Asianet Suvarna News Asianet Suvarna News

ಭಾರತೀಯ ಸಂಸ್ಕೃತಿ ಅಧ್ಯಯನ ಸಮಿತಿಯಲ್ಲಿ ಕನ್ನಡಿಗರಿಗೆ ಸ್ಥಾನವಿಲ್ಲ:HDK ಬೇಸರ

ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಈ ಸಮಿತಿ ಬಗ್ಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
 

hd kumaraswamy Tweets about Formed 16-member committee to study ancient Indian culture rbj
Author
Bengaluru, First Published Sep 16, 2020, 4:49 PM IST

ಬೆಂಗಳೂರು, (ಸೆ.16): ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾದುವೆ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಶ್ರೀಲಂಕಾಗೆ ಹೋಗಿದ್ದು ನಿಜ, ಸ್ಫೋಟಕ ಮಾಹಿತಿ ಇದ್ರೆ ಜಮೀರ್ ಹೊರ ತರಲಿ: ಎಚ್‌ಡಿಕೆ

ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ,ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ ಎಂದು ಎಚ್‌ಡಿಕೆ ಒತ್ತಾಯಿಸಿದ್ದಾರೆ.

Follow Us:
Download App:
  • android
  • ios