ಭ್ರಷ್ಟಾಚಾರ ಕೇಂದ್ರವೇ ಕಾಂಗ್ರೆಸ್: ಗೃಹ ಸಚಿವ ಆರಗ ಜ್ಞಾನೇಂದ್ರ
ಭ್ರಷ್ಟಾಚಾರದ ಕೇಂದ್ರವೇ ಕಾಂಗ್ರೆಸ್ ಪಕ್ಷ. ಭ್ರಷ್ಟಾಚಾರವನ್ನು ಹುಟ್ಟುಹಾಕಿದವರೇ ಈ ವಿಚಾರದ ಬಗ್ಗೆ ಬೊಬ್ಬೆ ಹೊಡೆಯುವುದು ಮತ್ತು ರಾಜ್ಯ ಬಂದಿಗೆ ಕರೆ ನೀಡಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಟೀಕಿಸಿದರು.
ತೀರ್ಥಹಳ್ಳಿ (ಮಾ.07): ಭ್ರಷ್ಟಾಚಾರದ ಕೇಂದ್ರವೇ ಕಾಂಗ್ರೆಸ್ ಪಕ್ಷ. ಭ್ರಷ್ಟಾಚಾರವನ್ನು ಹುಟ್ಟುಹಾಕಿದವರೇ ಈ ವಿಚಾರದ ಬಗ್ಗೆ ಬೊಬ್ಬೆ ಹೊಡೆಯುವುದು ಮತ್ತು ರಾಜ್ಯ ಬಂದಿಗೆ ಕರೆ ನೀಡಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಟೀಕಿಸಿದರು. ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭ್ರಷ್ಟಾಚಾರ ಮೊದಲಿನಿಂದಲೂ ನಡೀತಿದೆ. ಅದರಲ್ಲಿ ಮಾಡಾಳು ವಿರೂಪಾಕ್ಷಪ್ಪ ಒಬ್ಬರಾಗಿದ್ದಾರೆ ಅಷ್ಟೇ. ಆದರೆ, ಈ ದೇಶದಲ್ಲಿ ಭ್ರಷ್ಟಾಚಾರವನ್ನು ಹುಟ್ಟುಹಾಕಿದವರೇ ಕಾಂಗ್ರೆಸ್ಸಿಗರು. ಈಗಲೂ ಆ ಪಕ್ಷದ ಕೇಂದ್ರ ಹಾಗೂ ರಾಜ್ಯಮಟ್ಟದ ಮುಖಂಡರು ಜಾಮೀನಿನ ಮೇಲೆ ಹೊರಗಿದ್ದಾರೆ. ಮೊದಲಿನಿಂದಲೂ ಭ್ರಷ್ಟಾಚಾರ ನಡೀತಿದೆ. ಆದರೆ ಭ್ರಷ್ಟಾಚಾರದ ವಿಚಾರದಲ್ಲಿ ನಮ್ಮ ಪಕ್ಷ ಮಾತ್ರ ಝೀರೋ ಟಾಲರೆನ್ಸ್ ಎಂದು ಹೇಳಿದರು.
