Asianet Suvarna News Asianet Suvarna News

ಬೆಳಗಾವಿ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿದವರ ಮನೆಗೆ ಬೆಂಕಿ: ಎಚ್‌ಡಿಕೆ ಫುಲ್ ಗರಂ

ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿದವರ ಮನೆಗೆ ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ.

HD Kumaraswamy un Happy Over Fire set to house Who Kannada flag hoisting at Belagavi rbj
Author
Bengaluru, First Published Jan 2, 2021, 2:57 PM IST

ಬೆಂಗಳೂರು, (ಜ.02) : ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜ ಡಿ.31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. ಕರ್ನಾಟಕದಲ್ಲಿ ಕನ್ನಡಿಗರಿಗೇ ಎಚ್ಚರಿಕೆ ನೀಡುವ ಧೈರ್ಯ ತೋರುವವರಿಗೆ ಶಾಸ್ತಿಯಾಗಬೇಕು ಎಂದು ಮಾಜಿ ಸಿಎಂಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ ನಮ್ಮ ಧ್ವಜ ಹಾರಿಸಲು ಹರಸಾಹಸಪಡುವುದು, ಅದಕ್ಕೆ ಕಾವಲು ಕಾಯುವುದು, ಧ್ವಜ ತೆರವು ಮಾಡದಂತೆ ಅಧಿಕಾರಿಗಳಲ್ಲಿ ಮನವಿ ಮಾಡುವುದು ಇವೆಲ್ಲವೂ ಕನ್ನಡಿಗರ ಸ್ವಾಭಿಮಾನಕ್ಕೆ ಉಂಟಾದ ಧಕ್ಕೆ ಎಂದಿದ್ದಾರೆ.

ಬೆಳಗಾವಿ: ಕನ್ನಡ ಧ್ವಜ ಹಾರಿಸಿದ್ದ ತಾಳೂಕರ ಅಂಗಡಿಗೆ ಬೆಂಕಿ

ಪಾಲಿಕೆ ಎದುರು ಧ್ಜಜ ಸ್ಥಾಪಿಸಿದ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳಕೂರ ಎಂಬುವವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಇಡಲು ಯತ್ನಿಸಿರುವ ಘಟನೆಯೂ ನಡೆದು ಹೋಗಿದೆ. ಕರ್ನಾಟಕದಲ್ಲಿ, ಕನ್ನಡ ಧ್ವಜಕ್ಕಾಗಿ ಹೋರಾಡಿದವರ ಮೇಲೆ ಪದೇ ಪದೇ ದಾಳಿ ನಡೆಯುತ್ತದೆ ಎಂದರೆ, ಅವರಿಗೆ ರಕ್ಷಣೆ ನೀಡಲಾಗುತ್ತಿಲ್ಲ ಎಂದರೆ ಆಳುವವರ ಕನ್ನಡಾಭಿಮಾನ, ನಾಡ ಪ್ರೇಮ ಪ್ರಶ್ನಾರ್ಹ ಎಂದು ಟ್ವೀಟ್ ಮಾಡಿದ್ದಾರೆ.

ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜ ಡಿ.31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. ಕರ್ನಾಟಕದಲ್ಲಿ ಕನ್ನಡಿಗರಿಗೇ ಎಚ್ಚರಿಕೆ ನೀಡುವ ಧೈರ್ಯ ತೋರುವವರಿಗೆ ಶಾಸ್ತಿಯಾಗಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.

Follow Us:
Download App:
  • android
  • ios