Asianet Suvarna News Asianet Suvarna News

ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಗಳನ್ನ ಹೈಕಮಾಂಡ್‌ ಗಮನಿಸ್ತಿದೆ: ಪ್ರಹ್ಲಾದ ಜೋಶಿ

2011ರಲ್ಲಿ ರಾಜ್ಯಪಾಲರು ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಿದ್ದಾರೆ ಎಂದು ಇದೇ ಕಾಂಗ್ರೆಸ್ ನಾಯಕರು ಹೇಳಿದ್ದರು. ಈಗ ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿದಾಕ್ಷಣ ರಾಜ್ಯಪಾಲರು ಸಂವಿಧಾನ ಮೀರಿದ್ದಾರೆ ಎನ್ನುತ್ತಿದ್ದಾರೆ. ಇದು ಕಾಂಗ್ರೆಸ್ಸಿಗರ ಅವಕಾಶವಾದಿತನ ಹಾಗೂ ಸಮಯ ಸಾಧಕ ಪ್ರವೃತ್ತಿ ತೋರುತ್ತದೆ ಎಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ 

High Command is taking note of Basanagouda Patil Yatnal's statements Says Pralhad Joshi grg
Author
First Published Sep 29, 2024, 10:38 AM IST | Last Updated Sep 29, 2024, 10:38 AM IST

ಹುಬ್ಬಳ್ಳಿ(ಸೆ.29):  ಮುಡಾ ಹಗರಣದಲ್ಲಿ ಸಿಲುಕಿದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡದಿದ್ದರೆ ಸಿಬಿಐ ತನಿಖೆಗೆ ವಹಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸವಾಲು ಎಸೆದಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಇಲ್ಲವೇ, ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯ ಮಾಡಿದರು. 

ಮುಡಾ ಹಗರಣದ ಎ-1 ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಗಿರುವುದರಿಂದ ಇಲ್ಲಿಯ ಅಧಿಕಾರಿಗಳು ಸರಿಯಾದ ತನಿಖೆ ಮಾಡಲ್ಲ. ಪರಿಣಾಮ ಸತ್ಯ ಹೊರಬರುವುದಿಲ್ಲ ಎಂದರು. ಇತ್ತೀಚೆಗಷ್ಟೇ ಲೋಕಾಯುಕ್ತಕ್ಕೆ ತಮಗೆ ಬೇಕಾದವರನ್ನು ನೇಮಕ ಮಾಡಿಕೊಂಡಿದ್ದಾರೆ. ಹೀಗಿರುವಾಗ ಸಿಎಂ ವಿರುದ್ದ ಲೋಕಾಯುಕ್ತ ಎಸಿ ಆಗಲಿ, ಕರ್ನಾಟಕ ಪೊಲೀಸ್ ಆಗಲಿ ಪಾರದರ್ಶಕ ತನಿಖೆ ನಡೆಸುವುದು ಅಸಾಧ್ಯದ ಮಾತು. ಹಾಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಇಲ್ಲವೇ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು. 

ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ: ಸಿಎಂ ಸಿದ್ದರಾಮಯ್ಯಗೆ ನೈತಿಕತೆ ಪಾಠ ಮಾಡಿದ ಯತ್ನಾಳ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಂಧನ ಕಾನೂನಿಗೆ ಬಿಟ್ಟ ವಿಷಯ. ಆದರೆ, ಅವರದ್ದೇ ಸರ್ಕಾರ ಇರುವುದರಿಂದ ಪ್ರಕರಣ ಸುದೀರ್ಘವಾಗಲಿದೆ. ನಮ್ಮ ಹೋರಾಟವೂ ಮುಂದುವರಿಯಲಿದೆ ಎಂದು ತಿಳಿಸಿದರು. 
2011ರಲ್ಲಿ ರಾಜ್ಯಪಾಲರು ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಿದ್ದಾರೆ ಎಂದು ಇದೇ ಕಾಂಗ್ರೆಸ್ ನಾಯಕರು ಹೇಳಿದ್ದರು. ಈಗ ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿದಾಕ್ಷಣ ರಾಜ್ಯಪಾಲರು ಸಂವಿಧಾನ ಮೀರಿದ್ದಾರೆ ಎನ್ನುತ್ತಿದ್ದಾರೆ. ಇದು ಕಾಂಗ್ರೆಸ್ಸಿಗರ ಅವಕಾಶವಾದಿತನ ಹಾಗೂ ಸಮಯ ಸಾಧಕ ಪ್ರವೃತ್ತಿ ತೋರುತ್ತದೆ ಎಂದರು.

