* ಡಿಕೆಶಿಯಿಂದ ಬೆಂಕಿಗೆ ತುಪ್ಪ ಸುರಿವ ಕೆಲಸ* ಶಿವಮೊಗ್ಗದಲ್ಲಿ ರಾಷ್ಟ್ರಧ್ವಜ ಇಳಿಸಿಲ್ಲ: ಗೃಹ ಸಚಿವ* ಘಟನೆ ಹಿಂದೆ ರಾಜಕೀಯ ಪಕ್ಷಗಳಲ್ಲದೆ ಕೆಲವು ಕೋಮುವಾದಿ ಸಂಘಟನೆಗಳೂ ಇವೆ
ಬೆಂಗಳೂರು(ಫೆ.10): ಶಾಲಾ ಸಮವಸ್ತ್ರ(School Uniform) ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಸೇರಿದಂತೆ ಕಾಂಗ್ರೆಸ್ ನಾಯಕರು ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದು, ಇದೇ ರೀತಿ ಮುಂದುವರೆದರೆ ಆ ಪಕ್ಷವನ್ನು ಅರಬ್ಬಿ ಸಮುದ್ರಕ್ಕೆ ಜನರು ಎಸೆಯತ್ತಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ವಾಗ್ದಾಳಿ ನಡೆಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ(Shivamogga) ರಾಷ್ಟ್ರಧ್ವಜ(National Flag) ಇಳಿಸಿ ಕೇಸರಿ ಬಾವುಟ(Saffron Flag) ಹಾರಿಸಿದ್ದಾರೆ ಎಂದು ಶಿವಕುಮಾರ್ ಸುಳ್ಳು ಮಾಹಿತಿ ಹರಡುತ್ತಿದ್ದಾರೆ ಎಂದು ದೂರಿದರು.
Fake News Post on Social Media: ಶಾಂತಿ ಕದಡಲು ಯತ್ನ: ಡಿಕೆಶಿ ವಿರುದ್ಧ ಬಿಜೆಪಿ ದೂರು
ಕಾಲೇಜು ಆವರಣದಲ್ಲಿ ರಾಷ್ಟ್ರ ಧ್ವಜ ಹಾರಾಡುತ್ತಿರಲಿಲ್ಲ. ಶಿವಕುಮಾರ್ ಬೇಜವಾಬ್ದಾರಿಯಾಗಿ ಮಾತನಾಡಿದ್ದಾರೆ. ಇಂತಹ ಹೊಣೆಗೇಡಿತನ ಹಾಗೂ ಹಸಿ ಸುಳ್ಳು ಹೇಳಿಕೆಯನ್ನು ಒಬ್ಬ ಹಿರಿಯ ಕಾಂಗ್ರೆ(Congress) ನಾಯಕನಿಂದ ಬರುತ್ತದೆಂದರೆ ಅವರ ಉದ್ದೇಶ ಏನಿರಬಹುದೆಂದು ಜನರು ಊಹಿಸುತ್ತಾರೆ. ಶಾಲಾ ಸಮವಸ್ತ್ರ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಮನಸ್ಸಿನಲ್ಲಿ ಮತೀಯ ಭಾವನೆಗಳನ್ನು ತುಂಬಬಾರದು ಎಂದರು.
ಈ ಘಟನೆ ಹಿಂದೆ ರಾಜಕೀಯ ಪಕ್ಷಗಳಲ್ಲದೆ ಕೆಲವು ಕೋಮುವಾದಿ ಸಂಘಟನೆಗಳೂ ಇವೆ. ಅವುಗಳ ಮುಖವಾಡ ಕಳಚುವ ಕೆಲಸ ಮಾಡುತ್ತೇವೆ. ದೇಶ ಕಟ್ಟುವ ಕೆಲಸವನ್ನು ಮಾಡಬೇಕೆ ಹೊರತು ಮತ್ತೊಮ್ಮೆ ದೇಶ ಒಡೆಯುವ ಕೆಲಸವನ್ನು ಯಾರೊಬ್ಬರೂ ಮಾಡಬಾರದು ಎಂದು ಸಚಿವರು ಮನವಿ ಮಾಡಿದರು.
