Asianet Suvarna News Asianet Suvarna News

ನಾನು ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ ಆಕಾಂಕ್ಷಿ: ಸಿಎಂ ಸಲಹೆಗಾರ ಬಿ.ಆರ್‌.ಪಾಟೀಲ್‌

ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್‌ ಆಕಾಂಕ್ಷಿ. ಈ ಸಂಬಂಧ ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡಿ ಟಿಕೆಟ್‌ ನೀಡುವಂತೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿಯವರ ಸಲಹೆಗಾರ, ಆಳಂದ ಶಾಸಕ ಬಿ.ಆರ್‌.ಪಾಟೀಲ್‌ ತಿಳಿಸಿದ್ದಾರೆ. 

I am a Bidar Loksabha Ticket aspirant Says Mla BR Patil At Kalaburagi gvd
Author
First Published Jan 13, 2024, 4:00 AM IST | Last Updated Jan 13, 2024, 4:00 AM IST

ಕಲಬುರಗಿ (ಜ.13): ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್‌ ಆಕಾಂಕ್ಷಿ. ಈ ಸಂಬಂಧ ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡಿ ಟಿಕೆಟ್‌ ನೀಡುವಂತೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿಯವರ ಸಲಹೆಗಾರ, ಆಳಂದ ಶಾಸಕ ಬಿ.ಆರ್‌.ಪಾಟೀಲ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಬಸವಣ್ಣನವರ ಪರಮ ಭಕ್ತ. ಇಡೀ ಬೀದರ್‌ ಜಿಲ್ಲೆ ಬಸವಣ್ಣನವರ ಕರ್ಮ ಭೂಮಿ, ಬಸವಣ್ಣನವರ ನಂಬಿಕೆ ಇರುವ ಎಲ್ಲಾ ಪ್ರಗತಿಪರ ಸಂಘಟನೆಗಳು, ಎಲ್ಲಾ ಜಾತಿ, ಧರ್ಮದವರು ಚುನಾವಣೆಯಲ್ಲಿ ನನಗೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು. ನಾನು ಶಾಸಕನಾಗಿರುವ ಆಳಂದ ಮತಕ್ಷೇತ್ರ ಬೀದರ್‌ ಲೋಕಸಭಾ ಕ್ಷೇತ್ರದಡಿಯಲ್ಲೇ ಬರಲಿದೆ. 

ಹೀಗಾಗಿ ಲೋಕಸಭೆಯಲ್ಲಿ ಬೀದರ್‌ನಿಂದ ಕಣಕ್ಕಿಳಿಯುವ ಬಗ್ಗೆ ಶೀಘ್ರವೇ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಬೇಡಿಕೆ ಮಂಡಿಸುವೆ ಎಂದರು. ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಇವರನ್ನೆಲ್ಲ ಕಂಡು ಬೀದರ್‌ ಟಿಕೆಟ್‌ ಕೇಳುವೆ ಎಂದರು. ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ನಾಯಕರ ಗೈರು ಬಗ್ಗೆ ಪ್ರತಿಕ್ರಿಯಿಸಿ, ದೇಶದಲ್ಲಿ ಅದೊಂದು ದೊಡ್ಡ ರಾಜಕೀಯ ಆಗಿ ಬಿಟ್ಟಿದೆ. ನಾಲ್ಕು ಜನ ಶಂಕರಾಚಾರ್ಯರು ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ. ಇದು ಪ್ರಧಾನಿ ಮೋದಿಯವರಿಗೆ ದೊಡ್ಡ ಹಿನ್ನಡೆ ಎಂದು ಹೇಳಿದರು.

