Asianet Suvarna News

ಬಿಜೆಪಿ ಪಾದಯಾತ್ರೆಗೆ ಕುಮಾರಸ್ವಾಮಿ ಗರಂ, 'ಪ್ರೀತಂ ಗೌಡ' ವಿರುದ್ಧ ಸ್ಪೋಟಕ ಹೇಳಿಕೆ ನೀಡಿದ ಎಚ್‌ಡಿಕೆ!

ಬಿಜೆಪಿ ಪಾದಯಾತ್ರೆಯ ವಿರುದ್ಧ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಮ್ಮ ಕುಟುಂಬವನ್ನು  ನಾಶ ಮಾಡಲು ಹೊರಟ ಪ್ರೀತಂ ಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು ನನ್ನನ್ನು ಸಭೆಗೆ ಕರೆಯುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.
 

HD kumaraswamy on BJP Padayatre regard Muda and Valmiki Scam san
Author
First Published Jul 31, 2024, 11:20 AM IST | Last Updated Jul 31, 2024, 11:20 AM IST

ನವದೆಹಲಿ (ಜು.31): ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರಿಗೆ ಜಂಟಿಯಾಗಿ ಪಾದಯಾತ್ರೆ ಮಾಡಲಿದೆ ಎಂದು ತಿಳಿಸಲಾಗಿತ್ತು. ಆದರೆ, ಈ ಪಾದಯಾತ್ರೆಯ ವಿರುದ್ಧ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. ಅದರೊಂದಿಗೆ ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧವೂ ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ. ದೇವೇಗೌಡರ ಕುಟುಂಬ ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನ ಸಭೆ ಕರೆಯುತ್ತೀರಾ? ಎಂದು ಎಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ. ಪೆನ್ ಡ್ರೈವ್ ಹಂಚಿದೋರು ಯಾರು ಅಂಥ ಗೊತ್ತಿಲ್ವಾ? ಚುನಾವಣಾ ಮೈತ್ರಿಯೇ ಬೇರೆ, ರಾಜಕೀಯವೇ ಬೇರೆ ಎಂದು ಹೇಳುವ ಮೂಲಕ ಬಿಜೆಪಿ ಪಾದಯಾತ್ರೆಗೆ ಎಚ್‌ಡಿಕೆ ಗರಂ ಆಗಿದ್ದಾರೆ. ಅದರೊಂದಿಗೆ ಪಾದಯಾತ್ರೆ ಸಂಘಟಿಸಿದ ಬಿಜೆಪಿ ನಾಯಕರ ವಿರುದ್ದ ಎಚ್‌ಡಿಕೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಎಚ್‌ಡಿ ಕುಮಾರಸ್ವಾಮಿ, ಜೆ‌.ಟಿ ದೇವಗೌಡರ ನೇತೃತ್ವದಲ್ಲಿ ಕೋರ್ ಕಮಿಟಿ ಸದಸ್ಯರು ನಿರ್ಧಾರ ತೆಗೆದುಕೊಂಡಿದ್ದಾರೆ. ಪಾದಯಾತ್ರೆ ಯಲ್ಲಿ ಭಾಗಿಯಾಗಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ. ಕೇರಳದಲ್ಲಿ ನೂರಾರು ಜನ ಸಾವು ಕಂಡಿದ್ದಾರೆ. ಕರ್ನಾಟಕದಿಂದ ಹೋದ ಜನರು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದಾರೆ. ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲೂ ಹಲವೆಡೆ ರೆಡ್, ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಲವು ಜಿಲ್ಲೆಗಳಲ್ಲಿ ಜಲಾವೃತಗೊಂಡು ಸಂಕಷ್ಟ ಎದುರಾಗಿದೆ. ಮಂಡ್ಯ ಭಾಗದಲ್ಲಿ ನಾಟಿ ಕೆಲಸ ಶುರುವಾಗಲಿದೆ. ಈ ಹಿನ್ನಲೆಯಲ್ಲಿ ನಮ್ಮ ನಾಯಕರು ಈ ನಿರ್ಧಾರಕ್ಕೆ ಬಂದಿದ್ದಾರೆ. ಪಾದಯಾತ್ರೆ ಮಾಡಬೇಕು ಎಂದು ಬಿಜೆಪಿ ನಾಯಕರು ಈ ಮುಂಚೆ ನಿರ್ಧಾರ ಮಾಡಿದ್ದರು. ನಮಗೆ ಮಾಹಿತಿಗಾಗಿ ಹೇಳಿದ್ದಾರೆ ಅಷ್ಟೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿ ನಿಲುವಿನಲ್ಲಿ ತಿರ್ಮಾನ ತೆಗೆದುಕೊಂಡು ಹೋರಾಟ ಮಾಡುತ್ತಿದ್ದಾರೆ. ಪಾದಯಾತ್ರೆಗೆ ಸೂಕ್ತವಾದ ಸಂದರ್ಭವಲ್ಲ ಅನ್ನೋ ಕಾರಣಕ್ಕೆ ನಾವು ಹಿಂದೆ ಸರಿದಿದ್ದೇವೆ. ಜನರ ಟೀಕೆ ವ್ಯಕ್ತವಾಗುವ ಸಾಧ್ಯತೆ ಇದೆ. ಈ ಹಿನ್ನಲೆ ನಾವು ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇವೆ. ಅಲ್ಲಿನ ಜನರ ಸಮಸ್ಯೆ ಏನಿದೆ ಅದು ಈಗ ಮುಖ್ಯ. ಪಾದಯಾತ್ರೆಯಿಂದ ಆಗುವ ಲಾಭ ಏನು ? ಕಾನೂನು ಹೋರಾಟವು ಮುಖ್ಯ. ರಾಜಕೀಯವೇ ನಮಗೆ ಪ್ರಾಮುಖ್ಯವಲ್ಲ. ನಾವು ನೈತಿಕ ಬೆಂಬಲವೂ ಕೊಡಲ್ಲ,  ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಾಗ ಯಾಕೆ ಬೆಂಬಲ ಕೊಡಬೇಕು. ಬೆಂಗಳೂರಿನಿಂದ ಮೈಸೂರುವರೆಗೂ ನಮ್ಮ ಶಕ್ತಿ ಇದೆ. ನಮ್ಮನ್ನು ಪರಿಗಣಿಸಿದ್ದರೆ ಹೇಗೆ ಎಂದು ಎಚ್‌ಡಿಕೆ ಹೇಳಿದ್ದಾರೆ.