ಕೋರ್ಟ್ ಸುದೀರ್ಘ ವಿಚಾರಣೆ ನಡೆಸಿ ಇವರದು ತಪ್ಪು ಎಂದು ತೀರ್ಪು ಕೊಟ್ಟ ಮೇಲೂ ಷಡ್ಯಂತ್ರ ಅಂತ ಹೇ ಳುತ್ತಾರೆ. ೮ 62 ಕೋಟಿ ಮೌಲ್ಯದ 14 ಸೈಟ್ ಪಡೆದುಕೊಂಡಿದ್ದಾರೆ. ಕೋರ್ಟ್ ಆದೇಶದಲ್ಲಿ ಕೋಟ್ ಮಾಡಿದೆ. ಆದರೂ ಇವರು ಪ್ರತಿದಿನ ರಾಜ್ಯಪಾಲರನ್ನು ಬೈಯುತ್ತಾರೆ. ಏನಿದು ನಾನ್ಸೆನ್ಸ್ ಎಂದು ಜೋಶಿ ಕಿಡಿಕಾರಿದರು.

ಸಿದ್ದರಾಮಯ್ಯ ವಿರುದ್ಧದ ಕೇಸಿಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಸಿಗೂ ವ್ಯತ್ಯಾಸವಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವಧಿಯಲ್ಲಿ ಕೂಡ ಎಲೆಕ್ಟೋಲ್ ಬಾಂಡ್‌ನಲ್ಲಿ ಹಣ ತೆಗೆದುಕೊಂಡಿದ್ದಾರೆ. ಅವರ ಮೇಲೂ ಎಫ್‌ಐಆ‌ರ್ ಮಾಡಬೇಕಾಗುತ್ತದೆ ಎಂದರು. 

ಆಗೇಕೆ ಧ್ವನಿ ಎತ್ತಲಿಲ್ಲ?: 

2002ರಲ್ಲಿ ಗೋದ್ರಾ ಘಟನೆ ಆದಾಗ ಸಿಎಂ ಆಗಿದ್ದ ನರೇಂದ್ರ ಮೋದಿ ರಾಜೀನಾಮೆ ನೀಡಲಿಲ್ಲ ಎಂದಿರುವ ಸಿದ್ದರಾಮಯ್ಯ ಆಗ ಏಕೆ ಅವರ ವಿರುದ್ಧ ಧ್ವನಿ ಎತ್ತಲಿಲ್ಲ? ಎಂದು ಪ್ರಶ್ನಿಸಿದ ಜೋಶಿ, ಆಗ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರನ್ನು ಅದರಲ್ಲಿ ಸಿಲುಕಿಸುವ ಪ್ರಯತ್ನ ಮಾಡಿದ್ದು ಕಾಂಗ್ರೆಸ್ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಸರ್ವರನ್ನೂ ಸಾಮಾಜಿಕ ನ್ಯಾಯದಲ್ಲೇ ಕಾಣುತ್ತಿದ್ದಾರೆ. ಗೋದ್ರಾ, ಗೋದ್ರೋತ್ತರ ಘಟನೆಗಳಲ್ಲಿ ಮೋದಿ ಅವರ ಪಾತ್ರವೇ ಇಲ್ಲವೆಂದು ಸ್ಪಷ್ಟಪಡಿಸಿದರು.

