ನಾನೂ ನಿರಂತರವಾಗಿ ಪ್ರಾಣಾಯಾಮ, ದೈಹಿಕ ಕಸರತ್ತು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
ಚಟುವಟಿಕೆ ಇಲ್ಲದೆ ಕುಳಿತವರಿಗೆ ಅನಾರೋಗ್ಯ ಹೆಚ್ಚು. ಹೀಗಾಗಿ ದೈಹಿಕ ಮತ್ತು ಮಾನಸಿಕ ಚಟುವಟಿಕೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು (ಜೂ.07): ಚಟುವಟಿಕೆ ಇಲ್ಲದೆ ಕುಳಿತವರಿಗೆ ಅನಾರೋಗ್ಯ ಹೆಚ್ಚು. ಹೀಗಾಗಿ ದೈಹಿಕ ಮತ್ತು ಮಾನಸಿಕ ಚಟುವಟಿಕೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಚಿವಾಲಯ ನೌಕರರ ಸಂಘ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಚಟುವಟಿಕೆ ಇಲ್ಲದೆ ಕುಳಿತವರಿಗೆ ಅನಾರೋಗ್ಯ ಹೆಚ್ಚು. ಹೀಗಾಗಿ ನಾನೂ ನಿರಂತರವಾಗಿ ಪ್ರಾಣಾಯಾಮ ಮತ್ತು ದೈಹಿಕ ಕಸರತ್ತು ಮಾಡುತ್ತೇನೆ ಎಂದು ಹೇಳಿದರು.
ಜೀವನಶೈಲಿ ಮತ್ತು ಆಹಾರ ಪದ್ಧತಿ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ರಾಜ್ಯ ಸರ್ಕಾರ ಎಲ್ಲ ವರ್ಗದ ಜನರಿಗೆ ಆರೋಗ್ಯ ಮತ್ತು ಅಗತ್ಯ ಚಿಕಿತ್ಸೆ ಒದಗಿಸಲು ಕಾರ್ಯಕ್ರಮಗಳನ್ನು ನಿರಂತರವಾಗಿ ರೂಪಿಸಿ ಜಾರಿ ಮಾಡುತ್ತಿದ್ದೇವೆ. ಕ್ಯಾನ್ಸರ್ ನಂತಹ ಮಾರಕ ರೋಗವನ್ನೂ ಗುಣಪಡಿಸುವುದು ಸಾಧ್ಯವಿದೆ. ಆದರೆ ಆರಂಭಿಕ ಹಂತದಲ್ಲೇ ಕಾಯಿಲೆ ಪತ್ತೆ ಹಚ್ಚಲು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೋರಿ ಗೌರ್ನರ್‌ಗೆ ಬಿಜೆಪಿ ದೂರು
ತಪಾಸಣಾ ಶಿಬಿರ ನಡೆಸಿ: ತುಂಬಾ ವಯಸ್ಸಾದ ಮೇಲೆ ಬರುವ ಆರೋಗ್ಯ ಸಮಸ್ಯೆಗಳು ಬರದಂತೆ ವಯಸ್ಸಿದ್ದಾಗಲೇ ಪ್ರಯತ್ನಿಸಬೇಕು, ಇಂತಹ ಆರೋಗ್ಯ ತಪಾಸಣಾ ಶಿಬಿರಗಳು ರಾಜ್ಯದ ಮೂಲೆ ಮೂಲೆಗಳಲ್ಲೂ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಹಾರ ಪದ್ಧತಿ ಬಗ್ಗೆ ಜಾಗೃತಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಉತ್ತಮ ಆರೋಗ್ಯ ನಾವು ಸೇವಿಸುವ ಆಹಾರದ ಮೇಲೆ ನಿಂತಿದೆ. ಹೀಗಾಗಿ ಶಾಲಾ ಮಕ್ಕಳ ಹಂತದಲ್ಲಿಯೇ ಆಹಾರದ ಬಗ್ಗೆ ಅರಿವು ಮೂಡಿಸಲಾಗುವುದು. ಉತ್ತಮ ಆಹಾರದ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಜರಿದ್ದರು.
1987 ಆಗಸ್ಟ್ 27ಕ್ಕೆ ಸಿಗರೇಟ್ ಬಿಟ್ಟೆ: ಚಟಗಳ ಬಗ್ಗೆ ಎಚ್ಚರವಹಿಸಬೇಕು. ನನಗೆ ಸಿಗರೇಟ್ ಹೆಚ್ಚು ಸೇದುತ್ತಿದ್ದೇನೆ ಎಂಬುದು ಮನವರಿಕೆಯಾಗಿ 1987 ಆಗಸ್ಟ್ 27 ಕ್ಕೆ ಸಿಗರೇಟ್ ಬಿಟ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಾನು ಈಗ 24*7 ರಾಜಕಾರಣಿ, ಸಿನಿಮಾ ಮಾಡೋದನ್ನು ಬಂದ್ ಮಾಡಿದ್ದೇನೆ: ನಿಖಿಲ್ ಕುಮಾರಸ್ವಾಮಿ
ಸಹವಾಸ ದೋಷದಿಂದಲೂ ಅನಾರೋಗ್ಯ ತರುವ ಚಟಗಳು ಅಂಟಿಕೊಳ್ಳುತ್ತವೆ. ನಾನೂ ಮೊದಲು ಸಿಗರೇಟ್ ಸೇದುತ್ತಿದ್ದೆ. ಒಮ್ಮೆ ವಿದೇಶಕ್ಕೆ ಹೋದಾಗ ಸ್ನೇಹಿತರು ಸಿಗರೇಟ್ ಪ್ಯಾಕ್ ತಂದುಬಿಟ್ಟಿದ್ದರು. ಕಡಿಮೆ ಅವಧಿಯಲ್ಲಿ ಹೆಚ್ಚು ಸಿಗರೇಟ್ ಸೇದಿಬಿಟ್ಟೆ. ಆಗ ನನ್ನ ತಪ್ಪು ಮನವರಿಕೆಯಾಗಿ ಆ.27ರಂದು ಸಿಗರೇಟು ಸೇದುವುದನ್ನು ಸಂಪೂರ್ಣ ನಿಲ್ಲಿಸಿದೆ ಎಂದು ನೆನಪಿಸಿಕೊಂಡರು.