ನಾಳೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ, ಬಿಜೆಪಿಗೆ ಶೆಟ್ಟರ್ ಟಕ್ಕರ್, ಯಾರಾಗ್ತಾರೆ ಮೇಯರ್?

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 22 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ಚುನಾವಣೆಯನ್ನು ಜೂನ್ 20, 2023 ರಂದು ನಿಗದಿ ಪಡಿಸಲಾಗಿದೆ. ಎಲ್ಲಾ ಪಕ್ಷಗಳೂ ಕೊನೆ ಘಳಿಗೆಯ ಪಯತ್ನ ನಡೆಸಿವೆ.

Hubbali Dharwad Municipal Corporation  Mayoral  Election kannada news gow

 ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್  

ಧಾರವಾಡ (ಜೂ.19): ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 22 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ಚುನಾವಣೆಯನ್ನು ಜೂನ್ 20, 2023 ರಂದು ನಿಗದಿ ಪಡಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ (ಚುನಾವಣೆ)ಯ ಅಧ್ಯಕ್ಷಾಧಿಕಾರಿಗಳು ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜೂನ್ 20, 2023 ರಂದು ಮುಂಜಾನೆ 9 ರಿಂದ 11 ಗಂಟೆಯವರೆಗೆ  ಧಾರವಾಡದ ಪಾಲಿಕೆಯ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಭಾಭವನದಲ್ಲಿ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು ಮತ್ತು ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭಿಸಲಾಗುವುದು. ನಿಯಮಾವಳಿಯಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು 22ನೇ ಅವಧಿಯ ಚುನಾವಣೆಗೆ ಮಹಾಪೌರ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪ ಮಹಾಪೌರ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿಯನ್ನು ನಿಗದಿಗೊಳಿಸಲಾಗಿದೆ.

ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌

ಮಹಾಪೌರ ಮತ್ತು ಉಪಮಹಾಪೌರ ಸ್ಥಾನಕ್ಕೆ ನಡೆಯುವ ಚುನಾವಣೆ ಪ್ರಕ್ರಿಯೆಯಲ್ಲಿ ಸ್ವೀಕರಿಸಿದ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ನಡುವಳಿಕೆ ಪುಸ್ತಕದಲ್ಲಿ ಸದಸ್ಯರ ಸಹಿ ದಾಖಲಿಸುವುದು, ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ನಿಗದಿತ ಸಮಯಾನುಸಾರ ಮಾಡಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರ ಹಾಗೂ ಉಪ ಮಹಾಪೌರ ಚುನಾವಣೆಯ ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದ್ಯ ಬಿಜೆಪಿ ವಶದಲ್ಲಿರುವ ಹು-ಧಾ ಮಹಾನಗರ ಪಾಲಿಕೆ ಆಡಳಿತವನ್ನು ಬಿಟ್ಟು ಕೊಡದಿರುವ ನಿಟ್ಟಿನಲ್ಲಿ ಬಿಜೆಪಿ ಮುಖಂಡರು ತಮ್ಮೆಲ್ಲ ಸದಸ್ಯರನ್ನು ರೆಸಾರ್ಟ್ಗೆ ಕರೆದೊಯ್ದು ರೆಸಾರ್ಟ್ ರಾಜಕೀಯ ನಡೆಸಿದರೆ, ಇತ್ತ ಕೈ ಮುಖಂಡರು ಯಾವ ಕಾರ್ಯತಂತ್ರ ರೂಪಿಸುವ ಮೂಲಕ ಪಾಲಿಕೆ ವಶಪಡಿಸಿಕೊಳ್ಳಬಹುದು ಎಂಬ ಲೆಕ್ಕಾಚಾರದಲ್ಲಿದ್ದಾರೆ.

ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್ ಕೊಟ್ಟ ಕೋರ್ಟ್!

ಕಾರ್ಮಿಕ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು, ಹುಬ್ಬಳ್ಳಿ ಧಾರವಾಡ ಭಾಗದ ಜನಪ್ರತಿನಿಧಿಗಳು ಹಾಗೂ ನಾಯಕರ ಜೊತೆ ಸಭೆ ನಡೆಸಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್‌ ಮತ್ತು ಉಪ ಮೇಯರ್‌ ಚುನಾವಣೆ ಬಗ್ಗೆ ಚರ್ಚಿಸಿದರು.

ಅಧಿಕಾರ ಪಡೆದುಕೊಳ್ಳುವ ಕಾರ್ಯತಂತ್ರದ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಸಿದ್ದಾರೆ. ಸಭೆಯಲ್ಲಿ ಹಿರಿಯ ನಾಯಕರಾದ ಜಗದೀಶ್‌ ಶೆಟ್ಟರ್‌, ಶಾಸಕರಾದ ವಿನಯ್‌ ಕುಲಕರ್ಣಿ, ಎನ್‌.ಎಚ್‌. ಕೋನರಡ್ಡಿ, ಪ್ರಸಾದ ಅಬ್ಬಯ್ಯ ಹಾಗೂ ಮುಖಂಡರಾದ ಅನಿಲ ಪಾಟೀಲ, ಇಸ್ಮಾಯಿಲ್‌ ತಮಟಗಾರ ಇದ್ದರು. ತಮ್ಮ ಸದಸ್ಯರು ಸೇರಿದಂತೆ ಪಕ್ಷೇತರ, ಎಐಎಂಐಎಂ ಹಾಗೂ ಬಿಜೆಪಿ ಸದಸ್ಯರನ್ನು ಹೇಗೆ ಒಟ್ಟುಗೂಡಿಸಿ ತಮ್ಮ ಬಲ ತೋರಿಸಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ.

ಕಳೆದ ಎರಡು ದಶಕಗಳಿಂದ ಬಿಜೆಪಿ ಹಿಡಿತದಲ್ಲಿರೋ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನು ವಶಪಡಿಸಿಕೊಳ್ಳಲು ಬಿಜೆಪಿ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಒಟ್ಟು 82 ಸದಸ್ಯರ ಸಂಖ್ಯಾಬಲ ಹೊಂದಿರೋ‌ ಮಾಹಾನಗರ ಪಾಲಿಕೆಯಲ್ಲಿ ಸದ್ಯ ಬಿಜೆಪಿ 39, ಕಾಂಗ್ರೆಸ್ 33, AIMIM 3, ಪಕ್ಷೇತರ 6 ಹಾಗೂ ಜೆಡಿಎಸ್ ಒಬ್ಬರು ಪಾಲಿಕೆ ಸದಸ್ಯರಿದ್ದಾರೆ.

Latest Videos
Follow Us:
Download App:
  • android
  • ios