ಕಾಂಗ್ರೆಸ್ ಸೇರ್ಪಡೆಗೆ ಅಂತಿಮ ಮಾತುಕತೆ ನಡೆಸಿದ ಕರ್ನಾಟಕ ಬಿಜೆಪಿ ಸಂಸದರ ಪುತ್ರ
ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಅವರ ಪುತ್ರ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಈ ಬಗ್ಗೆ ಅಂತಿಮ ಮಾತುಕತೆಗಳ ಸಹ ಮುಗಿದಿದ್ದು, ಇದೀಗ ಎಲ್ಲವೂ ಪೈನಲ್ ಆಗಿದೆ.
ಬೆಂಗಳೂರು, (ಫೆ.24): ಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
ಬೆಂಗಳೂರಿನ ಸದಾಶಿವ ನಗರದಲ್ಲಿರವ ಡಿ ಕೆ ಶಿವಕುಮಾರ್ ಅವರ ನಿವಾಸದಲ್ಲಿ ಇಂದು (ಬುಧವಾರ) ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಂತಿಮ ಚರ್ಚೆ ನಡೆಸಿದದು ಎಂದು ತಿಳಿದುಬಂದಿದೆ.
ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರುವುದು ಇದೀಗ ಅಧಿಕೃತವಾಗಿದೆ. ಗುರುವಾರ ( ಫೆ.25) ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಅಂತೆ-ಕಂತೆಗಳಿಗೆ ತೆರೆ: ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಅಧಿಕೃತ ಮುಹೂರ್ತ ಫಿಕ್ಸ್
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಪಕ್ಷತ ಇತರೆ ಮುಖಂಡರ ಸಮ್ಮುಖದಲ್ಲಿ ಶರತ್, ಅಧಿಕೃತವಾಗಿ ಕೈ ಹಿಡಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಡಿಕೆಶಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಶರತ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ವಿರುದ್ಧ ಬಿಜೆಪಿಯಿಂದ ಟಿಕೆಟ್ ಪಡೆದು ಸ್ಪರ್ಧಿಸಿ ಸೋತಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹೊಸಕೋಟೆ ಕ್ಷೇತ್ರಕ್ಕೆ ಬಡೆದ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಶರತ್ ಬಚ್ಚೇಗೌಡ ಬದಲಿಗೆ ಎಂಟಿಬಿ ನಾಗರಾಜ್ ಗೆ ಟಿಕೆಟ್ ನೀಡಿತ್ತು. ಈ ಸಂದರ್ಭದಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಶರತ್ ಜಯ ಗಳಿಸಿದ್ದರು.