ಉತ್ತರ ಕರ್ನಾಟಕದಲ್ಲಿ ಜೆಡಿಎಸ್‌ಗೆ ಮೇಲಿಂದ ಮೇಲೆ ಪೆಟ್ಟು ಬೀಳುತ್ತಿದೆ. ಕಳೆದೊಂದು ವರ್ಷದಲ್ಲಿ ಹಲವು ನಾಯಕರು ಜೆಡಿಎಸ್ ತೊರೆದು ಇತರ ಪಕ್ಷಗಳಿಗೆ ಸೇರ್ಪಡೆಯಾಗಿದ್ದಾರೆ. ಇದರ ಮಧ್ಯೆ ಮತ್ತೊಂದು ವಿಕೆಟ್ ಬಿದ್ದಿದೆ.
ಹುಬ್ಬಳ್ಳಿ, (ಜ.19): ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಈಗಿನಂದಲೇ ಭರ್ಜರಿ ತಯಾರಿ ನಡೆಸಿದ್ದು, ಪಕ್ಷ ಸಂಘಟನೆಗೆ ವಲಯವಾರು ವೀಕ್ಷಕರುಗಳನ್ನು ನೇಮಕ ಮಾಡಿದೆ.
ಆದ್ರೆ, ಇದರ ಮಧ್ಯೆ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗಿದ್ದು, ದಳಪತಿಗಳಿಗೆ ದಿಕ್ಕುತೋಚದಂತಾಗಿದೆ. ಈ ಬೆಳವಣಿಗೆಯಿಂದ ಸದ್ಯ ಜೆಡಿಎಸ್ ವರಿಷ್ಠರಿಗೆ ತಲೆನೋವು ಶುರುವಾಗಿದೆ.
ತಳಮಟ್ಟದಿಂದ ಪಕ್ಷ ಸಂಘಟನೆಗೆ ಜೆಡಿಎಸ್ ಒತ್ತು, ಇಲ್ಲಿದೆ ದಳಪತಿಗಳ ಪಕ್ಕಾ ಪ್ಲಾನ್..!
ಜೆಡಿಎಸ್ ಹುಬ್ಬಳ್ಳಿ-ಧಾರವಾಡ ನಗರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಣ್ಣ ಕೊರವಿ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ನಾಯಕ ದೇವೇಗೌಡರಿಗೆ ರಾಜಣ್ಣ ಕೊರವಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜಣ್ಣ ಕೊರವಿ ಎರಡು ಬಾರಿ ಮಹಾನಗರ ಪಾಲಿಕೆ ಸದಸ್ಯರಾಗಿದ್ದರು. ಅಲ್ಲದೇ ನಗರ ಮತ್ತು ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಜೆಡಿಎಸ್ ಟಿಕೆಟ್ ಮೇಲೆ ಜಗದೀಶ ಶೆಟ್ಟರ್ ವಿರುದ್ಧ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.
ಬಹುಮುಖ್ಯವಾಗಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬಹಳ ಆಪ್ತರಾಗಿದ್ದರು. ಆದ್ರೆ, ಇದೀಗ ದಿಢೀರ್ ಅಂತ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ರಾಜಣ್ಣ ಅವರು ಬಿಜೆಪಿಯತ್ತ ಒಲವು ತೋರಿದ್ದಾರೆ ಎನ್ನಲಾಗಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 19, 2021, 10:49 PM IST