ಸಿದ್ದು-ಡಿಕೆಶಿ ಇಬ್ಬರೇ ಒಪ್ಪಂದ ಮಾಡಿಕೊಂಡ್ರೆ ನಾವೇಕಿರಬೇಕು: ಪರಮೇಶ್ವರ್

ಏನೇ ಆಗಿದ್ದರೂ ಹೈಕಮಾಂಡ್ ಅಂತಿಮವಾಗಿ ಏನು ತೀರ್ಮಾನ ಮಾಡುತ್ತದೆಯೋ ಅದಕ್ಕೆ ನಾವು ಬದ್ಧವಾಗಿರುತ್ತೇವೆ. ನಾವು ಯಾರೂ ಹೈಕಮಾಂಡ್ ಅನ್ನು ಬಿಟ್ಟು ಹೋದವರಲ್ಲ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದನ್ನು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದರು. 

Home Minister Dr G Parameshwar React to Siddaramaiah DK Shivakumar make an agreement grg

ಬೆಂಗಳೂರು(ಡಿ.06):  'ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ಬಗೆ ಬಗ್ಗೆ ಅವರಿಬ್ಬರ (ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್) ನಡುವೆ ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು? ಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಬೇಡವೇ?' ಎಂದು ಸಚಿವ ಡಾ.ಜಿ.ಪರಮೇಶ್ವರ್ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಅವರು, 'ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ದೆಹಲಿ ಹಾಗೂ ರಾಜ್ಯದಲ್ಲಿ ಇಬ್ಬರು-ಮೂವರನ್ನು ಕೇಳಿದ್ದೇನೆ. ಅಂತಹ ಯಾವುದೇ ಒಪ್ಪಂದ ಆಗಿಲ್ಲ ಎಂದಿದ್ದಾರೆ. 

ಭಾರತ ಹಿಂದೂ ರಾಷ್ಟ್ರ ನಿಜ, ಮುಸಲ್ಮಾನರ ಮೇಲೆ ಬಿಜೆಪಿಗೆ ಯಾಕಿಷ್ಟು ದ್ವೇಷ?: ಪರಮೇಶ್ವರ್

ಶಿವಕುಮಾರ್ ಹೇಳಿಕೆಗೆ ಸಿದ್ದರಾಮಯ್ಯ ಅವರೂ ಯಾವುದೇ ಒಪ್ಪಂದ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ' ಎಂದು ಹೇಳಿದರು. ಒಂದು ವೇಳೆ ಅವರಿಬ್ಬರ ನಡು ವೆಯೇ ಒಪ್ಪಂದ ಆಗಿದೆ ಎನ್ನುವು ದಾದರೆ ನಾವೆಲ್ಲ ಯಾಕಿರಬೇಕು? ಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಇರುವುದೇ ಬೇಡವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಏನೇ ಆಗಿದ್ದರೂ ಹೈಕಮಾಂಡ್ ಅಂತಿಮವಾಗಿ ಏನು ತೀರ್ಮಾನ ಮಾಡುತ್ತದೆಯೋ ಅದಕ್ಕೆ ನಾವು ಬದ್ಧವಾಗಿರುತ್ತೇವೆ. ನಾವು ಯಾರೂ ಹೈಕಮಾಂಡ್ ಅನ್ನು ಬಿಟ್ಟು ಹೋದವರಲ್ಲ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದನ್ನು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದರು. 

ನಮ್ಮಲ್ಲಿ ಯಾವುದೇ ಬಣ ಇಲ್ಲ: 

ಹಾಸನ ಸಮಾವೇಶದಲ್ಲಿ ಬಣ ರಾಜಕೀಯ ಎಂಬ ಪ್ರತಿಪಕ್ಷಗಳ ಆರೋಪಕ್ಕೆ, ಕೆಪಿಸಿಸಿ ಮತ್ತು ಸ್ವಾಭಿಮಾನಿಗಳ ಒಕ್ಕೂಟ ಒಟ್ಟಾಗಿ ಸಮಾವೇಶ ಆಯೋಜಿ ಸಿದೆ. ನಮ್ಮಲ್ಲಿ ಯಾವುದೇ ಬಣಗಳು ಇಲ್ಲ. ಬಿಜೆಪಿಯಲ್ಲಿ ಮೂರು ಬಣ ಮಾಡಿಕೊಂಡಿದ್ದಾರೆ. ಆದರೆ ನಮ್ಮಲ್ಲಿ ಅಂಥ ಬಿಜೆಪಿ ಮತ್ತು ಜೆಡಿಎಸ್‌ನವರು ನಮ್ಮನ್ನು ಜನಸಮುದಾಯದಿಂದ ಬೇರ್ಪ ಡಿಸಲು ಪ್ರಯತ್ನಿಸಿದರು. ಆದರೆ ಜನರೇ ಉಪಚುನಾವಣೆಯಲ್ಲಿ ತಕ್ಕ ಉತ್ತರನೀಡಿದರು ಎಂದು ಹೇಳಿದರು.

