Asianet Suvarna News Asianet Suvarna News

Himachal Election Result ಸೋಲಿನ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೈರಾಮ್ ಠಾಕೂರ್!

ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ ಬಿಜೆಪಿಗೆ ಪೂರಕವಾಗಿಲ್ಲ. ಅಧಿಕಾರದಲ್ಲಿದ್ದ ಬಿಜೆಪಿ ಇದೀಗ ಕಾಂಗ್ರೆಸ್ ಆಡಳಿತ ಬಿಟ್ಟುಕೊಡಬೇಕಾಗಿದೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಇದರ ಬೆನ್ನಲ್ಲೇ ಹಾಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ರಾಜಭವನಕ್ಕೆ ತೆರಳಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Himachal Pradesh election result CM Jairam Thakur tendered his resignation to Governor after bjp fail to retain power ckm
Author
First Published Dec 8, 2022, 5:02 PM IST

ಶಿಮ್ಲಾ(ಡಿ.07): ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಪ್ರತಿ 5 ವರ್ಷಕ್ಕೊಮ್ಮೆ ಅಧಿಕಾರ ಬದಲಿಸುವ ಹಿಮಾಚಲ ಪ್ರದೇಶ ಸಂಪ್ರದಾಯ ಮುಂದುವರಿದಿದೆ. ಆಡಳಿತ ವಿರೋಧಿ ಅಲೆಯನ್ನು ಸಮರ್ಥವಾಗಿ ಬಳಸಿಕೊಂಡ ಹಿಮಮಾಚಲ ಪ್ರದೇಶ ಕಾಂಗ್ರೆಸ್ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಇದು ಕಾಂಗ್ರೆಸ್‌ಗೆ ಸಮಾಧಾನ ತಂದಿದೆ. ಇತ್ತ ಆಡಳಿತರೂಢ ಬಿಜೆಪಿ 26 ಸ್ಥಾನಕ್ಕೆ ಕುಸಿದಿದೆ. ಇದರ ಬೆನ್ನಲ್ಲೇ ಹಾಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ರಾಜಭವನಕ್ಕೆ ತೆರಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನೂತನ ಸಿಎಂ ಆಯ್ಕೆ ಕಸರತ್ತು ನಡೆಸುತ್ತಿದೆ. ಮೂಲಗಳ ಪ್ರಕಾರ ಹಿಮಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್ ಮುಂದಿನ ಸಿಎಂ ಎಂದು ಹೇಳಲಾಗುತ್ತಿದೆ.

2917ರಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಮೂಲಕ ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದಿತ್ತು. ಆದರೆ ಚುನಾವಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ, ಬಂಡಾಯ ತಲೆದೋರಿತ್ತು. ಬಂಡಾಯ ಶಾಸಕರಿಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ಆದರೂ ಬಂಡಾಯ ಶಮನವಾಗಿರಲಿಲ್ಲ. ಜೊತೆಗೆ ಆಡಳಿತ ವಿರೋಧಿ ಅಲೆಯಿಂದ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸೋಲಿಗೆ ಶರಣಾಗಿದೆ. ಕಾಂಗ್ರೆಸ್ 39 ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಲು ಸಜ್ಜಾಗಿದೆ. ಬಿಜೆಪಿ ಸೋಲು ಖಚಿತಗೊಂಡ ಬೆನ್ನಲ್ಲೇ ಸಿಎಂ ಜೈರಾಮ್ ಠಾಕೂರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Himachal Pradesh Election Results 2022: ಬಿಜೆಪಿ ಸೋಲಿಗೆ ಪ್ರಮುಖ ಕಾರಣಗಳಿವು.

ರಾಜ್ಯಾಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಆದರೆ ನಾವು ಕೆಲಸ ಮಾಡುವುದನ್ನು ನಿಲ್ಲಿಸುವುದಿಲ್ಲ. ಹಿಮಾಚಲ ಪ್ರದೇಶ ಜನರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ. ಜನರು ನೀಡಿದ ತೀರ್ಪನ್ನು ಗೌರವಿಸುತ್ತೇನೆ. ನಾವು ಎಲ್ಲಿ ಎಡವಿದ್ದೇವೇ ಅನ್ನೋದು ವಿಮರ್ಷಿಸುತ್ತೇವೆ. ಬಿಜೆಪಿ ಎಲ್ಲಾ ನಾಯಕರು ಜನರ ಸೇವೆಗೆ ಸದಾ ಸಿದ್ದರಾಗಿದ್ದೇವೆ ಎಂದು ಜೈರಾಮ್ ಠಾಕೂರ್ ಹೇಳಿದ್ದಾರೆ.

Gujarat Election Result 2022: ಮೋದಿ-ಅಮಿತ್‌ ಶಾ ತವರಲ್ಲಿ ಅರಳಿದ ಕಮಲ,

ಸೀರಜ್ ಕ್ಷೇತ್ರದಲ್ಲಿ ಠಾಕೂರ್‌ಗೆ ಭರ್ಜರಿ ಗೆಲುವು
ಸೀರಜ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೈರಾಮ್ ಠಾಕೂರ್ 37,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಸೀರಜ್ ವಿಧಾನಸಭಾ ಕ್ಷೇತ್ರ ಮಂಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಮಂಡಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಿಮಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೈರಾಮ್ ಠಾಕೂರ್ ಸತತ 6ನೇ ಬಾರಿಗೆ ಶಾಸಕರಾಗಿ  ಆಯ್ಕೆಯಾಗಿದ್ದಾರೆ. 

 ಚುನಾವಣೋತ್ತರ ಸಮೀಕ್ಷೆಗಳು, 68 ಸ್ಥಾನ ಹೊಂದಿರುವ ಹಿಮಾಚಲದಲ್ಲಿ ಬಿಜೆಪಿ 24-41, ಕಾಂಗ್ರೆಸ್‌ 20-40 ಸ್ಥಾನ ಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿತ್ತು ಬಹುಮತಕ್ಕೆ ಅದೇ ಇನ್ನೂ ಕೆಲ ಸಮೀಕ್ಷೆಗಳು ಸ್ಪಷ್ಟಬಹುಮತದ ಸಾಧಿಸಲಾಗದೇ ಅತಂತ್ರ ಸ್ಥಿತಿ ನಿರ್ಮಾಣವೂ ಆಗಬಹುದು ಎಂದು ಹೇಳಿವೆ. ಆದರೆ ಈ ಎಲ್ಲಾ ಸಮೀಕ್ಷೆಗಳು ಉಲ್ಟಾ ಆಗಿದೆ. ಇದೀಗ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದೆ. ಹೀಗಾಗಿ ಹಿಮಾಚಲ ಪ್ರದೇಶದಲ್ಲಿ ಪ್ರತಿ 5 ವರ್ಷಗಳಿಗೊಮ್ಮೆ ಸರ್ಕಾರ ಬದಲಾಗುವ ಪ್ರವೃತ್ತಿಗೆ ಈ ಬಾರಿ ಬ್ರೇಕ್‌ ಬೀಳಬಹುದೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Follow Us:
Download App:
  • android
  • ios