Asianet Suvarna News Asianet Suvarna News

HDK VS Congress ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಅಲ್ಲ, ಕ್ಲರ್ಕ್ ಆಗಿದ್ದೆ, ಹೆಚ್‌ಡಿ ಕುಮಾರಸ್ವಾಮಿ!

  • ಕಾಂಗ್ರೆಸ್ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ
  • ಸಮ್ಮಿಶ್ರ ಸರ್ಕಾರದ ಅಧಿಕಾರವದಿ ವಿವರಿಸಿದ ಹೆಚ್‌ಡಿಕೆ
  • ಕೆಎಸ್ ಈಶ್ವರಪ್ಪ ಬೆಂಬಲಕ್ಕೆ ನಿಂತ ಕುಮಾರಸ್ವಾಮಿ
HD Kumaraswamy Support KS Eshwarappa on Saffron Flag Remark slams Congress over Politics ckm
Author
Bengaluru, First Published Feb 19, 2022, 5:23 AM IST | Last Updated Feb 19, 2022, 5:23 AM IST

ಬೆಂಗಳೂರು(ಫೆ.19): ಹಿಂದಿನ ಜೆಡಿಎಸ್‌-ಕಾಂಗ್ರೆಸ್‌(Congress JDS) ನೇತೃತ್ವದ ಸಮ್ಮಿಶ್ರ ಸರ್ಕಾರದ ಆಡಳಿತ ಅವಧಿಯಲ್ಲಿ ನಾನು ಮುಖ್ಯಮಂತ್ರಿಯಲ್ಲ, ಎಫ್‌ಡಿಸಿ ಕೆಲಸ ಮಾಡಿದ್ದೆ ಅಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ(HD Kumaraswamy) ಅಸಮಾಧಾನ ಹೊರಹಾಕಿದ್ದಾರೆ.

ಶುಕ್ರವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಬಾರಿಯ ಸದನದಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ, ಹಗರಣಗಳ ಬಗ್ಗೆ ಸದನದಲ್ಲಿ ದಾಖಲೆಗಳನ್ನಿಡಲು ತಯಾರಿ ಮಾಡಿಕೊಂಡಿದ್ದೆ. ಆದರೆ, ಸದನವು ಸರಿಯಾಗಿ ನಡೆಯಲೇ ಇಲ್ಲ. 14 ತಿಂಗಳು ಆಡಳಿತ ಮಾಡಿದ್ದು, ಆಗ ಸರಿ ಮಾಡಬಹುದಿತ್ತಲ್ಲ ಎಂದು ಯಾರಾದರೂ ಕೇಳಬಹುದು. ಆದರೆ, ನಾನು ಆಗ ಮುಖ್ಯಮಂತ್ರಿಯಲ್ಲ, ಎಫ್‌ಡಿಸಿ ಕೆಲಸ ಮಾಡಿದ್ದೆ ಅಷ್ಟೇ ಎಂದು ಬೇಸರದಿಂದ ನುಡಿದರು.

Karnataka Politics ರಾಮನಗರದಲ್ಲಿ ಜೆಡಿಎಸ್‌ಗೆ ಬಿಗ್ ಶಾಕ್, ಪ್ರಭಾವಿ ಮುಖಂಡರು ಬಿಜೆಪಿ ಸೇರ್ಪಡೆಗೆ ವೇದಿಕೆ ಸಿದ್ಧ

ಪ್ರತಿಷ್ಠೆಗೆ ಬಿದ್ದು ಸಚಿವರ ರಾಜೀನಾಮೆ ಪಡೆಯಲು ಹೊರಟ ಕಾಂಗ್ರೆಸ್‌ ನಡೆಯನ್ನು ಜನ ಗಮನಿಸುತ್ತಿದ್ದಾರೆ. ಕಲಾಪಕ್ಕೆ ಅಡ್ಡಿ ಮಾಡುವವರನ್ನು ಸದನದಿಂದ ಅಮಾನತು ಮಾಡಿ, ನಂತರ ಸದನ ನಡೆಸುವಂತೆ ಸಭಾಧ್ಯಕ್ಷರಿಗೂ ಮನವಿ ಮಾಡುತ್ತೇನೆ. ಕೋವಿಡ್‌ ಅನಾಹುತ ಸಂದರ್ಭದಲ್ಲಿ ಆಗುತ್ತಿರುವ ಮತ್ತೊಂದು ‘ರಾಜಕೀಯ ಕೋವಿಡ್‌ ದುರಂತ’ ಇದು. ಈ ವಿನಾಶಕಾರಿ ಕೋವಿಡ್‌ ಅನ್ನು ಎಲ್ಲಾ ಸೇರಿ ಹರಡಿಸಬೇಡಿ. ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ಮಾಡಲು ಸದನಕ್ಕೆ ಬಂದಿದ್ದೇವೆ. ಆದರೆ, ಹಿಜಾಬ್‌ ಮತ್ತು ಕೇಸರಿ ಶಾಲು ಎಂದು ಕಲಾಪ ಹಾಳು ಮಾಡಿದರು. ಆಮೇಲೆ ಸಚಿವರ ರಾಷ್ಟ್ರಧ್ವಜದ ಹೇಳಿಕೆ ಇಟ್ಟುಕೊಂಡು ಎರಡು ದಿನಗಳ ಕಾಲ ಕಲಾಪವನ್ನು ಹಾಳುಗೆಡವಿದರು. ಇದನ್ನು ಒಪ್ಪಲು ಸಾಧ್ಯವೇ? ತಪ್ಪು ಎಂದಿದ್ದಕ್ಕೆ ಕಾಂಗ್ರೆಸ್‌ ನಾಯಕರು ಈಗ ಬೇರೆ ರಾಗ ಹಾಡುತ್ತಿದ್ದಾರೆ ಎಂದು ತಿಳಿಸಿದರು.

