Asianet Suvarna News Asianet Suvarna News

'ದೊಡ್ಡ ಹುದ್ದೆಗೆ ಹೋದಂತೆ ಗರ್ವ ಬೇಡ'

ದೊಡ್ಡ ಹುದ್ದೆಗೆ  ಹೋದಂತೆ ಜ್ಞಾನ ಹೆಚ್ಚಾಗಬೇಕೆ ಹೊರತು ಗರ್ವ ಹೆಚ್ಚಾಗಬಾರದು ಎಂದು ಸಿ ಟಿ ರವಿ ವಿರುದ್ಧ ವಾಗ್ದಾಳಿ ನಡೆಸಲಾಗಿದೆ

HD Kumaraswamy Slams BJP Leader CT Ravi snr
Author
Bengaluru, First Published Oct 16, 2020, 7:53 AM IST

ಬೆಂಗಳೂರು (ಅ.16):  ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆಲ್ಲ ಬುದ್ಧಿಮತ್ತೆ ಕೂಡ ಹೆಚ್ಚಾಗಬೇಕೇ ಹೊರತು ಗರ್ವ ಬರಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಹಾಲಿ ಸಚಿವರೂ ಆಗಿರುವ ಬಿಜೆಪಿ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಕಿವಿಮಾತು ಹೇಳಿದ್ದಾರೆ.

ಆದರೆ ರವಿಯವರ ಮಾತುಗಳು ಆ ಹಂತ ತಲುಪಿದಂತೆ ಭಾಸವಾಗುತ್ತದೆ. ಬಳಸುವ ಭಾಷೆ ಅದನ್ನು ಪ್ರತಿಧ್ವನಿಸುತ್ತಿದೆ ಎಂದು ತಿಳಿಸಿದ್ದಾರೆ.

ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಕಾರ್ಯದರ್ಶಿ ಸ್ಥಾನಕ್ಕೆ ಅಂದಿನ ಬಿಜೆಪಿ ಅಧ್ಯಕ್ಷ ಮತ್ತು ಗೃಹ ಸಚಿವ ಅಮಿತ್‌ ಶಾ ಪುತ್ರ ರಾತ್ರೋರಾತ್ರಿ ಬಂದು ಕುಳಿತಿದ್ದಾರೆ. ಜಯ್‌ ಶಾ ಎಷ್ಟುಸೆಂಚುರಿಯನ್ನು ಎಲ್ಲಿ ಬಾರಿಸಿದ್ದಾರೆ? ಸಿ.ಟಿ.ರವಿಗೆ ಅಲ್ಪಜ್ಞಾನ ಇರುವುದಕ್ಕೆ ನನಗೆ ಕನಿಕರ. ಜಯ್‌ ಶಾ ಪದವಿ ಕೂಡ ಅವರಪ್ಪನ ಬಳುವಳಿ ಎಂದು ಹೇಳುವ ಧೈರ್ಯ ಕೂಡ ರವಿಗೆ ಇಲ್ಲ ಎಂದು ಲೇವಡಿ ಮಾಡಿದ್ದಾರೆ.

'ಕಾಂಗ್ರೆಸ್‌-ಎಸ್‌ಡಿಪಿಐ ವಾಟ್ಸಪ್ ಚಾಟ್‌ನಿಂದ ಸಂಚು ಬಯಲು' ...

ಸಿ.ಟಿ.ರವಿಗೆ ಬಹುಶಃ ತನ್ನದೇ ಪಕ್ಷದಲ್ಲಿ ಹೆಮ್ಮರವಾಗುತ್ತಿರುವ ವಂಶವಾಹಿ ರಾಜಕಾರಣದ ವಿರುದ್ಧ ಕೋಪ ಇರಬೇಕು. ಅದಕ್ಕಾಗಿ ಈ ವಿಚಾರ ಕೆಣಕಿದ್ದಾರೆ ಎಂದೆನಿಸುತ್ತಿದೆ. ರವಿಯವರು ಮಂತ್ರಿ ಪದವಿಗೆ ಹೋದದ್ದಕ್ಕೆ ಅಥವಾ ಭವಿಷ್ಯದಲ್ಲಿ ವಂಶವಾಹಿ ರಾಜಕಾರಣದಲ್ಲಿ ಬೆಳೆದು, ಪಕ್ಷದಲ್ಲಿ ತನ್ನ ಬುಡಕತ್ತರಿಸುವ ಆತಂಕದಿಂದ ಮತ್ತು ಬಿಜೆಪಿಯಲ್ಲಿನ ವೈರುಧ್ಯಗಳ ಬಗ್ಗೆ ಧ್ವನಿ ಎತ್ತಲು ಧೈರ್ಯ ಇಲ್ಲದೇ ಬೇರೆ ಪಕ್ಷಗಳ ವಂಶವಾಹಿ ಆಡಳಿತದ ಬಗ್ಗೆ ಪರೋಕ್ಷವಾಗಿ ಮಾತನಾಡುತ್ತಿದ್ದಾರೆ ಎಂಬುದು ಭಾಸವಾಗುತ್ತಿದೆ ಎಂದು ಕುಮಾರಸ್ವಾಮಿ ಅವರು ಟ್ವೀಟ್‌ ಮೂಲಕ ವಾಗ್ದಾಳಿ ನಡೆಸಿದ್ದಾರೆ.

Follow Us:
Download App:
  • android
  • ios