ಸಂಸದ ಖೂಬಾ, ಸಂಗಣ್ಣ, ದೇವೇಂದ್ರಪ್ಪ, ಮುನಿಸ್ವಾಮಿ ಸ್ಪರ್ಧೆಗೆ ಬಿಜೆಪಿಗರ ಆಕ್ಷೇಪ

ಸಿಎಂ ಸಲಹೆಗಾರರ ಹುದ್ದೆ ರಕ್ಷಣೆಗೆ ಸುಗ್ರೀವಾಜ್ಞೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರ್ಥಿಕ ಸಲಹೆಗಾರರಾಗಿ ನೇಮಕಗೊಂಡಿರುವ ಬಸವರಾಜ ರಾಯರೆಡ್ಡಿ, ಸಲಹೆಗಾರ ಬಿ.ಆರ್‌.ಪಾಟೀಲ್‌ ಹಾಗೂ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌.ವಿ. ದೇಶಪಾಂಡೆ ಅವರ ಹುದ್ದೆಗಳಿಗೆ ರಕ್ಷಣೆ ನೀಡಲು ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ನಿರ್ಧಾರ ಮಾಡಿದೆ. ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣೆ) ತಿದ್ದುಪಡಿ ವಿಧೇಯಕವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ತೀರ್ಮಾನಿಸಿರುವುದಾಗಿ ಸಚಿವ ಎಚ್‌.ಕೆ.ಪಾಟೀಲ್ ಮಾಹಿತಿ ನೀಡಿದರು.

ಇದರಡಿ ವಿಧಾನಸಭೆ ಅಥವಾ ವಿಧಾನಪರಿಷತ್‌ ಸದಸ್ಯರಾಗಿದ್ದಾರೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳಿಗೆ ಯಾವುದೇ ವ್ಯಕ್ತಿ ಆರ್ಥಿಕ ಸಲಹೆಗಾರರು, ಯಾವುದೇ ಆಯೋಗದ ಅಧ್ಯಕ್ಷರು ಅಥವಾ ಸದಸ್ಯರರಾಗಿ ನೇಮಕಗೊಳ್ಳುವುದಕ್ಕೆ ಅನರ್ಹರಾಗುವುದನ್ನು ತಪ್ಪಿಸಲು ಈ ತಿದ್ದುಪಡಿ ತರಲಾಗಿದೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಸೋಲು: ಜನಾರ್ದನ ರೆಡ್ಡಿ

ರಸ್ತೆ ನಿರ್ಮಾಣಕ್ಕೆ ₹9 ಸಾವಿರ ಕೋಟಿ: ಲೋಕೋಪಯೋಗಿ ಇಲಾಖೆಯಿಂದ ರಾಜ್ಯದಲ್ಲಿ 2500 ಕಿ.ಮೀ. ರಸ್ತೆ ಅಭಿವೃದ್ಧಿಗೆ 9 ಸಾವಿರ ಕೋಟಿ ರು. ವೆಚ್ಚದ ವಿವಿಧ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಹೊಸ ಸರ್ಕಾರ ಬಂದಾಗಿನಿಂದಲೂ ಅಭಿವೃದ್ಧಿ ಚಟುವಟಿಕೆ ನಿಂತುಹೋಗಿದೆ ಎಂದು ಆಡಳಿತ ಪಕ್ಷದ ಶಾಸಕರೇ ದನಿ ಎತ್ತಿದ್ದರು. ಸರ್ಕಾರವು ಗ್ಯಾರಂಟಿ ಯೋಜನೆ ಅನುಷ್ಠಾನ ಕಾರಣಕ್ಕೆ ಡಿಸೆಂಬರ್‌ವರೆಗೂ ಸಹಿಸಿಕೊಳ್ಳುವಂತೆ ತನ್ನ ಶಾಸಕರಿಗೆ ಕೋರಿತ್ತು. ಇದೀಗ ಮೊದಲ ಹಂತದಲ್ಲಿ ಒಂಬತ್ತು ಸಾವಿರ ಕೋಟಿ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಪಡಿಸಲು ಕ್ರಿಯಾಯೋಜನೆ ರೂಪಿಸಿದೆ.

Latest Videos
Follow Us:
Download App:
  • android
  • ios