ಗ್ಯಾರಂಟಿ ಯೋಜನೆ ಟೀಕಿಸುವವರಿಗೆ ತಕ್ಕ ಉತ್ತರ ಕೊಡಿ: ಗೃಹ ಸಚಿವ ಪರಮೇಶ್ವರ

ಈ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತ ನೀತಿಯಿಂದ ಜನ ಬೇಸತ್ತಿದ್ದರು. ಚುನಾವಣೆ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಚ್ಚುಕಟ್ಟಾಗಿ ನಿಭಾಯಿಸಿದರು. ಎಲ್ಲರಿಗೂ ಶ್ಲಾಘನೆ ಸಲ್ಲಬೇಕು ಎಂದ ಗೃಹ ಸಚಿವ ಡಾ.ಜಿ.ಪರಮೇಶ್ವರ 

Home Minister G Parameshwar Talks Over Congress Guarantee Schemes in Karnataka grg

ಚಿತ್ರದುರ್ಗ(ನ.18):  ಅಧಿಕಾರಕ್ಕೆ ಬಂದ ತಿಂಗಳ ಅವಧಿಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜನಪರ ಆಡಳಿತ ನೀಡುತ್ತಿದ್ದೇವೆ. ಜನರ ಹಿತ ಕಾಯುವುದೇ ಸರ್ಕಾರ ಜವಾಬ್ಧಾರಿ. ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದಿಂದ ಟೀಕೆ, ಟಿಪ್ಪಣೆಗಳು ಬಂದರೆ ಪಕ್ಷದ ಕಾರ್ಯಕರ್ತರು ಸರಿಯಾದ ಉತ್ತರ ಕೊಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶುಕ್ರವಾರ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತ ನೀತಿಯಿಂದ ಜನ ಬೇಸತ್ತಿದ್ದರು. ಚುನಾವಣೆ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಚ್ಚುಕಟ್ಟಾಗಿ ನಿಭಾಯಿಸಿದರು. ಎಲ್ಲರಿಗೂ ಶ್ಲಾಘನೆ ಸಲ್ಲಬೇಕು ಎಂದರು.

ಚಿತ್ರದುರ್ಗ: ರೌಡಿಗಳ ಹಾವಳಿ, ಸೈಬರ್ ಅಪರಾಧ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಗೃಹಸಚಿವ ಸೂಚನೆ

ಬರದಿಂದಾಗಿ ರಾಜ್ಯದಲ್ಲಿ 36 ಸಾವಿರ ಕೋಟಿ ರು. ನಷ್ಟವಾಗಿದೆ. ಇದರಲ್ಲಿ 17 ಸಾವಿರ ಕೋಟಿ ರು.ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದೇವೆ. ರೈತರ ಸಂಕಷ್ಟಕ್ಕೆ ಕಿವಿಗೊಡುತ್ತಿಲ್ಲ ಎಂದು ಬೇಸರಿಸಿದರು.
ಮಾಜಿ‌ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಣ್ಣಿನ ಮಗ ಎಂದು ಹೇಳಿಕೊಂಡು ಮೊಸಳೆ ಕಣ್ಣೀರು ಸುರಿಸುತ್ತಾರೆ. ಆದರೆ ಬರಗಾಲ ಬಂದು ಸಂಕಷ್ಟದಲ್ಲಿ ಸಿಲುಕಿರುವ ಸಂದರ್ಭದಲ್ಲಿ ರೈತರ ಬೆನ್ನಿಗೆ ನಿಲ್ಲುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ನಾಟಕ ಮಾಡುತ್ತಾರೆ. ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಸರ್ಕಾರವನ್ನು ಸಂಪೂರ್ಣವಾಗಿ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಚುರುಕಾಗಿ ಕೆಲಸ‌ ಮಾಡಬೇಕು ಎಂದು ಪರಮೇಶ್ವರ್ ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಈ ವೇಳೆ ಸಚಿವ ಡಿ.ಸುಧಾಕರ್, ಶಾಸಕರಾದ ರಘುಮೂರ್ತಿ ವೀರೇಂದ್ರ ಪಪ್ಪಿ, ಮಾಜಿ ಸಚಿವ ಎಚ್.ಆಂಜನೇಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಫೀರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios