ಸಿಎಂ ಯಡಿಯೂರಪ್ಪಗೆ ಅಭಿನಂದನೆ ಹೇಳಿದ ಕುಮಾರಸ್ವಾಮಿ: ಕಾರಣ..?

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಕಾರಣ ಇಲ್ಲಿದೆ.

HD Kumaraswamy thanks to CM BS Yediyurappa For Launching His Scheme rbj

ಬೆಂಗಳೂರು, (ಜ.09): ನಾನು ಸಿಎಂ ಆಗಿದ್ದಾಗ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ರಚಿಸಿ ಹಣ ನೀಡಿದ್ದೆ, ಈ ಯೋಜನೆಗೆ ಸಿಎಂ ಯಡಿಯೂರಪ್ಪ ಅವರು ಮರುಚಾಲನೆ ನೀಡಿದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ನಾನು ಸಿಎಂ ಆಗಿದ್ದಾಗ 'ಕಾಂಪೀಟ್ ವಿತ್ ಚೀನಾ' ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ ರಚಿಸಿ, 500 ಕೋಟಿ ರೂ. ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ಆ ಕ್ಲಸ್ಟರ್‌ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ ಎಂದಿದ್ದಾರೆ.

ಜೆಡಿಎಸ್‌ ಸೇರಲು ಕಾಂಗ್ರೆಸ್ ಹಿರಿಯ ನಾಯಕ ಉತ್ಸುಕ: ದೇವೇಗೌಡ್ರನ್ನ ಭೇಟಿಯಾಗಿ ಮಾತುಕತೆ 

ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆ ಅಡಿಯಲ್ಲಿ ಆಟಿಕೆ ಉತ್ಪಾದನಾ ಘಟಕ ಆರಂಭಿಸುತ್ತಿರುವುದಾಗಿ ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ, ಕೇಂದ್ರ ಸರ್ಕಾರ ‘ಆತ್ಮನಿರ್ಭರ’ ಕಲ್ಪನೆ ಜಾರಿಗೆ ತರುವುದಕ್ಕೂ ಮೊದಲೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿತ್ತು. ಅದರ ಭಾಗವಾಗಿಯೇ ಚೀನಾಕ್ಕೆ ಸೆಡ್ಡು ಹೊಡೆಯುವ ಯೋಜನೆಗಳನ್ನು ರೂಪಿಸಿತ್ತು. 7 ಲಕ್ಷ ಕೋಟಿ ಮೊತ್ತದ ಜಾಗತಿಕ ಆಟಿಕೆ ಮಾರುಕಟ್ಟೆಯಲ್ಲಿ ಚೀನಾ ಪ್ರಬಲ ಹಿಡಿತ ಹೊಂದಿದೆ. ಇದರಲ್ಲಿ ಅಲ್ಪ ಪಾಲು ಕಸಿದರೂ ನಮ್ಮವರಿಗೆ ಉದ್ಯೋಗ ನೀಡಬಹುದು, ಆದಾಯ ಕೊಡಿಸಬಹುದು ಎಂಬುದು ನನ್ನ ಸರ್ಕಾರದ ದೂರದೃಷ್ಟಿಯಾಗಿತ್ತು. ಅದಕ್ಕೆ ಮರು ಚಾಲನೆ ನೀಡುತ್ತಿರುವ, ನನ್ನ ಯೋಜನೆಯನ್ನು ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಆಭಿನಂದನೆಗಳು ಎಂದು ಎಚ್ ಡಿಕೆ ಹೇಳಿದ್ದಾರೆ.

ನನ್ನ ಸರ್ಕಾರದ ಅವಧಿಯಲ್ಲಿ ಇಂಥ ಹಲವು ಕಾರ್ಯಕ್ರಮಗಳನ್ನು ಕೊಡಲಾಗಿದೆ. ಅವುಗಳಲ್ಲಿ ಈ ನೆಲದ ಸ್ವಾಭಿಮಾನ ಸಾರುವ ಯೋಜನೆಗಳೂ ಇವೆ ಎಂಬುದು ಗಮನಾರ್ಹ. ಅವುಗಳನ್ನು ಮರಳಿ ಜಾರಿಗೆ ತರುವುದರ ಕಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಂತನೆ ನಡೆಸುವುದು ಅತ್ಯಗತ್ಯ ನನ್ನ ಯೋಜನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ, ಆದಾಯ ಸಿಗುವ ಅಂಶಗಳು ಪ್ರಧಾನ ಎಂದು ಎಚ್ ಡಿಕೆ ಸಲಹೆ ನೀಡಿದ್ದಾರೆ.

Latest Videos
Follow Us:
Download App:
  • android
  • ios