ಕಾಂಗ್ರೆಸ್ ಶಾಸಕರಿಗೆ ತಲಾ 25 ಕೋಟಿ, ವಿಪಕ್ಷ ಶಾಸಕರಿಗೆ 10 ಕೋಟಿ ರೂ. ಅನುದಾನ ಹಂಚಿಕೆ; ಪರಮೇಶ್ವರ

ಬೆಂಗಳೂರು/ತುಮಕೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ (ಕಾಂಗ್ರೆಸ್) ಶಾಸಕರಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ತೀರ್ಮಾನ ಮಾಡಿದ್ದಾರೆ. ಇದರ ಜೊತೆಗೆ ವಿರೋಧ ಪಕ್ಷದ (ಬಿಜೆಪಿ, ಜೆಡಿಎಸ್) ಶಾಸಕರಿಗೂ 10 ರಿಂದ 15 ಕೋಟಿ ರೂ. ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಮಾಹಿತಿ ನೀಡಿದ್ದರು. 

ಆಸ್ತಿ ಕಬಳಿಕೆ ವಿರುದ್ಧ ರಾಜ್ಯಾದ್ಯಂತ ಹೋರಾಟ: ಬಿಜೆಪಿ ವಿರುದ್ಧ ಹರಿಹಾಯ್ದ ಸಚಿವ ಪರಮೇಶ್ವರ್‌

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳನ್ನು ನೀಡುವ ಜೊತೆಗೆ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಆದ್ಯತೆ ನೀಡಲಾಗುತ್ತಿದೆ. ರಾಜ್ಯದಲ್ಲಿ ನಮ್ಮ ಪಕ್ಷದ ಎಲ್ಲ ಶಾಸಕರಿಗೂ ತಮ್ಮ ಕ್ಷೇತ್ರಗಳ ಅಭಿವೃದ್ಧಿ ಮಾಡುವುದಕ್ಕೆ ಅನುಕೂಲ ಆಗುವಂತೆ ತಲಾ 25 ಕೋಟಿ ರೂ. ಅನುದಾನವನ್ನು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಜೊತೆಗೆ, ವಿಪಕ್ಷಗಳ ಶಾಸಕರಿಗೆ ತಲಾ 10 ಕೋಟಿ ರೂ.ಗಳಿಂದ 15 ಕೋಟಿ ರೂ.ವರೆಗೆ ಅನುದಾನ ಕೊಡಲಿದ್ದಾರೆ ಎಂದು ತಿಳಿಸಿದ್ದರು. 

ಇನ್ನು ಈ ಹಿಂದಿನ ಬಿಜೆಪಿ ಸರ್ಕಾರವು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಕೇವಲ 10 ಕೋಟಿ ರೂ. ಅನುದಾನವನ್ನು ನೀಡುತ್ತಿದ್ದರು. ಆದರೆ, ತಮ್ಮ ಪಕ್ಷದ ಶಾಸಕರಿಗೆ ಮಾತ್ರ ಬರೋಬ್ಬರಿ ತಲಾ 50 ಕೋಟಿ ರೂ. ಅನುದಾನ ನೀಡಿದ್ದರು. ಆದರೆ, ಇದೀಗ ಜಿಲ್ಲೆಯ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿ, ಶಂಕುಸ್ಥಾಪನೆಗಳಿವೆ. ಹಲವು ಯೋಜನೆಗಳ ಫಲಾನುಭವಿಗಳಿದ್ದಾರೆ. ಎಲ್ಲ ಕ್ಷೇತ್ರಗಳ ಅಭಿವೃದ್ಧಿಯಾದರೆ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಅನುದಾನವನ್ನು ಹಂಚಿಕೆ ಮಾಡಲಿದ್ದಾರೆ. ಈ ಮೂಲಕ ರಾಜ್ಯದ ಎಲ್ಲ‌ ಜಿಲ್ಲೆಗಳ ಅಭಿವೃದ್ಧಿಯಾದರೆ ರಾಜ್ಯ ಅಭಿವೃದ್ಧಿಯಾಗುತ್ತದೆ ಎಂಬುದು ನಮ್ಮ ದೂರದೃಷ್ಟಿಯಾಗಿದೆ. ಆದರೆ, ವಿಪಕ್ಷಗಳ ಶಾಸಕರು ತುಮಕೂರಿಗೆ ಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಭಾವುಟ ತೋರಿಸಲು ಮುಂದಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳನ್ನು ಮಾಡುವವರಿಗೆ ಇದರ ಅಗತ್ಯವಿಲ್ಲ ಎಂದು ಹೇಳಿದ್ದರು. 

Latest Videos
Follow Us:
Download App:
  • android
  • ios