ಸರ್ಕಾರ ಅಸ್ಥಿರಗೊಳಿಸಲ್ಲ 

ಧಾರವಾಡ:  ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ಐದು ವರ್ಷಕ್ಕೆ ಆಡಳಿತ ನೀಡಿದ್ದಾರೆ. ಇಂತಹ ಸರ್ಕಾರಕ್ಕೆ ಕಿರುಕುಳ ಅಥವಾ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಂದಿನ ಬಾರಿ ಬಹುಮತ ಇಲ್ಲದ ಕಾರಣ ಕೈ ಸರ್ಕಾರದ ಪತ ನದ ಬಳಿಕ ಬಿಜೆಪಿ ಅಧಿಕಾರ ಹಿಡಿದಿದೆ. ಒಬ್ಬೊಬ್ಬ ಶಾಸ ಕರಿಗೆ ಈ 100 ಕೋಟಿ ಹಣ ನೀಡಿರುವುದು ಬೋಗಸ್. ಯಾವುದೇ ಕಾರಣಕ್ಕೆ ಕೈ  ಸರ್ಕಾರ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡಲ್ಲ ಎಂದು ಭರವಸೆ ನೀಡಿದರು. 

ಸಂಘ, ವರಿಷ್ಠರ ಮಧ್ಯಸ್ಥಿಕೇಲಿ ವಿಜಯೇಂದ್ರ ಜೊತೆಗೆ ಮಾತುಕತೆ ಸಿದ್ಧ: ಯತ್ನಾಳ್‌

ಕ್ರಮ ಕೈಗೊಳ್ಳಲಿಲ್ಲ ಏಕೆ?: 

2005-06ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು. 2008ಕ್ಕೆ ಅವರ ವಿರುದ್ಧ ಪ್ರಕರಣವಿತ್ತು. 2013-18ರ ವರೆಗೆ ಸಿದ್ದರಾ ಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದರೂ, ಕ್ರಮಕೈ ಗೊಳ್ಳಲಿಲ್ಲ ಏಕೆ? ಎಂದು ಪ್ರಶ್ನಿಸಿದರು. 2018-19ರ ಅಂತ್ಯದವರೆಗೆ ಜೆಡಿಎಸ್ ಶಾಸಕರ ಸಂಖ್ಯೆ ಕಡಿಮೆ ಇದ್ದರೂ ಬಿಜೆಪಿಗೆ ಅಧಿಕಾರ ತಪ್ಪಿಸಲು ಕುಮಾರಸ್ವಾಮಿ ಕಾಲು ಮುಗಿದು ಮುಖ್ಯಮಂತ್ರಿ ಮಾಡಿದ್ಯಾರು? 2008ರ ಪ್ರಕರಣಕ್ಕೆ ಕುಮಾರಸ್ವಾಮಿ ರಾಜೀನಾಮೆ ಕೇಳುವ ಸಿದ್ದರಾಮಯ್ಯ 2024ರಲ್ಲೇ ತನಿಖೆ ನಡೆಯುತ್ತಿದ್ದರೂ, ರಾಜೀನಾಮೆ ಕೊಡುವುದಿಲ್ಲ ಎನ್ನುವುದು ನಾಚಿಗೇಡು. ಏನು ಮಾತನಾಡಿದ್ದೇನೆ ಎನ್ನುವ ಪ್ರಜ್ಞೆಯೇ ಇದೆಯೇ? ಎಂದು ಪ್ರಶ್ನಿಸಿದರು.

ಶಾಸಕ ಯತ್ನಾಳ್‌ ಹೇಳಿಕೆ ಹೈಕಮಾಂಡ್ ಗಮನಿಸ್ತಿದೆ 

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ನಡೆಯನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಬಿಜೆಪಿಯನ್ನು ಗಂಗಾ ಜಲದಿಂದ ಶುದ್ಧೀಕರಣ ಮಾಡಬೇಕೆಂಬ ಯತ್ನಾಳ ಹೇಳಿಕೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜೋಶಿ, ಎಲ್ಲವನ್ನೂ ರಾಷ್ಟ್ರೀಯ ನೇತೃತ್ವ ಗಮನಿಸುತ್ತಿದೆ. ಎಲ್ಲ ಸಮಸ್ಯೆಗಳು ಶೀಘ್ರವೇ ಬಗೆಹರಿಯುತ್ತದೆ ಎಂದರು.

Latest Videos
Follow Us:
Download App:
  • android
  • ios