ನೂರಾರು ಬೆಂಬಲಿಗರೊಂದಿಗೆ ಜೆಡಿಎಸ್ ಸೇರಿದ ನಿವೃತ್ತ ಸೈನಿಕ, ಮುಂದಿನ ಚುನಾವಣೆಯ ಅಭ್ಯರ್ಥಿ?

ಕರಾವಳಿಯ ಒಂದು ಭಾಗದಲ್ಲಿ ಶುರುವಾದ ಹಿಜಾಬ್‌ ಗೊಂದಲ ಇತರೆ ಭಾಗದವರಿಗೆ ಪ್ರೇರೇಪಣೆ ಕೊಟ್ಟಂತಾಗಿದೆ. ಆ ಪ್ರದೇಶದ ಕೆಲ ಭಾಗದಲ್ಲಿ ಮಕ್ಕಳು ಹಿಜಾಬ್‌ ಧರಿಸಿ ಶಾಲೆಗೆ ಹೋಗುತ್ತಿದ್ದರು. ತರಗತಿ ಪ್ರವೇಶ ಮಾಡುವ ಸಮಯದಲ್ಲಿ ಹಿಜಾಬ್‌ ತೆಗೆದು ಮನೆಗೆ ಹೋಗುವಾಗ ಮತ್ತೆ ಧರಿಸಿಹೋಗುತ್ತಿದ್ದರು. ಆರಂಭದಲ್ಲಿಯೇ ಚಿವುಟಿ ಹಾಕಬಹುದಾಗಿದ್ದ ವಿವಾದ ಎರಡು ಧರ್ಮದವರ ಸಂಘರ್ಷಕ್ಕೆ ಕಾರಣವಾಗಿದೆ. ಮಕ್ಕಳ ಮನಸ್ಸಲ್ಲಿ ದ್ವೇಷ ಬಿತ್ತಲಾಗಿದೆ. ಕೆಲ ಸಂಘಟನೆಗಳು ಇದನ್ನು ಮತಬ್ಯಾಂಕ್‌ ಆಗಿ ಪರಿವರ್ತನೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿವೆ. ಕಳೆದ ಎರಡು ದಿನಗಳಿಂದ ಎರಡು ಸದನದಲ್ಲಿ ಕಲಾಪಗಳು ಸ್ಥಗಿತಗೊಳಿಸುವ ಹಾಗೆ ಕಾಂಗ್ರೆಸ್‌ ನಡವಳಿಕೆ ಇದೆ. ಜನರು ಇದನ್ನು ಕ್ಷಮಿಸುವುದಿಲ್ಲ ಎಂದು ಹೇಳಿದರು.

ಸಚಿವ ಈಶ್ವರಪ್ಪ ಅವರು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಹಜವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರೇನೂ ಧ್ವಜಕ್ಕೆ ಅಪಮಾನವಾಗುವಂತಹ ಹೇಳಿಕೆ ನೀಡಿಲ್ಲ. ಹಾಗಂತ ನಾನೇನು ಈಶ್ವರಪ್ಪ ಪರ ವಕೀಲಿಕೆ ಮಾಡುತ್ತಿಲ್ಲ. ಕಾಂಗ್ರೆಸ್‌ ನಾಯಕರು ಸುಖಾ ಸುಮ್ಮನೆ ಸದನದ ಕಲಾಪ ವ್ಯರ್ಥ ಮಾಡದೆ ಹೈಕೋರ್ಟ್‌ನಲ್ಲಿ ಪಿಐಎಲ್‌ ಹಾಕಿ ಹೋರಾಟ ಮಾಡಲಿ
-ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಮತ್ತು ಕಲಾಪದ ಸಮಯ ಹಾಳು ಮಾಡುತ್ತಿರುವವರನ್ನು ಕೂಡಲೇ ಸದನದಿಂದ ಹೊರಹಾಕಿ ಅಥವಾ ಅಧಿವೇಶನದ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಮತ್ತು ರೈತರು, ಕಾರ್ಮಿಕರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ಕೇಸರಿ ಬಾವುಟ ವಿಷಯವನ್ನಿಟ್ಟುಕೊಂಡು ಎರಡು ದಿನಗಳ ಕಲಾಪವನ್ನು ಹಾಳು ಮಾಡಿದರು. ಸಚಿವರೊಬ್ಬರ ರಾಜೀನಾಮೆ ಪಡೆಯಬೇಕು ಎಂಬುದನ್ನೇ ಪ್ರತಿಷ್ಠೆ ಮಾಡಿಕೊಂಡು ಜನರ ನಿರೀಕ್ಷೆಗಳನ್ನು ಅವಹೇಳನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Latest Videos
Follow Us:
Download App:
  • android
  • ios