ಕುಮಾರಣ್ಣ ಸರ್ಕಾರ ರಚನೆಗೆ ಬೆಂಬಲ ಸೂಚಿಸಬೇಕು: ನಿಖಿಲ್‌ ಕುಮಾರಸ್ವಾಮಿ

ರಾಜ್ಯದ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷ ಜೆಡಿಎಸ್‌ ಬೆಂಬಲಿಸಿ, ಹನೂರು ಕ್ಷೇತ್ರದಲ್ಲಿ ಈ ಬಾರಿ ಮಂಜುನಾಥ್‌ ಅವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಕುಮಾರಣ್ಣ ಸರ್ಕಾರ ರಚನೆಗೆ ಹನೂರು ಕ್ಷೇತ್ರದ ಜನತೆ ಜೆಡಿಎಸ್‌ ಪಕ್ಷಕ್ಕೆ ಬೆಂಬಲ ಸೂಚಿಸಬೇಕು ಎಂದು ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು. 

HD Kumaraswamy should support the formation of the Government Says Nikhil Kumaraswamy gvd

ಹನೂರು (ಫೆ.17): ರಾಜ್ಯದ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷ ಜೆಡಿಎಸ್‌ ಬೆಂಬಲಿಸಿ, ಹನೂರು ಕ್ಷೇತ್ರದಲ್ಲಿ ಈ ಬಾರಿ ಮಂಜುನಾಥ್‌ ಅವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಕುಮಾರಣ್ಣ ಸರ್ಕಾರ ರಚನೆಗೆ ಹನೂರು ಕ್ಷೇತ್ರದ ಜನತೆ ಜೆಡಿಎಸ್‌ ಪಕ್ಷಕ್ಕೆ ಬೆಂಬಲ ಸೂಚಿಸಬೇಕು ಎಂದು ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು. ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡು ಹನೂರಿನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಜೆಡಿಎಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಹನೂರು ಕ್ಷೇತ್ರಕ್ಕೆ ವಿಶೇಷ ಅನುದಾನ ತರುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು. ಈ ಭಾಗದಲ್ಲಿ ಕಾರ್ಖಾನೆಗಳನ್ನು ತೆರೆದು ನಿರುದ್ಯೋಗದ ಸಮಸ್ಯೆನಿವಾರಿಸುವ ಮೂಲಕ ಯುವಕ ಯುವತಿಯರು ಸ್ವಾಭಿಮಾನದಿಂದ ದುಡಿದು ಬದುಕುವ ನಿಟ್ಟಿನಲ್ಲಿ ಪಕ್ಷ ಕೆಲಸ ಮಾಡುತ್ತದೆ ಎಂದು ತಮ್ಮೆಲ್ಲರ ಆಶೀರ್ವಾದ ಕೋರುತ್ತಿದ್ದೇವೆ. ನನಗೆ ರಾಮನಗರ ಹಾಗೂ ಹನೂರುಕ್ಷೇತ್ರ ಎರಡು ಒಂದೇ ಎರಡು ಕ್ಷೇತ್ರಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದೇ ನನ್ನ ಮೂಲ ಗುರಿ ಎಂದರು.

ಎಲ್ಲರಲ್ಲೂ‘ನಮ್ಮ ಕಾಡು’ಎಂಬ ಭಾವನೆ ಮೂಡಲಿ: ರಿಷಬ್‌ ಶೆಟ್ಟಿ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿ ಮಂಜುನಾಥ್‌ ಅವರಿಗೆ 45,000 ಮತ ನೀಡಿದ್ದೀರಿ. ಮಂಜುನಾಥ್‌, ತಾಂತ್ರಿಕವಾಗಿ ಸೋತಿರಬಹುದು. ಆದರೆ, ಮತದಾರರ ಮನ ಗೆದ್ದಿದ್ದಾರೆ. ಸೋತರು ಎದೆಗುಂದದೆ ಯಾವುದೇ ಅಧಿಕಾರವಿಲ್ಲದಿದ್ದರೂ, ಕಳೆದ ಐದು ವರ್ಷಗಳಿಂದ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡು ಹಗಲಿರುಳು ಶ್ರಮಿಸುತ್ತಿದ್ದಾರೆ. ಕ್ಷೇತ್ರದ ಇವರನ್ನು ಶಾಸಕರನ್ನಾಗಿ ಮಾಡುವಂತೆ ಮನವಿ ಮಾಡಿದರು.

ಪತ್ರಕರ್ತರ ಭವನಕ್ಕೆ ನಿವೇಶನ ನೀಡಲು ಯತ್ನ: ಶಾಸಕ ಮಹೇಶ್‌

ಅಭ್ಯರ್ಥಿ ಎಂ.ಆರ್‌.ಮಂಜುನಾಥ್‌ ಮಾತನಾಡಿ, ಕುಮಾರಸ್ವಾಮಿ ಅವರು ರೈತ ಸಾಲಗಾರನಾಗಬಾರದು ಎಂಬ ಉದ್ದೇಶದಿಂದ ರೈತರ ಸಾಲ ಮನ್ನಾ ಮಾಡಿದ್ದಾರೆ. ಈ ಭಾಗದಲ್ಲಿ ರೈತರು ಹೆಚ್ಚಿನ ಮಟ್ಟದ ಅರಿಶಿಣ ಬೆಳೆಯುತ್ತಾರೆ. ಆದರೆ, ಸೂಕ್ತ ಬೆಲೆ ಸಿಗುತ್ತಿಲ್ಲ. ಅರಿಶಿನ ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಯಾವುದೇ ಸಂದರ್ಭದಲ್ಲೂ ಜೆಡಿಎಸ್‌ ಪಕ್ಷ ರೈತರ ಪರವಾಗಿ ನಿಲ್ಲುತ್ತದೆ. ಮಹಿಳೆಯರ ಪರ ಮತ್ತು ಯುವಕರ ಪರವಾಗಿ ಕೆಲಸ ಮಾಡುವ ಪಕ್ಷ ಜೆಡಿಎಸ್‌ ಪಕ್ಷವಾಗಿದೆ. ಪ್ರಾದೇಶಿಕ ಪಕ್ಷ ಜೆಡಿಎಸ್‌ ನ್ನು ಬೆಂಬಲಿಸಿ ಎಂದು ಮನವಿ ಮಾಡಿದರು. ಪಟ್ಟಣ ಪಂಚಾಯತಿ ಸದಸ್ಯ ಆನಂದ್‌, ಚಾಮುಲ್‌ ನಿರ್ದೇಶಕ ಪ್ರಸಾದ್‌, ಯುವ ಮುಖಂಡರಾದ ರಾಹುಲ, ಅತೀಖ್‌ ಇದ್ದರು.

Latest Videos
Follow Us:
Download App:
  • android
  • ios