ಬಿಎಸ್‌ವೈ ಸಿಎಂ ಆಗುವುದನ್ನು ತಡೆದಿದ್ದೇ ರೇವಣ್ಣ, ಡಿಸಿಎಂ ಹುದ್ದೆ ಈಡೇರಲಿಲ್ಲ ಎಂದು ಮೋಸ: ಜಿಟಿಡಿ
ನನ್ನನ್ನು ಅರ್ಥ ಮಾಡಿಕೊಳ್ಳಲು ನನ್ನ ಕುಟುಂಬಕ್ಕೆ ಆಗಿಲ್ಲ. ನಿಮಗೆ ಹೇಗೆ ಅರ್ಥವಾಗುತ್ತದೆ. ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ. ಸಿಎಂ ಸಿದ್ದರಾಮಯ್ಯ ಸೇರಿ ಯಾರೂ ನನ್ನನ್ನು ಬಂಧಿಸುವಂತೆ ಹೇಳಿಲ್ಲ ಎಂದು ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿ.ಟಿ.ದೇವೇಗೌಡ
ಮೈಸೂರು(ನ.29): ನನ್ನನ್ನು ಬಂಧಿಸುವ ಭೀತಿಯಿಂದ ರಕ್ಷಣೆ ಕೊಡುವಂತೆ ಯಾವತ್ತೂ ಯಾರನ್ನೂ ಕೇಳಿಕೊಂಡಿಲ್ಲ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದ್ದೇ ಎಚ್.ಡಿ.ರೇವಣ್ಣ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಇಲ್ಲದಿದ್ದರೆ ಜಿ.ಟಿ.ದೇವೇಗೌಡ ಅವರು ತಮ್ಮ ಮಗನೊಂದಿಗೆ ಜೈಲಿನಲ್ಲಿ ಇರಬೇಕಿತ್ತು ಎಂಬ ರೇವಣ್ಣ ಹೇಳಿಕೆಗೆ ನಗರದಲ್ಲಿ ಗುರುವಾರ ಪ್ರತಿಕ್ರಿಸಿದ ಅವರು, ನನ್ನನ್ನು ಅರ್ಥ ಮಾಡಿಕೊಳ್ಳಲು ನನ್ನ ಕುಟುಂಬಕ್ಕೆ ಆಗಿಲ್ಲ. ನಿಮಗೆ ಹೇಗೆ ಅರ್ಥವಾಗುತ್ತದೆ. ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ. ಸಿಎಂ ಸಿದ್ದರಾಮಯ್ಯ ಸೇರಿ ಯಾರೂ ನನ್ನನ್ನು ಬಂಧಿಸುವಂತೆ ಹೇಳಿಲ್ಲ ಎಂದು ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಒಗ್ಗಟ್ಟಿನ ಸಂದೇಶ ಸಾರಲು ಹೊರಟ ಜೆಡಿಎಸ್‌ಗೆ ಜಿಟಿಡಿಯದ್ದೇ ತಲೆನೋವು!
ನಾನು ಸಿದ್ದರಾಮಯ್ಯ ಅವರಿಂದ ಕರೆ ಮಾಡಿಸಿಲ್ಲ. ರಕ್ಷಣೆ ಕೊಡುವಂತೆ ಕುಮಾರಸ್ವಾಮಿ ಅವರನ್ನು ಕೇಳಿಲ್ಲ. ಜೈಲಿಗೆ ಹೋಗುವರ ಅಪರಾಧವನ್ನು ನಾನಾಗಲಿ, ನನ್ನ ಮಗನಾಗಲಿ ಮಾಡಿಲ್ಲ ಎಂದರು. ಈ ಹಿಂದೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ 20-20 ಸರ್ಕಾರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಬೇಕಿತ್ತು. ರೇವಣ್ಣ ತಾನು ಉಪಮುಖ್ಯಮಂತ್ರಿ ಆಗಬೇಕು ಅಂದುಕೊಂಡಿದ್ದರು. ಅವರ ಆಸೆ ಈಡೇರದ ಕಾರಣ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೊತೆ ಮಾತನಾಡಿ ಯಡಿಯೂರಪ್ಪ ಅವರಿಗೆ ಸಿಎಂ ಸ್ಥಾನ ತಪ್ಪಿಸಿದರು. ಈ ಬಗ್ಗೆ ರೇವಣ್ಣ ಒಪ್ಪಿಕೊಂಡು ಕ್ಷಮೆ ಸಹ ಯಾಚಿಸಿದ್ದಾರೆ ಎಂದರು
ಇನ್ಮುಂದೆ ಪ್ರತಿಕ್ರಿಯಿಸಲ್ಲ ಇನ್ನು ಮುಂದೆ ನಾನು ರಾಜಕೀಯ ವಾಗಿ ಯಾರ ವಿರುದ್ಧವೂ ಮಾತನಾಡು ವುದಿಲ್ಲ. ನನ್ನನ್ನು ಕಳ್ಳ ಅಂದರೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇದೇ ಕೊನೆ ಪ್ರತಿಕ್ರಿಯೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ನನಗೆ ರಾಜಕೀಯದಿಂದ ನಿವೃತ್ತಿ ಕೊಡಿಸಲು ಅವರು ತಯಾರಿದ್ದಾರೆ: ಜಿ.ಟಿ.ದೇವೇಗೌಡ ಅಸಮಾಧಾನ
ಮೈಸೂರು: ನನಗೆ ರಾಜಕೀಯದಿಂದ ನಿವೃತ್ತಿ ಕೊಡಿಸಲು ಅವರು ತಯಾರಿದ್ದಾರೆ. ಅವರಿಗೆ ನಾನು ಬೇಡ, ನನ್ನ ಮಗ ಬೇಕು ಎಂದು ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಚುನಾವಣೆಯಲ್ಲಿ ನನ್ನನ್ನು ಯಾರು ಕರೆದಿದ್ದರು ಹೇಳಿ. ಅಭ್ಯರ್ಥಿ ಕರೆಯಲಿಲ್ಲ. ಅಭ್ಯರ್ಥಿಯ ತಾಯಿ ಕರೆಯಲಿಲ್ಲ. ದೊಡ್ಡ ಗೌಡರು ಕರೆಯಲಿಲ್ಲ. ಅವರಿಗೆ ನನ್ನ ಅವಶ್ಯಕತೆ ಇದ್ದಂತೆ ಕಾಣುತ್ತಿಲ್ಲ ಎಂದರು.
