ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಹಾಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಬೆಂಗಳೂರು, (ಅ.11): ಕೊರೋನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ ಶಿಕ್ಷಕರಿಗೆ 3 ವಾರ ಮಧ್ಯಂತರ ರಜೆ ಘೋಷಣೆ ಮಾಡಿ ಬಿಎಸ್ ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಬಿಎಸ್‌ ಯಡಿಯೂರಪ್ಪ ಅವರಿಗೆ ಧನ್ಯವಾದ ಹೇಳಿದ್ದಾರೆ. ವಿದ್ಯಾಗಮ ಯೋಜನೆಯನ್ನು ರದ್ದು ಮಾಡಿ ಶಾಲಾ ಶಿಕ್ಷಕರಿಗೆ ರಜೆ ಕೊಡಬೇಕೆಂದು ಎಚ್‌ಡಿಕೆ ಆಗ್ರಹಿಸಿದ್ದರು.

"

ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಗುಡ್‌ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ...!

ಈ ಬಗ್ಗೆ ಟ್ವೀಟ್ ಮಾಡಿರುವ ಎಚ್‌ಡಿಕೆ, ರಾಜ್ಯದ ಶಿಕ್ಷಕರ ಸಮಸ್ಯೆಗಳನ್ನು ನನ್ನ ಸಮಸ್ಯೆಗಳೆಂದೇ ಸದಾ ಭಾವಿಸುವ ನನ್ನ ನಿಲುವಿಗೆ ರಾಜ್ಯದ ವಿದ್ಯಾರ್ಥಿಗಳು, ಪೋಷಕರು, ಮಾಧ್ಯಮಗಳು ಕೂಡ ನನ್ನ ಬೆಂಬಲಕ್ಕೆ ನಿಂತಿದ್ದು ಅವರಿಗೆಲ್ಲ ಕೃತಜ್ಞನಾಗಿದ್ದೇನೆ ಎಂದಿದ್ದಾರೆ.

ಕಳೆದೊಂದು ವಾರದಿಂದ ಶಿಕ್ಷಕ ಸಮುದಾಯದ ನಾನಾ ರೀತಿಯ ಕಷ್ಟ ಕಾರ್ಪಣ್ಯಗಳನ್ನು ಕಂಡು ನನ್ನ ಮನಸು ವಿಹ್ವಲಗೊಂಡಿತ್ತು. ನನ್ನ ಭಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ ಎಂದು ಕುಮಾರಸ್ವಾಮಿ, ಯಡಿಯೂರಪ್ಪ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

Scroll to load tweet…

ನರಜನ್ಮವ ತೊಡೆದು ಹರಜನ್ಮವ ಮಾಡಿದ ಗುರುವೆ ನಮೋ, ಭವಬಂಧನವ ಬಿಡಿಸಿ ಪರಮಸುಖವ ತೋರಿದ ಗುರುವೆ ನಮೋ, ಭವಿಯೆಂಬುದ ತೊಡೆದು ಭಕ್ತೆ ಎಂದೆನಿಸಿದ ಗುರುವೆ ನಮೋ, ಚೆನ್ನಮಲ್ಲಿಕಾರ್ಜುನನ ತಂದೆನ್ನ, ಕೈವಶಕ್ಕೆ ಕೊಟ್ಟ ಗುರುವೆ ನಮೋ ನಮೋ - ಅಕ್ಕಮಹಾದೇವಿ ಎಂದು ಉದ್ಗರಿಸಿದ್ದಾರೆ.

Scroll to load tweet…