Asianet Suvarna News Asianet Suvarna News

ಕುಮಾರಸ್ವಾಮಿ ಪತ್ರ: ರಾಮನಗರ, ಚನ್ನಪಟ್ಟಣ ಲಾಕ್ ಡೌನ್ ಆಗುತ್ತಾ?

ಕೊರೋನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಲಾಕ್ ಡೌನ್ ಜಾರಿ ಮಾಡುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

HD Kumaraswamy urges DC To lockdown In Channapatna and ramanagara for Covid19
Author
Bengaluru, First Published Jun 24, 2020, 10:07 PM IST

ರಾಮನಗರ, (ಜೂನ್ 24) : ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಬುಧವಾರ ರಾಮನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಅವರು, ರಾಮನಗರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿರುವ ಕಾರಣ ಸಾರ್ವಜನಿಕರ ಅಗತ್ಯ ಸೇವೆ ಹೊರತುಪಡಿಸಿ ಲಾಕ್ ಡೌನ್ ಜಾರಿ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಕೊರೋನಾ ನಿಯಂತ್ರಣ; ರಾಜ್ಯ ಸರ್ಕಾರಕ್ಕೆ ಕೊನೆ ಪ್ಲ್ಯಾನ್ ನೀಡಿದ ಕುಮಾರಸ್ವಾಮಿ

ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅನುಕೂಲವಾಗುವಂತೆ ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅನುಕೂಲ ಕಲ್ಲಿಸಬೇಕು. ಉಳಿದಂತೆ 11 ಗಂಟೆಯಿಂದ ಮುಂಜಾನೆ 7 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಬೇಕು. ಯಾವುದೇ ಕಾರಣಕ್ಕೂ ಅಂಗಡಿಗಳನ್ನು ತೆರೆಯುವುದು ಇಲ್ಲವೇ ಸಾರ್ವಜನಿಕರ ತಿರುಗಾಟಕ್ಕೆ ಅವಕಾಶ ನೀಡಬಾರದೆಂದು ಕುಮಾರಸ್ವಾಮಿ, ಜಿಲ್ಲಾಧಿಕಾರಿಗೆ ಬರೆದಿರುವ ಪತ್ರದಲ್ಲಿ ಒತ್ತಾಯ ಮಾಡಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಬುಧವಾರ 22 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 114ಕ್ಕೆ ಏರಿಕೆಯಾಗಿದೆ.  

ಡಿಕೆ ಶಿವಕುಮಾರ್ ಅವರು ತಮ್ಮ ಕ್ಷೇತ್ರವಾದ ಕನಕಪುರವನ್ನು ಲಾಕ್‌ಡೌನ್ ಮಾಡಿಸಿದ್ದಾರೆ. ಅದರಂತೆ ಎಚ್. ಡಿ. ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರ ಚನ್ನಪಟ್ಟಣ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಕ್ಷೇತ್ರವಾದ ರಾಮನಗರವನ್ನು ಲಾಕ್‌ಡೌನ್ ಮಾಡಿಸಲು ಮುಂದಾಗಿದ್ದಾರೆ.

Follow Us:
Download App:
  • android
  • ios