ಮೊಬೈಲ್ ಆ್ಯಪ್‌ ಮೂಲಕ ಯುವ ಕಾಂಗ್ರೆಸ್‌ ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ: ಡಿಕೆ ಶಿವಕುಮಾರ

ಯುವ ಕಾಂಗ್ರೆಸ್ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆಗೆ ಪಕ್ಷದಿಂದ ಆಂತರಿಕ ಚುನಾವಣೆ ನಡೆಸಲಾಗುತ್ತಿದ್ದು, ಒಂದು ತಿಂಗಳ ಕಾಲ ಸದಸ್ಯತ್ವ ಅಭಿಯಾನವನ್ನು ಆರಂಭಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದರು.

how to elect youth congress president through mobile app in karnataka congress rav

ಬೆಂಗಳೂರು (ಜು.27): ಯುವ ಕಾಂಗ್ರೆಸ್ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆಗೆ ಪಕ್ಷದಿಂದ ಆಂತರಿಕ ಚುನಾವಣೆ ನಡೆಸಲಾಗುತ್ತಿದ್ದು, ಒಂದು ತಿಂಗಳ ಕಾಲ ಸದಸ್ಯತ್ವ ಅಭಿಯಾನವನ್ನು ಆರಂಭಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದರು.

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜು.24 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆ.2ರ ವರೆಗೆ ಸಲ್ಲಿಸಬಹುದು. ಎನ್‌ಎಸ್‌ಯುಐ ಸೇರಿದಂತೆ ಪಕ್ಷದಲ್ಲಿ ಕಾರ್ಯ ನಿರ್ವಹಿಸಿದ 18 ರಿಂದ 35 ವರ್ಷದೊಳಗಿನ ಕಾಂಗ್ರೆಸ್ ಸದಸ್ಯರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ಹೇಳಿದರು.

'ಭೂಮಿ ಇರೋತನಕ ರಾಮನಗರ ಹೆಸರು ತೆಗೆಯಲು ಸಾಧ್ಯವಿಲ್ಲ; ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಗುಡುಗು

ಆಗಸ್ಟ್ 16ರಿಂದ ಸೆಪ್ಟಂಬರ್ 16ರ ವರೆಗೆ ಯುವ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ನಡೆಸಲಾಗುತ್ತಿದೆ. 50 ರು. ಪಾವತಿಸಿ ಸದಸ್ಯತ್ವ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳಬೇಕಿದೆ. ಮುಖ ಗುರುತು ಪತ್ತೆ ವ್ಯವಸ್ಥೆಯನ್ನು ಇದು ಒಳಗೊಂಡಿರುತ್ತದೆ. ಇದರಿಂದ ನಕಲುಗಳನ್ನು ತಡೆಯಲು ಸಾಧ್ಯವಾಗಲಿದೆ. ಐವೈಸಿ ಮೊಬೈಲ್‌ ಆ್ಯಪ್‌ನಲ್ಲಿ ಸದಸ್ಯತ್ವ ನೋಂದಣಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ರಾಮನಗರ ಹೆಸರು ಬದಲಾವಣೆಯಿಂದ ಅಭಿವೃದ್ಧಿಯಾಗಲಿದೆ: ಶಾಸಕ ಇಕ್ಬಾಲ್ ಹುಸೇನ್

ಚುನಾವಣೆಯಲ್ಲಿ ಮಹಿಳೆಯರಿಗೆ, ಎಸ್‌ಸಿ-ಎಸ್ಟಿ, ಒಬಿಸಿ, ಅಲ್ಪಸಂಖ್ಯಾತರು, ವಿಶೇಷ ಚೇತನರು, ತೃತೀಯ ಲಿಂಗಿಗಳಿಗೆ ಮೀಸಲಾತಿಯನ್ನು ನೀಡಲಾಗುತ್ತದೆ. ಐವೈಸಿ ಆ್ಯಪ್‌ ಮೂಲಕವೇ ಪದಾಧಿಕಾರಿಗಳ ಆಯ್ಕೆಯ ಮತದಾನ ನಡೆಯಲಿದೆ. ಈ ಬಾರಿ ಚುನಾವಣಾ ಆಯೋಗಕ್ಕಿಂತ ಉತ್ತಮ ರೀತಿಯಲ್ಲಿ ಚುನಾವಣೆ ನಡೆಸಲಾಗುತ್ತದೆ. ಕಳೆದ ಬಾರಿ ಆ್ಯಪ್ ಹ್ಯಾಕಿಂಗ್ ಆರೋಪ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಆ್ಯಪ್ ಸುರಕ್ಷತೆ ಸುಧಾರಿಸಲಾಗಿದೆ ಎಂದು ಅವರು ಹೇಳಿದರು.

ಬ್ಲಾಕ್ ಕಮಿಟಿ, ವಿಧಾನಸಭೆ ಕ್ಷೇತ್ರವಾರು ಸಮಿತಿ, ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ಕಾರ್ಯದರ್ಶಿ, ಉಪಾಧ್ಯಕ್ಷರು, ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.

Latest Videos
Follow Us:
Download App:
  • android
  • ios