ಮನಗೂಳಿ ಅವರನ್ನು ಡಿಕೆಶಿ ಭೇಟಿಯಾಗಿದ್ದು ಸುಳ್ಳು: ಎಚ್‌ಡಿಕೆ

  •  ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ತಪ್ಪು
  • ರಾಜಕೀಯವಾಗಿ, ವೈಯಕ್ತಿಕವಾಗಿ, ‘ಅನೈತಿಕ’ ಎಂಬುದು ನನ್ನ ಅಭಿಪ್ರಾಯ 
HD kumaraswamy slams KPCC President DK Shivakumar snr

 ಬೆಂಗಳೂರು (ಅ.10):   ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ (Politics), ವೈಯಕ್ತಿಕವಾಗಿ, ‘ಅನೈತಿಕ’ ಎಂಬುದು ನನ್ನ ಅಭಿಪ್ರಾಯ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ (DK shivakumar) ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD kumaraswamy) ತಿರುಗೇಟು ನೀಡಿದ್ದಾರೆ.

ನಿಧನರಾಗಿರುವ 15 ದಿನ ಮೊದಲು ಮಾಜಿ ಸಚಿವ ಎಂ.ಸಿ.ಮನಗೂಳಿ (MC Managuli ತಮ್ಮ ಮನೆಗೆ ಬಂದು ಮಕ್ಕಳನ್ನು ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಕೇಳಿದ್ದರು ಎಂಬ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೋವಿಡ್‌ (Covid) ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ (Apollo) ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು. ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಹಾಗಾದರೆ, ಮನಗೂಳಿ ಅವರು ಡಿ.ಕೆ.ಶಿವಕುಮಾರ್‌ ಮನೆಗೆ ಹೋಗಿದ್ದು ಯಾವಾಗ? ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂದಿದ್ದು ಎಂದು? ಟ್ವೀಟ್‌ ಮಾಡಿದ್ದಾರೆ.

ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳು ವಿಜಯಪುರ (Vijayapura) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎಂದು ತಿಳಿಸಿದ್ದಾರೆ.

ಈ ಸಂಬಂಧ ಟ್ವಿಟರ್‌ (Twitter) ಮಾಡಿರುವ ಅವರು, ಡಿ.ಕೆ.ಶಿವಕುಮಾರ್‌ ಅಪ್ಪಟ್ಟಸುಳ್ಳು ಹೇಳುವ ಮೂಲಕ ದಿವಂಗತ ಎಂ.ಸಿ.ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ ಎಂದು ಕಟುವಾಗಿ ಟೀಕಿಸಿದ್ದಾರೆ.

ದಳಪತಿಗಳಿಗೆ ಬಿಗ್ ಶಾಕ್: ಜೆಡಿಎಸ್‌ ಅಭ್ಯರ್ಥಿಯಾಗಬೇಕಿದ್ದ ನಾಯಕ ಕಾಂಗ್ರೆಸ್ ಸೇರ್ಪಡೆ

ತಾವು ನಿಧನರಾಗುವುದಕ್ಕೆ 15 ದಿನಗಳ ಮೊದಲು ಮನಗೂಳಿ ಅವರು ತಮ್ಮ ಪುತ್ರ ಅಶೋಕ್‌ (Ashok) ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ. ಆರೋಗ್ಯ (Health) ಸರಿ ಇಲ್ಲ. ಎಷ್ಟುದಿನ ಇರುತ್ತೇನೋ ಗೊತ್ತಿಲ್ಲ. ಅಶೋಕನನ್ನು ನಿಮ್ಮ ಮತ್ತು ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ಸುಳ್ಳುಗಳನ್ನು ಸೃಷ್ಟಿಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ. ಸತ್ಯ ಏನೆಂದರೆ, ಕೋವಿಡ್‌ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ (Bengaluru) ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು. ಜ.9ರಂದು ಮನಗೂಳಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿ, ಜ.28ರಂದು ಅಲ್ಲಿಯೇ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳು ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎಂದು ತಿಳಿಸಿದ್ದಾರೆ.

ಹಾಗಾದರೆ, ಮನಗೂಳಿ ಅವರು ಡಿ.ಕೆ.ಶಿವಕುಮಾರ್‌ ಮನೆಗೆ ಹೋಗಿದ್ದು ಯಾವಾಗ? ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂದಿದ್ದು ಎಂದು? ಅವರ ‘ಹಸಿ ಸುಳ್ಳುಗಳು ಅಸಹ್ಯ ಹುಟ್ಟಿಸುವಂತಿವೆ’. ನಮ್ಮ  ಜೆಡಿಎಸ್ (JDS) ಪಕ್ಷದ ಅಭ್ಯರ್ಥಿಯಾಬೇಕಿದ್ದ ಅಶೋಕ್‌ ಮನಗೂಳಿ ಅವರನ್ನು ಹೈಜಾಕ್‌ (Hijack) ಮಾಡಿಕೊಂಡು ಹೋಗಿದ್ದಲ್ಲದೆ, ಈಗ ಸುಳ್ಳುಗಳ ಸರಮಾಲೆ ಹಣೆಯುತ್ತಾ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ. ಸಿಂದಗಿ ಜನತೆಗೆ ಯಾಮಾರಿಸುವ ಪ್ರಯತ್ನ ಬೇಡ. ಅಭ್ಯರ್ಥಿಗೆ ದಿಕ್ಕಿಲ್ಲದ ಕಾಂಗ್ರೆಸ್‌ ಪಕ್ಷದ ನಾಯಕರು ಈಗ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ನಮ್ಮ ಪಕ್ಷ ಮತ್ತು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಬಗ್ಗೆ ಅಚಲ ನಿಷ್ಟೆಹೊಂದಿದ್ದ ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ ಎಂದು ಕಿಡಿಕಾರಿದ್ದಾರೆ.

Latest Videos
Follow Us:
Download App:
  • android
  • ios