Asianet Suvarna News Asianet Suvarna News

ಡಿಕೆಶಿ ಜೈಲಿಗೆ ಕಳಿಸಲು ಬಿಜೆಪಿ ಜೊತೆ ಎಚ್‌ಡಿಕೆ ಒಪ್ಪಂದ: ಶಾಸಕ ಲಕ್ಷ್ಮಣ ಸವದಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಹಾರ್‌ ಜೈಲಿಗೆ ಹೋಗುವ ಕಾಲ ದೂರವಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಹುಶಃ ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆ ಇದೇ ವಿಚಾರಕ್ಕೆ ಒಪ್ಪಂದ ಮಾಡಿಕೊಂಡು ಬಂದಿರಬೇಕು ಎಂದು ಹೇಳಿದ್ದಾರೆ. ‌

HDKs deal with BJP to send DKShi to jail Says MLA Laxman Savadi gvd
Author
First Published Oct 13, 2023, 4:45 AM IST

ಬೆಂಗಳೂರು (ಅ.13): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಹಾರ್‌ ಜೈಲಿಗೆ ಹೋಗುವ ಕಾಲ ದೂರವಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಹುಶಃ ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆ ಇದೇ ವಿಚಾರಕ್ಕೆ ಒಪ್ಪಂದ ಮಾಡಿಕೊಂಡು ಬಂದಿರಬೇಕು ಎಂದು ಹೇಳಿದ್ದಾರೆ. ‌

ಬಹುಶಃ ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ನಾಯಕರ ಬಳಿ ಡಿ.ಕೆ.ಶಿವಕುಮಾರ್‌ ಅವರನ್ನು ಜೈಲಿಗೆ ಕಳುಹಿಸುವ ವಿಷಯವನ್ನೇ ಮಾತನಾಡಿಕೊಂಡು ಬಂದಿರಬೇಕು. ಹಾಗಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದರು. ಬಿಜೆಪಿ ಲೀಡರ್ ಲೆಸ್ ಪಾರ್ಟಿ ಆಗಿದೆ. ವಿಪಕ್ಷ ನಾಯಕರೂ ಇಲ್ಲ, ರಾಜ್ಯಾಧ್ಯಕ್ಷರು ಇಲ್ಲ. ಹಂಗಾಮಿ ಅಧ್ಯಕ್ಷರಿದ್ದಾರೆ. ಹಾಗಾಗಿ ಅಲ್ಲಿರೋರು ಕಾಂಗ್ರೆಸ್‌ಗೆ ಬರುತ್ತಿದ್ದಾರೆ. ಬಹುಶಃ ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾರೆ. 

ಲೋಕಸಭೆ ಚುನಾವಣೆ ಜಯಕ್ಕೆ 'ಗ್ಯಾರಂಟಿ' ಅಸ್ತ್ರ ಬಳಸಿ: ಸಚಿವ ಕೃಷ್ಣ ಬೈರೇಗೌಡ

ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಬಿಜೆಪಿ ಜೊತೆ ಜೆಡಿಎಸ್ ಮುಂದೆ ವೀಲೀನ ಆಗುತ್ತದೆ.  ವಿಲೀನ ಆದರೆ ಕುಮಾರಸ್ವಾಮಿ ಅವರೇ ವಿರೋಧ ಪಕ್ಷದ ನಾಯಕರಾಗುತ್ತಾರೆ ಎಂದರು. ಕಾಂಗ್ರೆಸ್‌ನಲ್ಲಿ ಲಿಂಗಾಯತ ಅಧಿಕಾರಿಗಳ ಕಡೆಗಣಿಸಲಾಗಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ, ಇದು ಮುಗಿದು ಹೋಗಿರುವ ಸಮಸ್ಯೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರಿಗೆ ಮಾಹಿತಿ ಕೊರತೆ ಇರಬೇಕು ಎಂದರು.

ಈಶ್ವರಪ್ಪ ಆರೋಪ ಹೊಸದೇನಲ್ಲ: ಆಡಳಿತ ಪಕ್ಷದಲ್ಲೇ ಇದ್ದು ಓರ್ವ ಮಂತ್ರಿಯಾಗಿ ಇಂತಹ ಹೇಳಿಕೆ ನೀಡುತ್ತಿದ್ದರು. ಸ್ವಪಕ್ಷದ ಸಿಎಂ ಮೇಲೆ ಆಪಾದನೆ ಮಾಡುತ್ತಿದ್ದರು. ಸದ್ಯ ವಿರೋಧ ಪಕ್ಷದಲ್ಲಿದ್ದಾರೆ. ಇದೇನು ಹೊಸದೇನಲ್ಲ ಎನ್ನುವ ಮೂಲಕ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಅಥಣಿ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ತಿರುಗೇಟು ನೀಡಿದರು. ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನವರು ಇಂತಹ ಆರೋಪ ಮಾಡುವುದು ಹೊಸದಲ್ಲ.

ಕಾಂಗ್ರೆಸ್‌ ರಾಕ್ಷಸರ ಸಮರ್ಥನೆಗೆ ನಿಂತುಕೊಂಡಿದೆ: ಚಕ್ರವರ್ತಿ ಸೂಲಿಬೆಲೆ

ಬಿಜೆಪಿಯವರು ಹಿಂದುತ್ವ ಆಧಾರದ ಮೇಲೆ ಚುನಾವಣೆ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಎಲ್ಲ ಜನರನ್ನೂ ಒಟ್ಟಿಗೆ ತೆಗೆದುಕೊಂಡು ಕಾರ್ಯ ಮಾಡುತ್ತದೆ. ಕೆ.ಎಸ್‌.ಈಶ್ವರಪ್ಪನವರು ಹಿಂದುತ್ವವನ್ನು ಪ್ರತಿಪಾದನೆ ಮಾಡುತ್ತಾರೆ ಎಂದು ಹೇಳಿದರು. ಶಾಮನೂರು ಶಿವಶಂಕರಪ್ಪ ಲಿಂಗಾಯತರನ್ನು ಕಾಂಗ್ರೆಸ್ ಕಡೆಗಣಿಸಿದೆ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುವುದು ಗೊತ್ತಿಲ್ಲ ಎಂದು ತಿಳಿಸಿದರು.

Follow Us:
Download App:
  • android
  • ios