ಹಿಜಾಬ್ ವಿವಾದ ಹಿಂದೆ ಕಾಣದ ಕೈಗಳು: ಆರಗ
ಶಿವಮೊಗ್ಗ: ಹಿಜಾಬ್(Hijab) ಮತ್ತು ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು(Students) ತರಗತಿಗೆ ಬರಬಾರದು. ಇನ್ನು ಮುಂದೆ ಇಂತಹದ್ದೆಲ್ಲ ನಡೆಯುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟವಾಗಿ ತಿಳಿಸಿದ್ದಾರೆ. ಅಲ್ಲದೆ, ಹಿಜಾಬ್ ಧರಿಸಿಯೇ ಬರುತ್ತೇನೆ ಎಂದು ಹಟ ಹಿಡಿಯವ ವಿದ್ಯಾರ್ಥಿಗಳ ನಡವಳಿಕೆ ಹಿಂದೆ ಕಾಣದ ಶಕ್ತಿಯೊಂದರ ಕೈವಾಡ ಇರುವ ಶಂಕೆಯನ್ನು ಸಚಿವರು ವ್ಯಕ್ತಪಡಿಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ(Police Department) ಸೂಚಿಸಿರುವುದಾಗಿಯೂ ತಿಳಿಸಿದ್ದರು.
ಫೆ.6 ರಂದು ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪದ ತಮ್ಮ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಹಿಜಾಬ್ ಧರಿಸಿಯೇ ಬರುತ್ತೇವೆ ಎಂದು ಮಕ್ಕಳು ಹೇಳುತ್ತಿರುವುದರ ಹಿಂದೆ ಯಾರಿದ್ದಾರೆ? ಅವರ ತಂತ್ರ ಏನು? ಎಂಬುದನ್ನು ನೋಡುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದರು.
ಹಿಜಾಬ್ ವಿವಾದಕ್ಕೆ ನಾಗೇಶ್, ಆರಗ ಕಾರಣ: ಸಿದ್ದು ವಾಗ್ದಾಳಿ
ಬೆಂಗಳೂರು: ರಾಜ್ಯ ವಿವಿಧ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ಬಿಗಡಾಯಿಸಲು ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡುತ್ತಿರುವ ಪ್ರಚೋದನಕಾರಿ ಹೇಳಿಕೆಗಳೇ ಕಾರಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಆರೋಪಿಸಿದ್ದರು.
Hijab Row ನಾನು ಎಷ್ಟು ಬೇಕಾದರೂ ಕೇಸರಿ ಶಾಲು ಹಂಚುತ್ತೇನೆ, ಗುಡುಗಿದ ಸಚಿವ ಈಶ್ವರಪ್ಪ
ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳೇ ಕದನ ಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ರಾಜ್ಯ ಶಿಕ್ಷಣ ಸಚಿವರು ಮತ್ತು ಗೃಹಸಚಿವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿರುವುದು ವಿಷಾದನೀಯ ಎಂದು ತಿಳಿಸಿದ್ದರು.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಸಂಘರ್ಷ ನಡೆದಿರುವ ಕಡೆ ಹಲ್ಲೆಗೆ ಮುಂದಾಗಿರುವವರ ವಿರುದ್ಧ ಕ್ರಮ ಕಠಿಣ ಕ್ರಮಕೈಗೊಳ್ಳದೆ ಪೊಲೀಸರು ಮೂಕ ಪ್ರೇಕ್ಷಕರಾಗಿರುವುದು ವಿದ್ಯಾರ್ಥಿಗಳ ಹೆತ್ತವರಲ್ಲಿ ಆತಂಕ ಹುಟ್ಟಿಸಿದೆ. ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ ಸಮಸ್ಯೆಯಿದು. ಆದರೆ, ರಾಜಕೀಯ ಕಾರಣಕ್ಕಾಗಿ ಈ ಸಮಸ್ಯೆಯನ್ನು ಉಲ್ಬಣಗೊಳಿಸಿರುವ ರಾಜ್ಯ ಸರ್ಕಾರ ಈಗ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ. ಕೂಡಲೇ ಪರಿಸ್ಥಿತಿ ಗಂಭೀರತೆಯನ್ನು ಅರಿತು ಮುಖ್ಯಮಂತ್ರಿ ಅವರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಭಾಯಿಸಲು ಕಠಿಣ ಕ್ರಮ ಅನುಸರಿಸಬೇಕು. ಶಾಲಾ ಕಾಲೇಜುಗಳನ್ನು ಬಂದ್ ಮಾಡಿರುವ ಸರ್ಕಾರ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಆನ್‌ಲೈನ್ ಶಿಕ್ಷಣ(Online Calss) ಆರಂಭಿಸಬೇಕು ಎಂದು ಅವರು ಆಗ್ರಹಿಸಿದ್ದರು.
