ಪಂಚರಾಜ್ಯ ಹಾಗೂ ಕರ್ನಾಟಕದ ಮೂರು ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಇನ್ನು ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಮೇ.02): ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾದ ಫಲಿತಾಂಶ ಪ್ರಕಟಟವಾಗಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದೆ.

YouTube video player

ಇನ್ನೂ ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದ್ದು, ಬಿಜೆಪಿಯ ಶರಣು ಸಲಗಾರ್ ಗೆಲುವು ಸಾಧಿಸಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಬಂಗಾಳದಿಂದ ಕೇರಳದವರೆಗೆ ಕಾಂಗ್ರೆಸ್‌ಗೆ ಕಹಿ ಸುದ್ದಿಯೇ ಹೆಚ್ಚು!

Scroll to load tweet…

ಕರ್ನಾಟಕದ ಉಪ ಚುನಾವಣೆ ಫಲಿತಾಂಶದ ಜೊತೆಗೇ, 5 ರಾಜ್ಯಗಳ ಚುನಾವಣೆಗಳ ಫಲಿತಾಂಶಗಳೂ ಬಂದಿವೆ. ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎಂಬ ಸಂದೇಶ ಹೊರಬಿದ್ದಿದೆ. ಸಾಂದರ್ಭಿಕ ಕಾರಣಗಳಿಗಾಗಿ ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್‌ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ.

ಜೆಡಿಎಸ್‌ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ.

Scroll to load tweet…

ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತುಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ.

ಅಧಿಕಾರ ದುರ್ಬಳಕೆಯ, ಅಪಪ್ರಚಾರದ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Scroll to load tweet…