ಮೈಸೂರು: ವರುಣದಲ್ಲಿ ಸಿದ್ದು ಹಣಿಯಲು ಅಹಿಂದ ಅಸ್ತ್ರ ಬಿಟ್ಟ ಕುಮಾರಸ್ವಾಮಿ

ಸಿದ್ದು ಹಣಿಯಲು ವರುಣ ಅಖಾಡಕ್ಕೆ ಕುಮಾರಸ್ವಾಮಿ ಧುಮುಕಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಪರ ವರುಣದಲ್ಲಿ ಕುಮಾರಸ್ವಾಮಿ ಪ್ರಚಾರ ಮಾಡಲಿದ್ದಾರೆ. 

HD Kumaraswamy will Be Attend the Ahinda Meeting in Mysuru grg

ಮೈಸೂರು(ಏ.25):  ವರುಣ ಕ್ಷೇತ್ರದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಏತನ್ಮಧ್ಯೆ ಅಹಿಂದ ನಾಯಕ ಸಿದ್ದರಾಮಯ್ಯರನ್ನ ಹಣಿಯಲು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಅಹಿಂದ ಅಸ್ತ್ರ ಹೂಡಿದ್ದಾರೆ. ಸಿದ್ದು ಹಣಿಯಲು ವರುಣ ಅಖಾಡಕ್ಕೆ ಕುಮಾರಸ್ವಾಮಿ ಧುಮುಕಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಪರ ವರುಣದಲ್ಲಿ ಕುಮಾರಸ್ವಾಮಿ ಪ್ರಚಾರ ಮಾಡಲಿದ್ದಾರೆ. ಅಹಿಂದ ಸಮಾವೇಶದ ಹೆಸರಿನಲ್ಲಿ ಇಂದು(ಮಂಗಳವಾರ) ಸಂಜೆ 4 ಗಂಟೆಗೆ ಪ್ರಚಾರ ಸಭೆ ಇದೆ. 

ಟಿ.ನರಸೀಪುರದ ತ್ರಿವೇಣಿ ಸಂಗಮ‌ ಸ್ಥಳದಲ್ಲಿ ಪ್ರಚಾರ ಸಭೆ ನಡೆಯಲಿದೆ. ದಕ್ಷಿಣದಲ್ಲಿ ನಿಂತು ರಾಜ್ಯದ ಮತದಾರರಿಗೆ ಕುಮಾರಸ್ವಾಮಿ ಸ್ಪಷ್ಟ ಸಂದೇಶ ನೀಡಲಿದ್ದಾರೆ. ಈ ಬಾರಿ ಸಿದ್ದರಾಮಯ್ಯರನ್ನ ಹಣಿಯಲು ಕುಮಾರಸ್ವಾಮಿ ದಲಿತ ಅಸ್ತ್ರ ಬಿಟ್ಟಿದ್ದಾರೆ. 

ರೈತರ ಕಣ್ಣೀರು ಒರೆಸಲು ಎಚ್‌ಡಿಕೆ ಸಿಎಂ ಆಗಬೇಕು: ಎಚ್‌ಡಿ ದೇವೇಗೌಡ

ಎರಡು ದಿನಗಳ ವಿಶ್ರಾಂತಿ ಬಳಿಕ ಚುನಾವಣಾ ಅಖಾಡಕ್ಕೆ ಎಚ್‌ಡಿಕೆ!

ಜ್ವರದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮನೆಗೆ ಮರಳಿದ್ದು, ಜೆ.ಪಿ.ನಗರದ ನಿವಾಸದಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೆರಳಲು ಸಿದ್ಧರಾಗಿದ್ದ ಕುಮಾರಸ್ವಾಮಿ, ಶನಿವಾರ ಜ್ವರದಿಂದಾಗಿ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಸಂಜೆ ಆಸ್ಪತ್ರೆಯಿಂದ ಡಿಸ್ಚಾಜ್‌ರ್‍ ಆಗಿ ಮನೆಗೆ ಮರಳಿದ್ದಾರೆ. ವಿಶ್ರಾಂತಿ ಪಡೆದುಕೊಳ್ಳುತ್ತಿರುವ ಅವರು ಮಂಗಳವಾರದಿಂದಲೇ ಪ್ರಚಾರಕ್ಕೆ ಧುಮುಕಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮೈಸೂರಿನ ಚಾಮರಾಜ ಕ್ಷೇತ್ರ ಮತ್ತು 3 ಗಂಟೆಗೆ ವರುಣ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.

ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆಯಲ್ಲಿಯೂ ಕಾರ್ಯಕರ್ತರ ಜತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಮಾಲೋಚನೆ ನಡೆಸಿದರು. ಅಲ್ಲದೇ, ಚುನಾವಣಾ ಪ್ರಚಾರದ ಕುರಿತು ರೂಪರೇಷೆ ಸಿದ್ಧಪಡಿಸಿದರು. ಭಾನುವಾರ ರಾಮನಗರ, ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಸಮಯ ನಿಗದಿ ಮಾಡಲಾಗಿತ್ತು. ಆದರೆ, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಚಾರ ರದ್ದುಪಡಿಸಿದರು. ಇದೀಗ ಚುನಾವಣೆ ಪ್ರಚಾರಕ್ಕೆ ತೆರಳಲು ಸಿದ್ಧವಾಗಿದ್ದು, ಮಂಗಳವಾರದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

Latest Videos
Follow Us:
Download App:
  • android
  • ios