ಬೆಂಗಳೂರು, (ಡಿ.09): 15 ಉಪಚುನಾವಣೆಯಲ್ಲಿ ಬಿಜೆಪಿ 12 ಹಾಗೂ ಕಾಂಗ್ರೆಸ್ 2 ಮತ್ತು ಒಂದು ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿ ಸರ್ಕಾರ ಸೇಫ್‌ ಆಗಿದೆ. 

ಆದ್ರೆ, ಜೆಡಿಎಸ್‌ ಖಾತೆ ತೆರೆಯದೇ ಹೀನಾಯವಾಗಿ ಸೋಲುಕಂಡಿದೆ. ಇನ್ನು ಈ  ಬಗ್ಗೆ ಕುಮಾರಸ್ವಾಮಿ ಮಾತ್ರ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಅಚ್ಚರಿ ಟ್ವೀಟ್ ಮಾಡಿ, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ಉಪಚುನಾವಣೆ ಫಲಿತಾಂಶದ ಬಗ್ಗೆ ಟ್ವಿಟ್ಟರ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಎಚ್‌ಡಿಕೆ,  "ಇದೊಂದು "ಅಸಹ್ಯ" ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ  ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು 'ಪವಿತ್ರ' ಮತ್ತು 'ಸುಭದ್ರ' ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ  ಮನದಾಳದ ಅಭಿನಂದನೆಗಳು" ಎಂದಿದ್ದಾರೆ.

ಬಿಜೆಪಿ ಸರ್ಕಾರ ರಕ್ಷಿಸಲು ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಈ ರೀತಿಯಾಗಿ ಟ್ವೀಟ್ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಮತದಾರರ ತೀರ್ಪು ಪ್ರಶ್ನಿಸಿದ್ರಾ HDK..?
 'ಪವಿತ್ರ' ಮತ್ತು 'ಸುಭದ್ರ' ಎನ್ನುವುದನ್ನು ಎತ್ತಿ ತೋರಿಸುವ ಮೂಲಕ ಪರೋಕ್ಷವಾಗಿ ಮತದಾರರ ತೀರ್ಪನ್ನು ಪ್ರಶ್ನಿಸಿದ್ದಾರೆ. ಅನರ್ಹರನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಉಳಿಸಿ ಎಂದು ಕುಮಾರಸ್ವಾಮಿ ಪ್ರಚಾರ ಮಾಡಿದ್ದರು. ಆದ್ರೆ, ಫಲಿತಾಂಶ ಉಲ್ಟಾ ಆಗಿದ್ದಕ್ಕೆ ಬೇಸರಗೊಂಡು ಈ ರೀತಿಯಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಬಹುದು.

ಡಿಸೆಂಬರ್ 09ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: