ಬೆಂಗಳೂರು (ನ.01) : ಉಪಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ. ಆದರೆ ಈ ಬಾರಿ ಮತದಾರರು ಹಣಕ್ಕೆ ಮಾರು ಹೋಗದೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಶನಿವಾರ ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದ ಪೀಣ್ಯ ಕೈಗಾರಿಕೋದ್ಯಮಿಗಳ ಜತೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಎರಡು, ಮೂರು ಸ್ಥಾನಕ್ಕೆ ಸ್ಪರ್ಧೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೀಡಿದ್ದು, ಯಾವ ಆಧಾರದಲ್ಲಿ ಹಾಗೆ ಹೇಳಿದ್ದಾರೆ? ಅವರಿಗೇನು ಕನಸು ಬಿದ್ದಿತ್ತಾ ಎಂದು ತಿರುಗೇಟು ನೀಡಿದರು.

ಕೆ.ಆರ್‌.ಪೇಟೆ ಕ್ಷೇತ್ರದಲ್ಲಿ ಬಂದ ಫಲಿತಾಂಶದಂತೆ ಶಿರಾದಲ್ಲಿಯೂ ಬರಲಿದೆ ಎಂದು ಭಾವಿಸಿದ್ದಾರೆ. ಆದರೆ, ಅದು ಉಲ್ಟಾಆಗಲಿದೆ. ಎರಡು ಕ್ಷೇತ್ರದಲ್ಲಿ ಜೆಡಿಎಸ್‌ ಗೆಲ್ಲುವ ವಿಶ್ವಾಸ ಇದೆ. ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಸ್ಟಾರ್‌ ಪ್ರಚಾರಕರೂ ಬಂದರೂ ಯಾವುದೇ ಪ್ರಯೋಜನವಾಗುವುದಿಲ್ಲ. ಕ್ಷೇತ್ರದ ಜನರು ಯಾವ ನಟರ ಪ್ರಚಾರದಿಂದಲೂ ಜನ ಮಾರುಹೋಗುವುದಿಲ್ಲ. ಮತ ಹಾಕುವವರು ಮನೆಯಲ್ಲಿದ್ದಾರೆ. ಅವರು ಹೊಸ ಬದಲಾವಣೆ ತರಲಿದ್ದು, ಮತದಾನದ ದಿನದಂದು ಬಂದು ಯಾರಿಗೆ ಮತ ಹಾಕಬೇಕು ಎಂಬುದು ಗೊತ್ತಿದೆ ಎಂದರು.

ಕುಸುಮಾ ಸ್ಪರ್ಧೆಯಿಂದ ಕೈ ಪರ ಅಲೆ ಸೃಷ್ಟಿ: ಸಂಸದ ಡಿ.ಕೆ.ಸುರೇಶ್‌ ...

ಮುನಿರತ್ನ ಅವರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂಬ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಪತನಗೊಳಿಸಿದ 17 ಮಂದಿಯನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಹಿಂದೆಯೇ ಹೇಳಿದ್ದರು. ಆ ಮಾತು ಉಳಿಸಿಕೊಳ್ಳುತ್ತಿದ್ದಾರೆ. 

"

17 ಮಂದಿಗೆ ನೀಡಿರುವ ಭರವಸೆಯನ್ನು ಈಡೇರಿಸುವ ಮುಖ್ಯಮಂತ್ರಿ ಆರೂವರೆ ಕೋಟಿ ಜನರ ಪರಿಸ್ಥಿತಿ ಏನಾಗಿದೆ ಎಂಬುದನ್ನು ನೋಡಬೇಕು. ಉತ್ತರ ಕರ್ನಾಟಕದಲ್ಲಿ ಜನರು ಸಾಯುತ್ತಿದ್ದು, ಅವರನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ವಾಗ್ದಾಳಿ ನಡೆಸಿದರು.