ಜಿ.ಟಿ. ದೇವೇಗೌಡರು ಕಾಂಗ್ರೆಸ್‌ಗೆ ಹೋಗಿದ್ದರೆ ಇಂದು ಸಚಿವರಾಗಿರುತ್ತಿದ್ದರು: ಸಿ.ಎಂ. ಇಬ್ರಾಹಿಂ
ನಾನು ಬೇಡ, ನನ್ನ ಮಗ ಬೇಕು. ಜಿ.ಟಿ. ದೇವೇಗೌಡನಿಗೆ ವಯಸ್ಸಾಗಿದೆ, ರಾಜಕೀಯದಿಂದ ನಿವೃತ್ತಿಯಾಗಲಿ. ನಮಗೆ ಜಿ.ಟಿ. ದೇವೇಗೌಡರ ಮಗ ಸಾಕು ಎಂಬ ಆದೇಶ ಅವರಿಂದ ಆಗಿದೆ. ನನಗೆ ರಾಜಕೀಯದಿಂದ ನಿವೃತ್ತಿ ಕೊಡಿಸಲು ಅವರು ತಯಾರಿದ್ದಾರೆ. ಅವರಿಗೂ ಗೊತ್ತು ಕಾಂಗ್ರೆಸ್ ಹೌಸ್ ಫುಲ್ ಆಗಿದೆ, ಜೆಡಿಎಸ್ ಬಿಜೆಪಿ ಜೊತೆಯಲ್ಲಿ ಒಂದಾಗಿವೆ. ಅಲ್ಲಿಗೆ ಜಿ.ಟಿ. ದೇವೇಗೌಡನಿಗೆ ಸ್ಥಾನ ಇಲ್ಲ. ಹೀಗಾಗಿ, ನಿವೃತ್ತಿ ತೆಗೆದುಕೊಳ್ಳಲಿ ಎಂಬ ಭಾವನೆಯಲ್ಲಿದ್ದಾರೆ ಎಂದು ಅವರು ತಿಳಿಸಿದರು.
ನಿಖಿಲ್ ಸೋಲಬಾರದಿತ್ತು:
ನನಗೂ ಕುಮಾರಸ್ವಾಮಿ ನಡುವೆ ಯಾವ ಮುನಿಸು ಇಲ್ಲ. ಅವರು ಆ ರೀತಿ ಬಿಂಬಿಸಿ ಬಿಡುತ್ತಾರೆ, ನಾನೇನು ಮಾಡಲಿ ಹೇಳಿ. ನಿಖಿಲ್ ಚನ್ನಪಟ್ಟಣದಲ್ಲಿ ಸೋಲ ಬಾರದಿತ್ತು. ಮೂರು ಸೋಲಿನಿಂದ ಅವರಿಗೆ ಬೇಸರವಾಗಿರುವುದು ನಿಜ. ಅವರು ಎದೆಗುಂದಬಾರದು. ಧೈರ್ಯವಾಗಿ ಮತ್ತೆ ಪಕ್ಷ ಸಂಘಟನೆಯಲ್ಲಿ ತೊಡಗಬೇಕು. ಮೂರು ಬಾರಿ ಸೋತವರು ಗೆದ್ದು ಮಂತ್ರಿಯಾಗಿ ಉನ್ನತ ಸ್ಥಾನಕ್ಕೆ ಹೋಗಿದ್ದಾರೆ ಎಂದರು. ನನಗೆ ಚನ್ನಪಟ್ಟಣ ಸೋಲಿಗೆ ಕಾರಣ ಗೊತ್ತಿಲ್ಲ. ನಾನು ಆ ಕ್ಷೇತ್ರಕ್ಕೆ ಪ್ರಚಾರಕ್ಕೆ ಹೋಗಿಲ್ಲ. ಏನಾಗಿದೆ ಎಂಬುದನ್ನ ನೋಡಿ ಹೇಳುತ್ತೇನೆ. ನಮಗೆ ನಿಖಿಲ್ ಗೆಲ್ಲುವ ವಿಶ್ವಾಸ ಇತ್ತು ಎಂದು ಅವರು ಹೇಳಿದರು.