ಬಿಜೆಪಿ ಯಾತ್ರೆಗೆ ಭಾರಿ ಬೆಂಬಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದಿದ್ದು, ರಥಯಾತ್ರೆಗೆ ನಿರೀಕ್ಷೆಗೂ ಮೀರಿದ ಬೆಂಬಲ ಸಿಗುತ್ತಿದೆ. ಕಾಂಗ್ರೆಸ್, ಜೆಡಿಎಸ್ ಯಾತ್ರೆಗಳಿಗಿಂತಲೂ ನಮ್ಮ ರಥಯಾತ್ರೆಗೆ ಜನಬೆಂಬಲ ಸಿಗುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಬೆಂಗಳೂರು (ಮಾ.12): ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದಿದ್ದು, ರಥಯಾತ್ರೆಗೆ ನಿರೀಕ್ಷೆಗೂ ಮೀರಿದ ಬೆಂಬಲ ಸಿಗುತ್ತಿದೆ. ಕಾಂಗ್ರೆಸ್, ಜೆಡಿಎಸ್ ಯಾತ್ರೆಗಳಿಗಿಂತಲೂ ನಮ್ಮ ರಥಯಾತ್ರೆಗೆ ಜನಬೆಂಬಲ ಸಿಗುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಹೆದ್ದಾರಿ ಯೋಜನೆ, ರೈಲ್ವೆ ನಿಲ್ದಾಣಗಳಿಗೆ ಹಣ ಕೊಡುತ್ತಿದ್ದಾರೆ. ವಿಮಾನ ನಿಲ್ದಾಣಗಳ ನಿರ್ಮಾಣ ಆಗುತ್ತಿದೆ. ಕುಡಿಯುವ ನೀರು, ವಿದ್ಯುತ್ ಸೇರಿ ಎಲ್ಲ ಮೂಲಭೂತ ಸೌಕರ್ಯಗಳಿಗೆ ಅನುದಾನ ನೀಡುತ್ತಿದ್ದಾರೆ ಎಂದರು.
ಎಕ್ಸ್‌ಪ್ರೆಸ್ ವೇನಿಂದ ಅಭಿವೃದ್ಧಿ: ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿಯಿಂದ ಎರಡೂ ನಗರಗಳ ಅಭಿವೃದ್ಧಿಯಾಗಲಿದೆ. ಹೆದ್ದಾರಿಯ ಎರಡೂ ಬದಿಗಳಲ್ಲಿ ಕೈಗಾರಿಕಾ ಕಾರಿಡಾರ್ ಅಥವಾ ಮಳಿಗೆಗಳು, ಹೋಟೆಲ್‌ಗಳ ಮೂಲಕ ಉದ್ಯೋಗ ಲಭಿಸಲಿದೆ ಎಂದು ಹೇಳಿದರು. ಬೆಂಗಳೂರು- ಮೈಸೂರು ಹೆದ್ದಾರಿ ದಶಕಗಳ ಕನಸು. ಪ್ರಧಾನಿಯಾಗಿದ್ದ ದೇವೇಗೌಡರು ಇಂತಹ ರಸ್ತೆಯ ಕನಸು ಕಂಡಿದ್ದರು. ಆದರೆ, ನೈಸ್ ರಸ್ತೆ ಯಶವಂತಪುರ, ಬಿಡದಿಯಿಂದ ಮುಂದೆ ಹೋಗಲೇ ಇಲ್ಲ. ಆ ಸಮಯದಲ್ಲಿ ರಸ್ತೆ ನಿರ್ಮಾಣ ಆಗಿದ್ದರೆ ಮೈಸೂರು ಮತ್ತು ರಸ್ತೆ ಹಾದು ಹೋಗುವ ಪ್ರದೇಶಗಳು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಆಗುತ್ತಿದ್ದವು ಎಂದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥನಾರಾಯಣ, ಸಿದ್ದರಾಜು, ಮಹೇಶ್ ಟೆಂಗಿನಕಾಯಿ ಉಪಸ್ಥಿತರಿದ್ದರು.
