Asianet Suvarna News Asianet Suvarna News

HD Kumaraswamy: ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ಎಚ್‌ಡಿಕೆ ಒಂದು ಕಳಕಳಿಯ ಮನವಿ

* ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ಕಳಕಳಿಯ ಮನವಿಯೊಂದು ಮಾಡಿದ ಎಚ್‌ಡಿಕೆ
* ಟ್ವೀಟ್‌ ಮೂಲಕ  ಮನವಿ ಮಾಡಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ
* ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ ಕುಮಾರಣ್ಣ

HD Kumaraswamy Requests to JDS Leader workers to don't celebrate His birthday On Dec 16th rbj
Author
Bengaluru, First Published Dec 14, 2021, 11:20 PM IST

ಬೆಂಗಳೂರು, (ಡಿ.14): ತೀವ್ರ ಕುತೂಹಲ ಮೂಡಿಸಿದ್ದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ (Karnataka MLC Election) 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ(Election Result) ಪ್ರಕಟವಾಗಿದೆ.

ಕಾಂಗ್ರೆಸ್ (Congress) ಹಾಗೂ ಬಿಜೆಪಿ(BJP) ತಲಾ 11ರಲ್ಲಿ ಗೆಲುವು ಸಾಧಿಸಿದ್ದರೆ, ಜೆಡಿಎಸ್ 2, ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಇನ್ನು ಜೆಡಿಎಸ್ ತನ್ನ ಭದ್ರಕೋಟೆಯಲ್ಲಿ ಸೋಲುಕಂಡಿದ್ದು, ದಳಪತಿಗಳ ನಿದ್ದೆಗೆಡಿಸಿದೆ.

ಇನ್ನು ಇದರ ಮಧ್ಯೆ  ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ(HD Kumaraswamy) ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ಕಳಕಳಿಯ ಮನವಿಯೊಂದನ್ನು ಮಾಡಿದ್ದಾರೆ. 

MLC Election Result: ಹಳೇ ಮೈಸೂರಲ್ಲೇ ನೆಲಕಚ್ಚಿದ ಜೆಡಿಎಸ್, ಭದ್ರಕೋಟೆ ಛಿದ್ರ-ಛಿದ್ರ..!

ಹೌದು....ಇದೇ ಡಿಸಿಎಂಬರ್ 16ರಂದು ಕುಮಾರಸ್ವಾಮಿ ಅವರ ಜನ್ಮದಿನ (HD Kumaraswamy Birthday) ಇದೆ. ಆದ್ರೆ, ಅದ್ಧೂರಿ ಜನ್ಮದಿನ ಆಚರಣೆ ಬೇಡ ಎಂದು ಜೆಡಿಎಸ್ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿ ಜಾಲತಾಣಗಳ ಮೂಲಕ ತಿಳಿಸಿದ್ದಾರೆ. ಹಾಗಾದ್ರೆ ಏನಂತ ಮನವಿ ಮಾಡಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.
 
ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ ತುರಾಯಿ ಹಾಕಿ, ಕೇಕ್‌ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ.  ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ. 

ಹೀಗೆ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ. ಅದ್ಧೂರಿ ಹುಟ್ಟುಹಬ್ಬ ನನಗೆ ಸುತರಾಂ ಇಷ್ಟವಿಲ್ಲ. ಆ ಅದ್ಧೂರಿತನದಲ್ಲಿ ಕಂಗೆಟ್ಟಿರುವ ಜನರನ್ನು ಅಣಕಿಸುವುದು ಬೇಡ. ನೀವೆಲ್ಲರೂ ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ.

ಹೊಸ ಚೈತನ್ಯ ಮತ್ತು ಧೃಡ ಸಂಕಲ್ಪದೊಂದಿಗೆ,  ಪಕ್ಷವನ್ನು ಕಟ್ಟೋಣ. ಸವಾಲುಗಳನ್ನು ಮೆಟ್ಟಿ ನಿಲ್ಲೋಣ ಎಂದು ಟ್ವೀಟ್ ಮಾಡಿದ್ದಾರೆ.

ಪರಿಷತ್ ರಿಸಲ್ಟ್ ಬಗ್ಗೆ ಎಚ್‌ಡಿಕೆ ಪ್ರತಿಕ್ರಿಯಿಸಿದ್ದು
ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ.

2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ. 

ಚುನಾವಣೆ ಎಂದರೆ ಸೋಲು-ಗೆಲುವು. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್‌ ಎಂದೂ ಧೃತಿಗೆಡುವುದಿಲ್ಲ. 

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯ ಮತದಾರರು. ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್‌ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು. ಈ ಚುನಾವಣೆಯಲ್ಲಿ ಜಯ ಗಳಿಸಿದ ಎಲ್ಲ ಪಕ್ಷಗಳ ಅಭ್ಯರ್ಥಿಗಳಿಗೆ ನನ್ನ  ಶುಭಾಶಯಗಳು ಎಂದು ತಿಳಿಸಿದ್ದಾರೆ.
 

Follow Us:
Download App:
  • android
  • ios