ಸಿಎಂ ಬದಲಾವಣೆ ವಿಚಾರದಲ್ಲಿ ದೇವೇಗೌಡ್ರ ಕುಟುಂಬ ಎಳೆಯುವುದು ಬೇಡ: ಎಚ್‌ಡಿಕೆ ಮನವಿ

* ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ರಾಜಕೀಯ 
* ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ
* ಕುಟುಂಬವನ್ನು ಎಳೆದು ತರುವುದು ಸರಿಯಲ್ಲ ಎಂದ ಎಚ್‌ಡಿಕೆ

HD Kumaraswamy Talks about Karnataka BJP Leadership Change rbj

ಮಂಡ್ಯ, (ಜೂನ್.14): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ರಾಜಕೀಯ ಗರಿಗೆದರಿದೆ. ಇನ್ನು ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಮಂಡ್ಯದ ಹನಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬವನ್ನು ಎಳೆದು ತರುವುದು ಸರಿಯಲ್ಲ. ನಾವು ಯಾರ ಪರವಾಗಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮಹತ್ವದ ನಿರ್ಧಾರ ಕೈಗೊಂಡ ಶಾಸಕರ ನಿಯೋಗ: ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಕೆ ಬಿರುಸು

ಜೆಡಿಎಸ್ ಹಾಗೂ ದೇವೇಗೌಡರನ್ನು ಎರಡೂ ರಾಷ್ಟ್ರೀಯ ಪಕ್ಷಗಳು ಹಲವಾರು ವರ್ಷಗಳಿಂದ ದುರ್ಬಳಕೆ ಮಾಡಿಕೊಂಡಿವೆ. ಕೊರೋನಾದಂಥ ಸಮಯವಲ್ಲಿ ರಾಜಕೀಯ ಮಾಡಬಾರದು ಎಂದು ಮೌನವಾಗಿದ್ದೇವೆ. ಮುಂದಿನ ದಿನಗಳಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ದ ಹೋರಾಟ ಮಾಡಲಾಗುವುದು. ಅಲ್ಲಿಯವರೆಗೂ ನಾವು ತಾಳ್ಮೆಯಿಂದ ಇರುತ್ತೇವೆ ಎಂದರು.

ಯಾರು ಮುಖ್ಯಮಂತ್ರಿಯಾಗಿ ಇರುತ್ತಾರೋ ಅದು ನಮಗೆ ಸಂಬಂಧವಿಲ್ಲದ ವಿಷಯವಾಗಿದೆ. ನಾಡಿನ ರಕ್ಷಣೆ ಮಾಡುವುದರ ಕಡೆ ಅಧಿಕಾರದಲ್ಲಿರುವವರು ಗಮನ ಕೊಡಬೇಕು. ಕೊರೋನಾವನ್ನು ನಿಯಂತ್ರಿಸಲು ಸರ್ಕಾರ ಕ್ರಮ ವಹಿಸಬೇಕು ಎಂದು ಹೇಳಿದರು.

Latest Videos
Follow Us:
Download App:
  • android
  • ios