ಕೋರ್ಟ್‌ ತೀರ್ಪಿಗೆ ಗೌರವ ಇದೆ, ಆದ್ರೆ ಸಿದ್ದರಾಮಯ್ಯ ರಾಜೀನಾಮೆ ಕೊಡೋದಿಲ್ಲ: ರಾಮಲಿಂಗಾ ರೆಡ್ಡಿ

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿಗೆ ಹೈಕೋರ್ಟ್ ತಡೆ ನೀಡದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಸಿಎಂ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

High Court Allows Siddaramaiah prosecution in Muda minister Ramalinga reddy Comments san

ಬೆಂಗಳೂರು (ಸೆ.24): ದೇಶದ ಕೋರ್ಟ್‌ನ ಬಗ್ಗೆ ನಮಗೆ ಗೌರವವಿದೆ. ಆದರೆ, ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡೋದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಮುಡಾ ಕೇಸ್‌ನಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್‌ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದ ಸಿಎಂ ಸಿದ್ದರಾಮಯ್ಯಗೆ ನಿರಾಸೆಯಾಗಿದೆ. ಇಂದು ಪ್ರಕರಣದ ಕುರಿತಾಗಿ ತೀರ್ಪು ನೀಡಿದ ಜಸ್ಟೀಸ್‌ ನಾಗಪ್ರಸನ್ನ ಪೀಠ, ರಾಜ್ಯಪಾಲರು ಮಾಡಿರುವ ನಿರ್ಧಾರ ಸರಿಯಾಗಿದೆ. ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿಗೆ ತಡೆ ನೀಡೋದಿಲ್ಲ ಎಂದಿದೆ. ಈ ಬಗ್ಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಸಿಂಗಲ್ ಬೇಂಚ್ ನಲ್ಲಿ ಅನುಮತಿ ಕೊಟ್ಟಿದ್ದಾರೆ. ಇನ್ನು ಡಬಲ್ ಬೆಂಚ್ ಇದೆ. ನ್ಯಾಯಾಂಗದ ಮೇಲೆ ನಮಗೆ ನಂಬಿಕೆ ಇದೆ. 17 A ಮೂಲಕ ಅನುಮತಿ ಕೊಟ್ಟಿದ್ದಾರೆ. ಡಬಲ್ ಬೆಂಚ್ ನಲ್ಲಿ ನಾವು ಚಾಲೆಂಜ್ ಮಾಡುತ್ತೇವೆ' ಎಂದು ಹೇಳಿದ್ದಾರೆ.

ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ನಾವೆಲ್ಲರೂ ಅವರ ಜೊತೆ ಇದ್ದೇವೆ. ರಾಜ್ಯಪಾಲರ ಮುಂದಿಟ್ಟುಕೊಂಡು ದೇಶದೆಲ್ಲೆಡೆ ಇದೆ ರೀತಿ ಮಾಡುತ್ತಿದ್ದಾರೆ. ಕುಮಾರಸ್ವಾಮಿ, ನಿರಾಣಿ, ಡಿ ನೋಟಿಫೀಕೇಷನ್ ಅವರ ಕೇಸ್ ಗಳ ಬಗ್ಗೆ ರಾಜ್ಯಪಾಲರು ಕ್ರಮ ಕೈಗೊಳ್ಳಲಿ. ನಮ್ಮ ರಾಜ್ಯಕ್ಕೆ ಇಷ್ಟು ಅನ್ಯಾಯ ಆಗಿದ್ದರೂ ನಮ್ಮ ರಾಜ್ಯದ ಪರ ಮಾತನಾಡಲಿಲ್ಲ ಬಿಜೆಪಿಯವರು. ನಮ್ಮ ಪ್ರಕಾರ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಅಗತ್ಯ ಇರಲಿಲ್ಲ. ಈಗ ಅನುಮತಿ ಕೊಟ್ಟಿದ್ದಾರೆ. ಕೋರ್ಟ್ ತೀರ್ಪಿಗೆ ನಾವು ಗೌರವ ಕೊಡುತ್ತೇವೆ. ಡಬಲ್ ಬೆಂಚ್ ನಂತರ ಸುಪ್ರೀಂಕೋರ್ಟ್ ಇದೆ . ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇನ್ನೊಂದೆಡೆ ಹೈಕೋರ್ಟ್‌ ತೀರ್ಪಿನ ಬೆನ್ನಲ್ಲಿಯೇ ಬಿಜೆಪಿ ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ. 'ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ  ಸಿದ್ದರಾಮಯ್ಯ ನವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಇಂದು ತಾವು ಉಳಿಸಿಕೊಂಡಿಲ್ಲ. ರಾಜೀನಾಮೆ ನೀಡಿ, ತನಿಖೆ ಎದುರಿಸಿ. ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ ಇನ್ನು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ' ಎಂದು ಟ್ವೀಟ್‌ ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, 'ಕಾನೂನು ಎದುರು ಎಲ್ಲಾರೂ ಒಂದೇ ಎಂದು ಕೋರ್ಟ್ ಹೇಳಿದೆ. ಸಿದ್ದರಾಮಯ್ಯ ಅವರಲ್ಲಿ ನಮ್ಮ ಆಗ್ರಹ ಇಷ್ಟೇ. ರಾಜ್ಯಪಾಲರ ಮೇಲೆ ಆರೋಪ ಮಾಡಿದ್ದು ಬದಿಗೆ ಇಡಿ. ಕೋರ್ಟ್ ತೀರ್ಪು ಗೌರವಿಸಿ.. ಮುಖ್ಯಮಂತ್ರಿ ಗಳ ಮೇಲೆ ಆರೋಪ ಬಂದಿದೆ. ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸಿದ್ದಾರೆ.

Breaking: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಶಾಕ್; ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್!

ಇನ್ನು ವಿಪಕ್ಷ ನಾಯಕ ಆರ್‌. ಅಶೋಕ್‌, ಸಿಎಂ ಸಿದ್ದರಾಮಯ್ಯ ಅವರಿಗೆ ಶಾಪ ತಟ್ಟಿದೆ. ಗಣೇಶನನ್ನು ಬಂಧಿಸಿ ಇಟ್ಟ ಕಾರಣಕ್ಕಾಗಿ ಸಿಎಂಗೆ ಗಣೇಶನ ಶಾಪ ತಟ್ಟಿದೆ. ಅದಕ್ಕಾಗಿ ಇಂದು ಅವರ ವಿರುದ್ಧ ತೀರ್ಪು ಬಂದಿದೆ. ಈ ನಿರ್ಣಯ ಬಿಜೆಪಿಯ ಗೆಲುವು. ಬಿಜೆಪಿ ಈ ಹಗರಣದ ಕುರಿತು ಪಾದಾಯಾತ್ರೆ ಮಾಡಿತ್ತು. ವಿಧಾನಸಭೆಯ ಒಳಗೂ ಹೊರಗೂ ಪ್ರತಿಭಟನೆ ಮಾಡಿತ್ತು. ರಾಮಕೃಷ್ಣ ಹೆಗಡೆಯವರ ಶಿಷ್ಯ ಆಗಿದ್ದರೆ.  ನೈತಿಕತೆ ಇದ್ದರೆ ರಾಜಿನಾಮೆ ಕೊಡಲಿ' ಎಂದು ಹೇಳಿದ್ದಾರೆ.

ಸತ್ಯಮೇವ ಜಯತೇ..ಸಂವಿಧಾನದ ಬಗ್ಗೆ ಗೌರವ ಕೊಟ್ಟು ರಾಜೀನಾಮೆ ನೀಡಿ: ಬಿಜೆಪಿ ಆಗ್ರಹ!

Latest Videos
Follow Us:
Download App:
  • android
  • ios