ಹಿಮಾಚಲ ಪ್ರದೇಶದ 68 ವಿಧಾನಸಭಾ ಸ್ಥಾನಗಳಿಗೆ ಶನಿವಾರ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನ ಕಾಂಗ್ರೆಸ್ ಪಕ್ಷದ 26 ನಾಯಕರು ಸೋಮವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಶಿಮ್ಲಾ (ನ.8): ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಹಲವು ಕಾಂಗ್ರೆಸ್ ನಾಯಕರು ಸೋಮವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡಿದ್ದಾರೆ. ಒಟ್ಟು 26 ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಆಡಳಿತಾರೂಢ ಬಿಜೆಪಿಗೆ ಸೇರಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ನಾಲ್ಕು ದಿನಗಳು ಇರುವಾಗಲೇ ಈ ವಿದ್ಯಮಾನ ನಡೆದಿದೆ. ಚುನಾವಣೆಯಲ್ಲಿ ಉತ್ತಮ ಫಲಿತಾಂಶ ತೋರುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಇದು ದೊಡ್ಡ ಆಘಾತ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮತ್ತು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಬಿಜೆಪಿಯ ಸುಧನ್ ಸಿಂಗ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಶಿಮ್ಲಾದ ಬಿಜೆಪಿ ಅಭ್ಯರ್ಥಿ ಸಂಜಯ್ ಸೂದ್ ಕೂಡ ಉಪಸ್ಥಿತರಿದ್ದರು.
ಬಿಜೆಪಿಯೊಂದಿಗೆ ಕೈಜೋಡಿಸಿರುವವರಲ್ಲಿ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಧರಂಪಾಲ್ ಠಾಕೂರ್, ಮಾಜಿ ಕಾರ್ಯದರ್ಶಿ ಆಕಾಶ್ ಸೈನಿ, ಮಾಜಿ ಕೌನ್ಸಿಲರ್ ರಾಜನ್ ಠಾಕೂರ್, ಮಾಜಿ ಜಿಲ್ಲಾ ಉಪಾಧ್ಯಕ್ಷ ಅಮಿತ್ ಮೆಹ್ತಾ, ಮೆಹರ್ ಸಿಂಗ್ ಕನ್ವರ್, ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ನೇಗಿ, ಜೈ ಮಾ ಶಕ್ತಿ ಸಮಾಜ ಸಂಸ್ಥಾನದ ಅಧ್ಯಕ್ಷ ಜೋಗಿಂದರ್ ಸೇರಿದ್ದಾರೆ. ಠಾಕೂರ್, ನರೇಶ್ ವರ್ಮಾ, ಚಮ್ಯಾನ ವಾರ್ಡ್ ಸದಸ್ಯ ಯೋಗೇಂದ್ರ ಸಿಂಗ್, ಟ್ಯಾಕ್ಸಿ ಯೂನಿಯನ್ ಸದಸ್ಯ ರಾಕೇಶ್ ಚೌಹಾಣ್, ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ ಶಿಮ್ಲಾ ಅಧ್ಯಕ್ಷ ಧರ್ಮೇಂದ್ರ ಕುಮಾರ್, ವೀರೇಂದ್ರ ಶರ್ಮಾ, ರಾಹುಲ್ ರಾವತ್, ಸೋನು ಶರ್ಮಾ, ಅರುಣ್ ಕುಮಾರ್, ಶಿವಂ ಕುಮಾರ್ ಮತ್ತು ಗೋಪಾಲ್ ಠಾಕೂರ್ ಎಂದು ಎಎನ್‌ಐ ವರದಿ ಮಾಡಿದೆ.
ಗೆದ್ದರೆ ಏಕರೂಪ ನಾಗರಿಕ ಸಂಹಿತೆ: ಹಿಮಾಚಲದಲ್ಲಿ ಬಿಜೆಪಿ ಪ್ರಣಾಳಿಕೆ
ಚಮನ್ ಲಾಲ್, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ದೇವೇಂದ್ರ ಸಿಂಗ್, ಮಹೇಂದ್ರ ಸಿಂಗ್, ಯುವ ಕಾಂಗ್ರೆಸ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಮುನೀಶ್ ಮಂಡ್ಲಾ, ಬಾಲಕೃಷ್ಣ ಬಾಬಿ, ಸುನೀಲ್ ಶರ್ಮಾ, ಸುರೇಂದ್ರ ಠಾಕೂರ್, ಸಂದೀಪ್ ಸಮತಾ ಮತ್ತು ರವಿ ಈ ನಾಯಕರೊಂದಿಗೆ ಪಕ್ಷ ಬದಲಾಯಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
ಬಿಜೆಪಿಗೆ ಸವಾಲು ಹಾಕಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ: ಮತ್ತೆ ‘ಕೈ’ ಹೊಗಳಿದ Ghulam Nabi Azad..!
ಇದೇ ವೇಳೆ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರಿದ ಎಲ್ಲಾ ಕಾರ್ಯಕರ್ತರಿಗೆ ಆತ್ಮೀಯ ಸ್ವಾಗತ ಕೋರಿದರು. ಬಿಜೆಪಿಯ ಐತಿಹಾಸಿಕ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.