ನನ್ನ ಮನಸ್ಸಿಗೆ ನೋವಾಗಿದೆ. ಯಾವ ಕಾರಣಕ್ಕಾಗಿ ನಾವು ಬೆಂಬಲ ಕೊಡಬೇಕು? ಪ್ರೀತಂಗೌಡ ಯಾರು? ಪೆನ್ ಡ್ರೈವ್ ಹಂಚಿಕೆಗೆ ಯಾರು ಕಾರಣ ಅನ್ನೋದು ಗೊತ್ತಿದೆ. ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟುವನು ಆತ. ಅಂತವರ ಜೊತೆಗೆ ವೇದಿಕೆ ಮೇಲೆ ಕೂರಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ನಮ್ಮ ಕೋರ್ ಕಮಿಟಿ ಸಭೆಯಲ್ಲಿ ಪಾದಯಾತ್ರೆ ವಿರುದ್ಧ ತೀರ್ಮಾನವಾಗಿದೆ. ಕೇರಳದಲ್ಲಿ ಜೀವ ಹಾನಿಯಾಗಿದೆ.  ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ರೆಡ್ ಅರ್ಲಟ್ ಘೋಷಿಸಲಾಗಿದೆ. ಕೊಡಗು ಕೂಡ ಜಲಾವೃತವಾಗಿದೆ. ಮಂಡ್ಯ ಭಾಗದಲ್ಲಿ ನದಿ ನೀರು ಬಿಟ್ಟಿದ್ದಾರೆ. ರೈತರು ಕೃಷಿ ಕೆಲಸ ಶುರು ಮಾಡಲಿದ್ದಾರೆ. ಬಿಜೆಪಿ ನಾಯಕರು ಸಭೆಯಲ್ಲಿ  ಪೂರ್ವ ಸಿದ್ದತೆ ಮಾಡಿಕೊಂಡಿದ್ದರು. ನಮ್ಮ ಮಾಹಿತಿಗೆ ಇರಲಿ ಎಂದು ತಿಳಿಸಿದ್ದಾರಷ್ಟೇ. ಇದು ಸೂಕ್ತ ಸಂದರ್ಭ ಅಲ್ಲ ಹಾಗಾಗಿ ಹಿಂದೇ ಸರಿದ್ದೇವೆ.  ಜನಸಮಾನ್ಯರ ಭಾವನೆ ಮುಖ್ಯ. ನಮ್ಮ ನೈತಿಕ ಬೆಂಬಲವೂ ಇಲ್ಲ. ಬಿಜೆಪಿ ಪಾದಯಾತ್ರೆ ತೀರ್ಮಾನ ನನ್ನ ಮನಸ್ಸಿಗೆ ನೋವು ತಂದಿದೆ ಎಂದು ಎಚ್‌ಡಿಕೆ ಹೇಳಿದ್ದಾರೆ.
 

Latest Videos
Follow Us:
Download App:
  • android
  • ios