ಕುಮಾರಸ್ವಾಮಿ ಯಾವಾಗ ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ರು: ಸಚಿವ ಪರಮೇಶ್ವರ್
ಕಾಂಗ್ರೆಸ್ ಸರ್ಕಾರ ಇನ್ನು ಆರೇ ತಿಂಗಳಲ್ಲಿ ಪತನವಾಗುತ್ತದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿ ಅವರು ಕುಮಾರಸ್ವಾಮಿ ಯಾವಾಗ ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ದಾರೋ ನನಗೆ ಗೊತ್ತಿಲ್ಲ ಎಂದರು.
ತುಮಕೂರು (ಅ.02): ತಮಗೆ ಬಂದ ಬೆದರಿಕ ಕರೆಯನ್ನು ಸಾಹಿತಿಗಳು ನನ್ನ ಬಳಿ ಹೇಳಕೊಂಡಿದ್ದರಿಂದ ಆ ಪ್ರಕರಣವನ್ನು ಸಿಸಿಬಿಗೆ ವಹಿಸಿದ್ದೆವು. ಅವರು ದಾವಣಗೆರೆ ಮೂಲದವರನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಅವರು ತುಮಕೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿ, ಸಾಹಿತಿಗಳ ಅಹವಾಲು ನಾನು ಕೇಳಿದ್ದೆ. ಸಿಎಂಗೂ ಭೇಟಿ ಮಾಡಿ ಸಾಹಿತಿಗಳು ಬೆದರಿಕೆ ಕರೆ ಬಗ್ಗೆ ಹೇಳಿದ್ದರು. ಅಧಿಕಾರಿಗಳು ಆ ಪತ್ರ ನೋಡಿ ಅರೆಸ್ಟ್ ಮಾಡಿದ್ದಾರೆ ಎಂದರು. ಅವರ ಹಿಂದೆ ಯಾರಿದ್ದಾರೆ ಎನ್ನುವುದು ತನಿಖೆಯಿಂದ ಗೊತ್ತಾಗುತ್ತದೆ. ಯಾವ ಸರ್ಕಾರ ಇದ್ದರೂ ಅವರು ಬೆದರಿಕೆ ಹಾಕುತ್ತಾರೆ ಎಂದರು.
ಕಾಂಗ್ರೆಸ್ ಸರ್ಕಾರ ಇನ್ನು ಆರೇ ತಿಂಗಳಲ್ಲಿ ಪತನವಾಗುತ್ತದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿ ಅವರು ಕುಮಾರಸ್ವಾಮಿ ಯಾವಾಗ ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ದಾರೋ ನನಗೆ ಗೊತ್ತಿಲ್ಲ ಎಂದರು. ಲಿಂಗಾಯತರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಬೆಲೆ ಸಿಗುತ್ತಿಲ್ಲ ಎನ್ನುವ ಶಾಮನೂರು ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಅದನ್ನೆಲ್ಲ ಮುಖ್ಯಮಂತ್ರಿಗಳು ಗಮನಿಸುತ್ತಾರೆ ಎಂದ ಅವರು ಜಾತಿ ಆಧಾರದ ಮೇಲೆ ಅಧಿಕಾರಿಗಳನ್ನು ನೇಮಿಸುವುದನ್ನು ಸರ್ಕಾರ ಮಾಡುವುದಿಲ್ಲ ಎಂದರು. ಜಾತಿ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಯುತ್ತದೆ. ಆದರೆ, ಕೆಲಸ ಕೊಡುವಾಗ ಜಾತಿ ಆಧಾರದ ಮೇಲೆ ಪೋಸ್ಟಿಂಗ್ ಕೊಡುವುದಿಲ್ಲ ಎಂದರು. ಸಚಿವ ರಾಜಣ್ಣ ಅವರ ಕಾಲಿಗೆ ಪೆಟ್ಟಾಗಿದೆ. ಸಣ್ಣ ಆಪರೇಷನ್ ಕೂಡ ಆಗಿತ್ತು. ಅದಕ್ಕೆ ನೋಡಿಕೊಂಡು ಬಂದೆ ಎಂದರು.
ಕಾವೇರಿ ನೀರಿನ ಸಮಸ್ಯೆಗೆ ಮೇಕೆದಾಟು ಪರಿಹಾರ: ಸಂಸದ ಡಿ.ಕೆ.ಸುರೇಶ್
ಜಿಲ್ಲೆಗೆ 120 ಕೋಟಿ ಹಂಚಿಕೆ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ-4ರಡಿ ಜಿಲ್ಲೆಗೆ 120 ಕೋಟಿ ರು. ಹಂಚಿಕೆಯಾಗಿದ್ದು, ಈ ಯೋಜನೆಯಡಿ ಸಿವಿಲ್ ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ(ಮುನ್ಸಿಪಾಲಿಟಿ)ಯೋಜನೆ (ಹಂತ-4)ಯ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ನಗರಸಭೆಗಳಿಗೆ ತಲಾ 30 ಕೋಟಿ, ಪುರಸಭೆಗಳಿಗೆ ತಲಾ 10 ಕೋಟಿ, ಪಟ್ಟಣ ಪಂಚಾಯತಿಗಳಿಗೆ ತಲಾ 5 ಕೋಟಿಗಳ ಕ್ರಿಯಾಯೋಜನೆಗಳು ಅನುಮೋದನೆಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳ ಅನುಷ್ಟಾನವನ್ನು ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ತ್ವರಿತವಾಗಿ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು.
ನನ್ನ ಬಳಿ ಮಾತು ಹೇಳಿ ಹೋಗ್ತಿದ್ದರೆ ಏನಾಗ್ತಿತ್ತು?: ಜೆಡಿಎಸ್-ಬಿಜೆಪಿ ಮೈತ್ರಿಗೆ ಇಬ್ರಾಹಿಂ ಅಸಮಾಧಾನ!
ಕುಡಿಯುವ ನೀರು, ಒಳಚರಂಡಿ, ರಸ್ತೆ ಅಭಿವೃದ್ಧಿ ಹಾಗೂ ಇನ್ನಿತರೆ ಯೋಜನೆಗಳ ಅಭಿವೃದ್ಧಿಯೇ ನಗರೋತ್ಥಾನ ಯೋಜನೆಯ ಉದ್ದೇಶವಾಗಿದ್ದು, ನಗರೋತ್ಥಾನ ಯೋಜನೆ ಹಂತ-4ರಡಿ ಜಿಲ್ಲೆಯಲ್ಲಿ ವಿಕಲಚೇತನ ಹಾಗೂ ಪೌರಕಾರ್ಮಿಕರಿಗೆ ಅಗತ್ಯವಿರುವ ಕಡೆ ಶೌಚಾಲಯ, ವಿಶ್ರಾಂತಿ ಗೃಹಗಳ ನಿರ್ಮಾಣಕ್ಕೆ ಕ್ರಮವಹಿಸಬೇಕು. ಈಗಾಗಲೇ ಅನುಮೋದನೆ ನೀಡಿರುವ ಟೆಂಡರ್ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಕಾಮಗಾರಿ ಆರಂಭಿಸಬೇಕು. ಈ ಯೋಜನೆಯಡಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿ ಕಳಪೆ ಕಂಡಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.