ಮೈಸೂರು- ಕೊಡಗು ಲೋಕಸಭೆ ಸೀಟಿಗೆ ನಾನು ಆಕಾಂಕ್ಷಿ: ಎಚ್‌.ವಿಶ್ವನಾಥ್‌

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಹೆಸರು ಪ್ರಸ್ತಾಪವಾಗಿದೆ. ಆದರೆ ನಾನೂ ಆಕಾಂಕ್ಷಿ ಆಗಿದ್ದೇನೆ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು.

I am an aspirant for Mysore Kodagu Lok Sabha seat Says H Vishwanath gvd

ಮೈಸೂರು (ಆ.05): ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಹೆಸರು ಪ್ರಸ್ತಾಪವಾಗಿದೆ. ಆದರೆ ನಾನೂ ಆಕಾಂಕ್ಷಿ ಆಗಿದ್ದೇನೆ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಟಿಕೆಟ್‌ ಕೇಳೋಣ ಅಂದುಕೊಂಡಿದ್ದೀನಿ. ಮುಂದಿನ ದಿನಗಳಲ್ಲಿ ಏನಾಗುತ್ತೆ ನೋಡೋಣ. ಯತೀಂದ್ರ ಸಿದ್ದರಾಮಯ್ಯ ಹೆಸರು ಕೂಡ ಪ್ರಸ್ತಾಪ ಆಗಿದೆ. ಅದೂ ಒಳ್ಳೆಯದೆ. ಕಾಂಗ್ರೆಸ್‌ ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತೋ ನೋಡೋಣ ಎಂದರು.

ಇಬ್ಬರು ಸತ್ಯ ಹರಿಶ್ಚಂದ್ರರು: ರಾಜ್ಯದಲ್ಲಿ ಈಗ ಇಬ್ಬರು ಸತ್ಯಹರಿಶ್ಚಂದ್ರರು ಉಳಿದಿದ್ದಾರೆ. ಸತ್ಯಹರಿಶ್ಚಂದ್ರ ಸತ್ತಮೇಲೆ ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ಮಾತ್ರ ಉಳಿದಿದ್ದಾರೆ. ಇವರಿಬ್ಬರೂ ಮುಖ್ಯಮಂತ್ರಿ ಆಗಿದ್ದಾಗ ಮಾಡಿದ ಅದ್ವಾನಗಳನ್ನು ಜನ ಈಗಲೂ ಅನುಭವಿಸುತ್ತಿದ್ದಾರೆ. ಕುಮಾರಸ್ವಾಮಿ ಅವರೇ ಆ ಪೆನ್‌ ಡ್ರೈವ್‌ ಏನಾಯ್ತು ಹೇಳಿ? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡಬೇಡಿ ಎಂದು ಕಟುವಾಗಿ ಟೀಕಿಸಿದರು. ಏನೇನೋ ಆರೋಪ ಮಾಡುತ್ತೀರಿ? ಆದರೆ ಯಾವುದನ್ನು ಸಾಬೀತು ಮಾಡಿದ್ದೀರಿ? ನೀವು ಮುಖ್ಯಮಂತ್ರಿ ಆಗಿದ್ದವರು. ಮಾತಿನಿಂದ ನಿಮ್ಮ ಘನತೆ ಕಡಿಮೆ ಆಗುತ್ತಿದೆ ಅಷ್ಟೆಎಂದರು.

ನೈಸ್ ಅಕ್ರಮಗಳ ಬಗ್ಗೆ ಪ್ರಧಾನಿ ಮೋದಿ, ಶಾಗೆ ಶೀಘ್ರ ದೂರು: ಎಚ್‌ಡಿಕೆ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಇಪಿ- ಟಿಎಸ್ಪಿ ಹಣ ಬಳಸಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಆದರೆ ಅಗತ್ಯ ಇರುವ ಕಡೆಗೆ ಅನುದಾನ ಬಳಸಿಕೊಳ್ಳಲು ಸರ್ಕಾರಕ್ಕೆ ಅನುವಂಶೀಯವಾದ ಅಧಿಕಾರ ಇದೆ. ಅದನ್ನೇ ಬಿಜೆಪಿ, ಜೆಡಿಎಸ್‌ನವರು ದೊಡ್ಡದಾಗಿ ಬೊಬ್ಬೆ ಹೊಡೆಯುತ್ತಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ದಲಿತರಿಗೆ ಏನು ಮಾಡಿದ್ದರು ಎಂದು ವಿಶ್ವನಾಥ್‌ ಪ್ರಶ್ನಿಸಿದರು.

ನಾನೂ ಜೆಡಿಎಸ್‌ ರಾಜ್ಯಾಧ್ಯಕ್ಷ ಆಗಿದ್ದೆ. ಸಮ್ಮಿಶ್ರ ಸರ್ಕಾರದಲ್ಲಿ 12 ಮಂದಿಗೆ ಸಚಿವ ಸ್ಥಾನ ಸಿಕ್ಕಿತ್ತು. ಇದರಲ್ಲಿ 7 ಸಚಿವರು ಕುಮಾರಸ್ವಾಮಿ ಮನೆಯವರೇ ಆಗಿದ್ದರು. ಬಂಡೆಪ್ಪ ಕಾಶಂಪೂರ್‌ ಒಬ್ಬ ಕುರುಬ, ಇನ್ನಿಬ್ಬರು ಲಿಂಗಾಯತರು. ಎರಡು ಸಚಿವ ಸ್ಥಾನ ಖಾಲಿಯೇ ಇತ್ತು. ದಲಿತರು ಹಾಗೂ ಮುಸ್ಲಿಮರಿಗೆ ಕೊಡಿ ಅಂತ ಕೇಳಿದ್ದೆ. ಖಾಲಿ ಬಿಟ್ಟರೆ ಹೊರತು ದಲಿತರಿಗೆ ಸಚಿವ ಸ್ಥಾನ ಸಿಗಲಿಲ್ಲ. ಅಂಥವರು ಈಗ ದಲಿತರ ಉದ್ಧಾರದ ಬಗ್ಗೆ ಮಾತನಾಡುತ್ತಾರೆ ಎಂದು ಅವರು ಟೀಕಿಸಿದರು.

ಲೋಕಸಭೆ ಟಿಕೆಟ್‌ಗೆ ನಾನು ಪ್ರಬಲ ಆಕಾಂಕ್ಷಿ: ಪ್ರಮೋದ್‌ ಮಧ್ವರಾಜ್‌

ಸೌಜನ್ಯ ಪ್ರಕರಣದಲ್ಲಿ ನೊಂದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ಹೋರಾಟ ಶ್ರೀ ವೀರೇಂದ್ರ ಹೆಗ್ಗಡೆ ವಿರುದ್ಧ ಅಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ನಾನು ಒಳ್ಳೆಯ ಸ್ನೇಹಿತರು. ಈಗ ಅವರು ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಆಗಿದ್ದಾರೆ. ಅವರನ್ನು ಭೇಟಿ ಆಗುವುದು ತಪ್ಪಾ? ಎಂದು ಅವರು ಪ್ರಶ್ನಿಸಿದರು.

Latest Videos
Follow Us:
Download App:
  • android
  • ios