ಅಧಿಕಾರಕ್ಕಾಗಿ ಊರೂರು ಅಲೆಯುವ ಸೋಮಣ್ಣ: ಸಚಿವ ಪರಮೇಶ್ವರ್
ಇಡೀ ದೇಶವೇ ಒಪ್ಪಿಕೊಳ್ಳುವಂತಹ ಸಿದ್ದರಾಮಯ್ಯನವರ ವಿರುದ್ಧ ವರುಣಾದಲ್ಲಿ ಸ್ಪರ್ಧಿಸಿದ್ದ ಸೋಮಣ್ಣ, ಮುಂದೊಂದು ದಿನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧವೇ ಶಿಕಾರಿಪುರದಲ್ಲಿ ಸ್ಪರ್ಧಿಸಿದರೂ ಆಶ್ಚರ್ಯ ಪಡಬೇಕಾಗಿಲ್ಲ: ಸಚಿವ ಡಾ.ಜಿ. ಪರಮೇಶ್ವರ್
ತುಮಕೂರು(ಏ.14): ರಾಜಕೀಯ ಅಧಿಕಾರಕ್ಕಾಗಿ ಗೋವಿಂದರಾಜ ನಗರ, ವರುಣ, ಚಾಮರಾಜನಗರ , ತುಮ ಕೂರು ಎಂದು ಅಲೆಯುತ್ತಿರುವ ಸೋಮಣ್ಣ ಈ ಚುನಾವಣೆಯಲ್ಲಿ ಸೋತರೆ, ಮುಂದಿನ ಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುತ್ತಾರೆ. ಅಧಿಕಾರಕ್ಕಾಗಿ ಈ ರೀತಿ ಊರೂರು ಅಲೆಯುವ ವ್ಯಕ್ತಿ ತುಮಕೂರು ಜಿಲ್ಲೆಗೆ ಬೇಕೆ? ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರಶ್ನಿಸಿದ್ದಾರೆ.
ನಗರದ ಕುಣಿಗಲ್ ರಸ್ತೆಯ ಬಳಿ ಸಭೆಯಲ್ಲಿ ಮಾತನಾಡಿದ ಅವರು, ಇಡೀ ದೇಶವೇ ಒಪ್ಪಿಕೊಳ್ಳುವಂತಹ ಸಿದ್ದರಾಮಯ್ಯನವರ ವಿರುದ್ಧ ವರುಣಾದಲ್ಲಿ ಸ್ಪರ್ಧಿಸುವ ಇವರು, ಮುಂದೊಂದು ದಿನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧವೇ ಶಿಕಾರಿಪುರದಲ್ಲಿ ಸ್ಪರ್ಧಿಸಿದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಹೇಳಿದ್ದಾರೆ.
ಲೋಕಸಭೇಲಿ ಕಾವೇರಿ ಬಗ್ಗೆ ಮಾತನಾಡಲು ಎನ್‌ಡಿಎ ಗೆಲ್ಲಬೇಕು: ದೇವೇಗೌಡ
ಇಂದು ನಡೆಯುತ್ತಿರುವ ಚುನಾವಣೆ ಸಂವಿಧಾನದ ಫಲದಿಂದ ಅಧಿಕಾರ ದಕ್ಕಿಸಿಕೊಂಡಿರುವ ಅಹಿಂದ ಸಮುದಾಯ ಮತ್ತು ಜಾತಿಯ ಕಾರಣಕ್ಕೆ ನಿರಂತರ ಅಧಿಕಾರ ಅನುಭವಿಸುತ್ತಿರುವ ಮೇಲ್ವರ್ಗಗಳ ನಡುವೆ ನಡೆಯುತ್ತಿರುವ ಸಂಘರ್ಷವಾಗಿದೆ. ಈಗ ನಾವು ಎಚ್ಚೆತ್ತುಕೊಳ್ಳದೆ ಹೋದರೆ ಮುಂದೆಂದು ನಾವು ಅಧಿಕಾರದ ಅಂಚಿಗೂ ಬರಲು ಸಾಧ್ಯವಿಲ್ಲ. ಈ ಎಚ್ಚರಿಕೆಯನ್ನು ಎಲ್ಲಾ ಅಹಿಂದ ವರ್ಗಗಳು ಹೊಂದಿ, ಸಾಮಾಜಿಕ ನ್ಯಾಯ ಪ್ರತಿಪಾದಿಸುವ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸುವ ಮೂಲಕ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಬಿಜೆಪಿ ತರಬೇಕೆಂದು ಮನವಿ ಮಾಡಿದರು.