ಸ್ಮಾರ್ಟ್ ವರ್ಚುವಲ್ ಕ್ಲಿನಿಕ್‌ಗೆ ಸಿಎಂ ಚಾಲನೆ: ಅಗತ್ಯವಾದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಶಿಫಾರಸ್ಸು
ಕಾಂಗ್ರೆಸ್ ಅಂದರೆ ಜಾತಿ ಮಧ್ಯೆ ಒಡೆದಾಳುವ ಪಕ್ಷ: ಕಾಂಗ್ರೆಸ್ ಅಂದರೆ ಜಾತಿ ಹಾಗೂ ಧರ್ಮದ ಆಧಾರದಲ್ಲಿ ರಾಜಕಾರಣ ಮಾಡುವ ಪಕ್ಷ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಗುಂಡ್ಲುಪೇಟೆಯಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥ ಯಾತ್ರೆಯಲ್ಲಿ ಅವರು ಮಾತನಾಡಿ, ಜಾತಿ ಮತ್ತು ಧರ್ಮಒಡೆಯುವ ಪಕ್ಷ ಎಂದರೆ ಅದು ಕಾಂಗ್ರೆಸ್, ಸಿದ್ದರಾಮಯ್ಯ ಕೇವಲ ಒಂದು ಸಮುದಾಯಕ್ಕೆ ಮಾತ್ರ ಶಾದಿ ಭಾಗ್ಯ ನೀಡಿದರು. ಪ್ರಧಾನಿ ಮೋದಿ 10 ಕೆಜಿ ಅಕ್ಕಿ ನೀಡಿದರೆ ಅದಕ್ಕೆ ಸಿದ್ದರಾಮಯ್ಯ ಅವರು ಅನ್ನ ಭಾಗ್ಯ ಎನ್ನುವ ಸ್ಟಿಕ್ಕರ್ ಹಾಕಿಕೊಂಡು ಅನ್ನಭಾಗ್ಯ ಕಾಂಗ್ರೆಸ್ ಯೋಜನೆ ಎಂದು ಹೇಳಿಕೊಂಡರು ಎಂದು ಆಕ್ರೋಶ ಹೊರಹಾಕಿದರು.
ಭೀಮಾತೀರದಲ್ಲಿ ಟಿಕೆಟ್‌ಗಾಗಿ ಕುಟುಂಬದೊಳಗೇ ಕಾದಾಟ: ಅಖಾಡಕ್ಕೆ ಎಸ್‌ಐ ಹಗರಣದ ಕಿಂಗ್‌ಪಿನ್ ಸಜ್ಜು
ಹಿಂದಿನ ಪ್ರಧಾನಿಯ ಸಮಯದಲ್ಲಿ ಭಾರತೀಯರನ್ನು ವಿದೇಶಗಳಲ್ಲಿ ಬಿಕ್ಷುಕರಂತೆ ಕಾಣುತ್ತಿದ್ದರು. ಆದರೆ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ನಮ್ಮ ದೇಶ ಅಗ್ರಮಾನ್ಯವಾಗಿದೆ, ನಮ್ಮ ದೇಶದ ಪ್ರಧಾನಿ ಬೇರೆ ದೇಶಗಳಿಗೆ ತೆರಳಿದರೆ ರೆಡ್ ಕಾರ್ಪೇಟ್ ಸ್ವಾಗತ ಸಿಗುತ್ತಿದೆ, ಮೋದಿ ಅವರ ಮಾತನ್ನು ಇಡೀ ವಿಶ್ವ ಕೇಳಿಸಿಕೊಳ್ಳುತ್ತದೆ. ಇದು ಬಿಜೆಪಿ ಬಂದ ನಂತರದ ಬದಲಾವಣೆ. ಮೋದಿ ಅವರನ್ನು ಬಿಡಿ ಅವರ ಸಂಪುಟದ ಸಹೋದ್ಯೋಗಿಗಳ ವಿರುದ್ಧವೂ ಒಂದು ಭ್ರಷ್ಟಾಚಾರದ ಕಪುತ್ರ್ಪ ಚುಕ್ಕೆ ಕೇಳಿಬಂದಿಲ್ಲ ಎಂದರು. ಈ ಬಾರಿ ಗುಂಡ್ಲುಪೇಟೆ ಕ್ಷೇತ್ರದ ಶಾಸಕ ನಿರಂಜನ್ ಅವರನ್ನು ಸುಮಾರು 30ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿ ಜೊತೆಗೆ ಚಾಮರಾಜನಗರದ ನಾಲ್ಕು ಕ್ಷೇತ್ರದಲ್ಲೂ ಕಮಲ ಅರಳಿಸಿ ಎಂದು ಮನವಿ ಮಾಡಿದರು.