ಮುಂಬರುವ ವಿಧಾನಸಭೆ ಚುನಾವಣೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ.
ಬೆಂಗಳೂರು, (ಜ.24): 2023ರಲ್ಲಿ ನಡೆಯಲಿರುವ ವಿಧಾಸಭಾ ಕ್ಷೇತ್ರಗಳಿಗೆ ಚುನಾವಣೆಗೆ ಜೆಡಿಎಸ್ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದೆ.
ಶತಾಯಗತಾಯ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಪಣ ತೊಟ್ಟಿದ್ದಾರೆ. ಆ ನಿಟ್ಟಿನಲ್ಲಿ ತಳಮಟ್ಟದಿಂದ ಪಕ್ಷವನ್ನು ಗಟ್ಟಿಗೊಳಿಸುವಲ್ಲಿ ನಿರತರಾಗಿದ್ದು, ಚುನಾವಣೆಗೆ ಇನ್ನೂ 2 ವರ್ಷ ಸಮಯ ಬಾಕಿ. ಆಗಲೇ ಕೆಲ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ತಳಮಟ್ಟದಿಂದ ಪಕ್ಷ ಸಂಘಟನೆಗೆ ಜೆಡಿಎಸ್ ಒತ್ತು, ಇಲ್ಲಿದೆ ದಳಪತಿಗಳ ಪಕ್ಕಾ ಪ್ಲಾನ್..!
ಹೌದು... ಆನೇಕಲ್ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ಸತಃ ಕುಮಾರಸ್ವಾಮಿಯೇ ಇಂದು (ಭಾನುವಾರ) ಘೋಷಿಸಿದರು.
ಜೆಪಿ ನಗರದಲ್ಲಿ ಹಮ್ಮಿಕೊಂಡಿದ್ದ ಆನೇಕಲ್ ಮತ್ತು ಬೆಂ.ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಚ್ಡಿಕೆ, ಆನೇಕಲ್ನಿಂದ ಕೆ.ಪಿ.ರಾಜು ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಪ್ರಭಾಕರ್ ರೆಡ್ಡಿ ಸ್ಪರ್ಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಕುಮಾರಸ್ವಾಮಿ ಆಪ್ತ ಜೆಡಿಎಸ್‌ಗೆ ರಾಜೀನಾಮೆ: ಪಕ್ಷದ ಮತ್ತೊಂದು ಪ್ರಮುಖ ವಿಕೆಟ್ ಪತನ
ಮುಂಬರುವ ಚುನಾಣೆಗೆ ಈ ಎರಡೂ ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿಗಳ ಹೆಸರನ್ನು ಜೆಡಿಎಸ್ ಪ್ರಕಟಿಸಿದ್ದು, ಇಲ್ಲಿನದ್ದೇ ರಾಜ್ಯದಲ್ಲಿ ಮೊದಲು. ಕಳೆದ ಬಾರಿ ಬಿಎಸ್ಪಿ ಜೊತೆ ಹೊಂದಾಣಿಕೆಯಿಂದ ನಮಗೆ ತೊಂದರೆ ಆಯಿತು. ಈ ಬಾರಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ. ಪಕ್ಷ ಸಂಘಟನೆಗಾಗಿ ಈಗಿನಿಂದಲೇ ಅಭ್ಯರ್ಥಿ ಘೋಷಣೆ ಮಾಡಿದ್ದೇನೆ. ಮುಂದಿನ ಬಾರಿ ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 24, 2021, 3:27 PM IST