ಮಾಜಿ ಸಿದ್ದರಾಮಯ್ಯ ತಮ್ಮ ಮೇಲಿದ್ದ 69 ಪ್ರಕರಣಗಳನ್ನು ಮುಚ್ಚಿಕೊಳ್ಳುವ ಸಲುವಾಗಿ ಲೋಕಾಯುಕ್ತವನ್ನು ಸಾಯಿಸಿ ಎಸಿಬಿ ಸ್ಥಾಪನೆ ಮಾಡಿದ್ದರು. ನ್ಯಾಯಾಲಯದ ತೀರ್ಪು ಬಂದ ನಂತರದಲ್ಲಿ ಭ್ರಷ್ಟಾಚಾರವನ್ನು ಮುಕ್ತಮಾಡುವ ಸಲುವಾಗಿ ಲೋಕಾಯುಕ್ತವನ್ನು ಪುನರ್ ಸ್ಥಾಪನೆ ಮಾಡಿದ್ದು ಮಾತ್ರವಲ್ಲದೇ ಪಾರದರ್ಶಕವಾಗಿ ಕಾರ್ಯನಿರ್ವಹಿಸಲು ಲೋಕಾಯುಕ್ತಕ್ಕೆ ಸಮರ್ಥ ಅಧಿಕಾರಿಗಳನ್ನೆ ನೀಡಿದೀವಿ. ಮಾಡಾಳು ಪ್ರಕರಣದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲಾ. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆ ಆಗಲೇಬೇಕು. ಶೀಘ್ರದಲ್ಲಿ ಆರೋಪಿಗಳ ಬಂಧನ ಮಾಡ್ತೀವಿ ಎಂದೂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಐಸಿಯೂನಲ್ಲಿದೆ: ಜಗದೀಶ್ ಶೆಟ್ಟರ್ ಲೇವಡಿ
ಸೌಲಭ್ಯ ಪಡೆಯಲು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಕಡ್ಡಾಯ: ಕಾರ್ಮಿಕ ಇಲಾಖೆ ಜಾರಿಗೆ ತಂದಿರುವ ಯೋಜನೆಯಲ್ಲಿ ಕಟ್ಟಡ ಕಾಮಗಾರಿ ಕೆಲಸದಲ್ಲಿ ತೊಡಗಿಸಿಕೊಳ್ಳುವ ಎಲ್ಲ ವಿಭಾಗದ ಕಾರ್ಮಿಕರೂ ಫಲಾನುಭವಿಗಳಾಗಿದ್ದಾರೆ. ಆದರೆ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ರಾಜ್ಯ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆಯ ವತಿಯಿಂದ ಸೋಮವಾರ ಪಟ್ಟಣದ ಎಪಿಎಂಸಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾರ್ಮಿಕರ ಕುಟುಂಬದ 245 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡಿದರು.
ಬಿಜೆಪಿ ಸರ್ಕಾರ ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ರಾಜ್ಯ ದಿವಾಳಿ: ರಣದೀಪ್ ಸಿಂಗ್ ವಾಗ್ದಾಳಿ
ಗಾರೆ ಕೆಲಸ, ಇಟ್ಟಿಗೆ ಬಿಡುವವರು, ಪ್ಲಂಬರ್,ಎಲೆಕ್ಟ್ರಿಶಿಯನ್ ಮತ್ತು ಕೈಯಾಳುಗಳು ಕೂಡಾ ಈ ಯೋಜನೆಗೆ ಅರ್ಹರಾಗಿದ್ದಾರೆ. ಈ ಕುಟುಂಬಗಳಿಗೆ ಶಕ್ತಿ ತುಂಬುವ ಸಲುವಾಗಿಯೇ ಈ ಯೋಜನೆ ಜಾರಿಗೆ ಬಂದಿದೆ ಎಂದರು. ಕೋವಿಡ್ ಸಂದರ್ಭದಲ್ಲಿ ಕೆಲಸವಿಲ್ಲದ ಕಾರ್ಮಿಕರು ಉಪವಾಸ ಬೀಳಬಾರದು ಎಂಬ ಕಾರಣದಿಂದ ಕಾರ್ಮಿಕ ಇಲಾಖೆಯ ವತಿಯಿಂದ 10 ಸಾವಿರ ಆಹಾರದ ಕಿಟ್‌ಗಳನ್ನು ಕ್ಷೇತ್ರದಲ್ಲಿ ವಿತರಿಸಲಾಗಿದೆ. ಇದರಲ್ಲಿ ಲೋಪವಾಗಬಾರದು ಎಂಬ ಕಾರಣಕ್ಕೆ ಪ್ರತಿ ಗ್ರಾಪಂ ಮಟ್ಟದಲ್ಲಿ ವ್ಯವಸ್ಥಿತವಾಗಿ ವಿತರಣೆ ಮಾಡಿದ್ದೇವೆ ಎಂದು ಹೇಳಿದರು. ಪಪಂ ಅಧ್ಯಕ್ಷೆ ಸುಶೀಲಾ ಶೆಟ್ಟಿ, ಸದಸ್ಯೆ ಮಂಜುಳಾ ನಾಗೇಂದ್ರ, ಕಾರ್ಮಿಕ ಇಲಾಖೆ ಅಧಿಕಾರಿ ಮಮ್ತಾಜ್ ಹಾಗೂ ಪೃಥ್ವಿಶ್ರಮ ಕಲ್ಲುಗಣಿ ಕಾರ್ಯದರ್ಶಿ ಮಂಜುನಾಥ್ ಇದ್ದರು.