ಹುಬ್ಬಳ್ಳಿ, (ಅ.25): ಡ್ರಗ್ಸ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದಾರೆ. 

ನಟಿ ರಾಗಿಣಿ ಬಂಧನದ ನಂತರ ಹುಬ್ಬಳ್ಳಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವರ ಆಪ್ತರನಾಗಿರುವ ಗಿರೀಶ್ ಗದಿಗೆಪ್ಪಗೌಡರ ನಟಿ ರಾಗಿಣಿ ಜೊತೆ ನಂಟು ಹೊಂದಿದ್ದಾರೆ ಎನ್ನುವುದು ಬೆಳಕಿಗೆ ಬಂದಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಕೈ ನಾಯಕ ಗದಿಗೆಪ್ಪಗೌಡರನ್ನ ತ್ರೀವ ವಿಚಾರಣೆ ಒಳಪಡಿಸಿದ್ದರು. ಹೀಗಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಗದಿಗೆಪ್ಪಗೌಡರ್ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.

ಡ್ರಗ್ಸ್‌ ಮಾಫಿಯಾ: ರಾಗಿಣಿ ಸಂಪರ್ಕದಲ್ಲಿದ್ದ ಕಾಂಗ್ರೆಸ್​ ಮುಖಂಡ ಸಿಸಿಬಿ ವಶಕ್ಕೆ

ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಬಂಧನ ಮಾಡುವ ಪ್ರಸಂಗ ಎದುರಾದರೆ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಧೀಶರು ಆದೇಶ ಮಾಡಿದ್ದಾರೆ. ಆದರೆ ಪ್ರಕರಣ ದಾಖಲಾಗುವ ಮುನ್ನವೇ ಕೈ ನಾಯಕ ಗಿರೀಶ್ ಗದಿಗೆಪ್ಪಗೌಡರ ನಿರೀಕ್ಷಣಾ ಜಾಮೀನು ಪಡೆದಿರುವುದು ಚರ್ಚೆಗೆ ಗ್ರಾಸವಾಗಿದೆ.

ನಟಿ ರಾಗಿಣಿ ಜೊತೆ ಹೊಂದಿದ ನಂಟು ಹಾಗೂ ಗೋವಾದ ಕ್ಯಾಸಿನೋ ಉದ್ಘಾಟನೆಯನ್ನು ನಟಿ ರಾಗಿಣಿ ನೇರವೇರಿಸಿದ ಬಗ್ಗೆ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು. ಗಿರೀಶ್ ಗದಿಗೆಪ್ಪಗೌಡರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಆದರೂ ಬಂಧನದ ಭೀತಿಯಿಂದ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದಾರೆ.